Homeಮುಖಪುಟಕಳ್ಳತನದ ಆರೋಪಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: ಜಮ್ಮು ಪೊಲೀಸರ ಕೃತ್ಯಕ್ಕೆ ತೀವ್ರ ಆಕ್ರೋಶ-ವೀಡಿಯೊ

ಕಳ್ಳತನದ ಆರೋಪಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: ಜಮ್ಮು ಪೊಲೀಸರ ಕೃತ್ಯಕ್ಕೆ ತೀವ್ರ ಆಕ್ರೋಶ-ವೀಡಿಯೊ

- Advertisement -
- Advertisement -

ಜಮ್ಮುವಿನ ಬಕ್ಷಿ ನಗರದಲ್ಲಿ ನಡೆದ ಘಟನೆಯೊಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳ್ಳತನದ ಆರೋಪಿಯೊಬ್ಬನನ್ನು ಅರೆ ನಗ್ನಗೊಳಿಸಿ, ಕೈಗಳಿಗೆ ಬೇಡಿ ಹಾಕಿ, ಚಪ್ಪಲಿ ಹಾರ ಹಾಕಿ ಪೊಲೀಸ್ ಜೀಪಿನ ಬಾನೆಟ್ ಮೇಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗಿದೆ. ಈ ಕೃತ್ಯದ ವಿರುದ್ಧ ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ವೈರಲ್ ಆದ ವಿಡಿಯೋದಲ್ಲಿ ಪೊಲೀಸರು ಆರೋಪಿಯನ್ನು ಜನನಿಬಿಡ ರಸ್ತೆಯಲ್ಲಿ ಮೆರವಣಿಗೆ ಮಾಡುತ್ತಿದ್ದಾಗ, ಸಾರ್ವಜನಿಕರು ಹರ್ಷೋದ್ಗಾರ ಮಾಡುತ್ತಿರುವುದು ಕಂಡುಬಂದಿದೆ. ವಾಹನದ ಬಾನೆಟ್ ಮೇಲೆ ಕುಳಿತಿದ್ದ ಆರೋಪಿ ತಲೆ ತಗ್ಗಿಸಿದ್ದನು, ಸುತ್ತಲೂ ಸಮವಸ್ತ್ರಧಾರಿ ಪೊಲೀಸರು ಇರುವುದನ್ನು ಕಾಣಬಹುದು. ಈ ದೃಶ್ಯಗಳು ಪೊಲೀಸರ ನಡವಳಿಕೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ಗಂಭೀರ ಕಳವಳಕ್ಕೆ ಕಾರಣವಾಗಿವೆ.

ಆರೋಪಿಯು ಮಾದಕ ದ್ರವ್ಯ ಸೇವಿಸಿದ್ದಾಗ, ಸ್ಥಳೀಯರೊಬ್ಬರು 40,000 ರೂ. ಕಳ್ಳತನ ಮಾಡಿದ ಆರೋಪದ ಮೇಲೆ ಆತನನ್ನು ಗುರುತಿಸಿದ್ದಾರೆ. ವಿಚಾರಣೆ ವೇಳೆ, ಆರೋಪಿಯು ದೂರುದಾರರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ನಂತರ, ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರೂ, ಪೊಲೀಸರು ಮತ್ತು ಸ್ಥಳೀಯ ಯುವಕರು ಬೆನ್ನಟ್ಟಿ ಆತನನ್ನು ಹಿಡಿದಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸುವ ಬದಲು, ಪೊಲೀಸರು ಆರೋಪಿಯನ್ನು ಸಾರ್ವಜನಿಕವಾಗಿ ಅವಮಾನಿಸಲು ಅವಕಾಶ ನೀಡಿದ್ದಾರೆ ಮತ್ತು ಅವರೇ ಅದರಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಯ ಕೈಗಳನ್ನು ಹಗ್ಗದಿಂದ ಕಟ್ಟಿ, ಚಪ್ಪಲಿ ಹಾರವನ್ನು ಕುತ್ತಿಗೆಗೆ ಹಾಕಿ, ಪೊಲೀಸ್ ವಾಹನದ ಬಾನೆಟ್ ಮೇಲೆ ಬಲವಂತವಾಗಿ ನಿಲ್ಲಿಸಿ ಇಡೀ ಪ್ರದೇಶದಲ್ಲಿ ಮೆರವಣಿಗೆ ಮಾಡಲಾಯಿತು. ಈ ಘಟನೆಯನ್ನು ಜಮ್ಮುವಿನ ಹಿರಿಯ ಪೊಲೀಸ್ ಅಧೀಕ್ಷಕರು (SSP) ಜೋಗಿಂದರ್ ಸಿಂಗ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕ್ರಮ ಪೊಲೀಸರಿಗೆ ಶೋಭೆ ತರುವಂತಹದ್ದಲ್ಲ ಎಂದು ಅವರು ಬಣ್ಣಿಸಿದ್ದಾರೆ.

ಘಟನೆಯ ಸತ್ಯಾಂಶಗಳನ್ನು ಪತ್ತೆಹಚ್ಚಲು ಪ್ರಾಥಮಿಕ ತನಿಖೆಗೆ ಆದೇಶಿಸಿರುವುದಾಗಿ ಅವರು ಘೋಷಿಸಿದರು. ಈ ತನಿಖೆಯನ್ನು ಸಿಟಿ ನಾರ್ತ್‌ನ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅವರಿಗೆ ವಹಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. “ಪೊಲೀಸ್ ಸಿಬ್ಬಂದಿಯ ಈ ಕ್ರಮ ಒಪ್ಪುವಂತದ್ದಲ್ಲ. ಸಂಪೂರ್ಣ ತನಿಖೆ ನಡೆಸಿ, ಕಂಡುಬಂದ ಅಂಶಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಎಸ್‌ಪಿ ಸಿಂಗ್ ತಮ್ಮ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವ್ಯಾಪಕ ಆಕ್ರೋಶ, ಕಾನೂನು ಕ್ರಮಕ್ಕೆ ಆಗ್ರಹ

ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣದ ಬಳಕೆದಾರರು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಡಿಜಿಪಿ ನಲಿನ್ ಪ್ರಭಾತ್ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು ಟ್ಯಾಗ್ ಮಾಡಿದ್ದಾರೆ. ಹಲವರು ಈ ವಿಡಿಯೋವನ್ನು “ಮಾನವ ಹಕ್ಕುಗಳ ಆಘಾತಕಾರಿ ಉಲ್ಲಂಘನೆ” ಎಂದು ಬಣ್ಣಿಸಿದ್ದು, ಕಾನೂನು ಪಾಲಕರು ಕಾನೂನು ಭಂಜಕರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತದಾದ್ಯಂತದ ಹನ್ನೊಂದು ಮಂದಿ ವಕೀಲರು ಈ ಘಟನೆ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರಿಗೆ ಪತ್ರ ಬರೆದಿದ್ದಾರೆ. ಜಮ್ಮುವಿನಲ್ಲಿ ನಡೆದ ಎರಡು ಘಟನೆಗಳ ಸ್ವಯಂಪ್ರೇರಿತ (suo motu) ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ. ಇವುಗಳಲ್ಲಿ ಗಂಗ್ಯಾಲ್ ಘಟನೆ ಮತ್ತು ಚಪ್ಪಲಿ ಹಾರ ಹಾಕಿ ಆರೋಪಿಯ ಸಾರ್ವಜನಿಕ ಮೆರವಣಿಗೆಯ ಘಟನೆಗಳು ಸೇರಿವೆ.

ಇದೇ ರೀತಿ, ಜೂನ್ 11ರಂದು ಗಂಗ್ಯಾಲ್‌ನಲ್ಲಿ, ಜಮ್ಮು ಪೊಲೀಸರು ಗುಂಡಿನ ದಾಳಿ ಪ್ರಕರಣದ ಮೂವರು ಕೈದಿಗಳ ಕೈಗಳಿಗೆ ಬೇಡಿ ಹಾಕಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದರು. ಸಾರ್ವಜನಿಕರ ಮುಂದೆ ಅವರನ್ನು ದೊಣ್ಣೆಗಳಿಂದ ಹೊಡೆದು, ಕಪಾಳಮೋಕ್ಷ ಮಾಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಈ ಘಟನೆಯ ವಿಡಿಯೋಗಳು ವ್ಯಾಪಕವಾಗಿ ಹರಿದಾಡಿದ್ದವು.

ವಕೀಲರು ಈ ಘಟನೆಗಳನ್ನು ಅಸಾಂವಿಧಾನಿಕ ಕೃತ್ಯಗಳು ಎಂದು ಬಣ್ಣಿಸಿದ್ದಾರೆ. “ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿರುವ ಈ ಘಟನೆಗಳು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಅವರು ಒತ್ತಿ ಹೇಳಿದ್ದಾರೆ.

ಕಾನೂನು ಜಾರಿಗೊಳಿಸುವ ಸಂಸ್ಥೆಗಳು ಸಾಂವಿಧಾನಿಕ ನಿಯಮಗಳನ್ನು ನಿರ್ಲಕ್ಷಿಸಿ, ಕಾನೂನುಬದ್ಧ ತನಿಖಾ ವಿಧಾನಗಳ ಬದಲು ಸಾರ್ವಜನಿಕ ಪ್ರದರ್ಶನದ ಮೂಲಕ ಶಿಕ್ಷೆ ನೀಡುತ್ತಿವೆ ಎಂದು ಪತ್ರದಲ್ಲಿ ಅಭಿಪ್ರಾಯಿಸಲಾಗಿದೆ. ಈ ರೀತಿಯ ಕೃತ್ಯಗಳು ಆರೋಪಿಗಳ ಘನತೆ ಮತ್ತು ಮೂಲಭೂತ ಹಕ್ಕುಗಳಿಗೆ ಸರಿಪಡಿಸಲಾಗದ ಹಾನಿಯನ್ನುಂಟುಮಾಡುತ್ತವೆ ಎಂದು ಸಹಿ ಮಾಡಿದ ವಕೀಲರು ಪ್ರತಿಪಾದಿಸಿದ್ದಾರೆ.

ಇಂತಹ ಕೃತ್ಯಗಳು “ನ್ಯಾಯ ದೊರಕಿಸಿಕೊಡುವ ಬದಲು, ಪ್ರತೀಕಾರದ ಪ್ರದರ್ಶನದಂತೆ” ಕಾಣಿಸುತ್ತವೆ ಎಂಬ ಆತಂಕವನ್ನು ಪತ್ರದಲ್ಲಿ ವ್ಯಕ್ತಪಡಿಸಲಾಗಿದೆ. ಇಂತಹ ನಡವಳಿಕೆಗೆ ಅವಕಾಶ ನೀಡಬಾರದು ಎಂದು ಎಚ್ಚರಿಸಲಾಗಿದೆ.  ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಯುವ ಮೊದಲೇ ಶಿಕ್ಷೆ ನೀಡಿದರೆ ನ್ಯಾಯಾಂಗದ ಪರಿಶೀಲನೆಯನ್ನು ತಪ್ಪಿಸಿ, ಕಾನೂನು ಪ್ರಕ್ರಿಯೆಯನ್ನು ದುರ್ಬಲಗೊಳಿಸಿದಂತಾಗುತ್ತದೆ ಎಂದು ವಕೀಲರು ತಿಳಿಸಿದ್ದಾರೆ.

ಈ ರೀತಿಯ ವ್ಯಕ್ತಿಗಳು ನಂತರ ನಿರಪರಾಧಿ ಎಂದು ಸಾಬೀತಾದರೆ, ಪೊಲೀಸರು ಚಿತ್ರೀಕರಿಸಿದ ವಿಡಿಯೋಗಳು ಮತ್ತು ಅವರ ಕೃತ್ಯಗಳು ರಾಜ್ಯದ ವಿರುದ್ಧವೇ ಸಾಕ್ಷಿಯಾಗಬಹುದು ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ. ಇಂತಹ ಸನ್ನಿವೇಶವು ಪರಿಹಾರಕ್ಕಾಗಿ ದೊಡ್ಡ ಮೊತ್ತದ ಹಕ್ಕು ಹಾಗೂ ನಾಗರಿಕ/ಕ್ರಿಮಿನಲ್ ಕಾನೂನು ಕ್ರಮಗಳಿಗೆ ಕಾರಣವಾಗಬಹುದು. ಇದು ನ್ಯಾಯ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಸಂಪೂರ್ಣವಾಗಿ ಹಾಳುಮಾಡುತ್ತದೆ ಎಂದು ಒತ್ತಿ ಹೇಳಿದ್ದಾರೆ.

ಅರ್ಜಿದಾರರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ಈ ಎರಡೂ ಘಟನೆಗಳ ಬಗ್ಗೆ ತಕ್ಷಣವೇ ಸ್ವಯಂಪ್ರೇರಿತ ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕರಿಗೆ (DGP) ಈ ಕುರಿತು ತಕ್ಷಣ ವಿವರಣೆ ನೀಡುವಂತೆ ನೋಟಿಸ್ ನೀಡುವಂತೆ ಮನವಿ ಮಾಡಿದ್ದಾರೆ.

ಅವರು ಇವುಗಳನ್ನೂ ಒತ್ತಾಯಿಸಿದ್ದಾರೆ:

  • ಘಟನೆಗಳ ಬಗ್ಗೆ ಸ್ವತಂತ್ರ ತನಿಖೆ ನಡೆಯಬೇಕು.
  • ಸಂತ್ರಸ್ತರಿಂದ ಯಾವುದೇ ಬೆದರಿಕೆಯಿಲ್ಲದೆ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕು.
  • ಭಾಗಿಯಾಗಿರುವ ಎಲ್ಲ ಅಧಿಕಾರಿಗಳ ವಿರುದ್ಧ ಶಿಸ್ತುಬದ್ಧ ಮತ್ತು ಕಾನೂನು ಕ್ರಮಗಳನ್ನು ಶಿಫಾರಸು ಮಾಡಬೇಕು.
  • ಮುಂದೆ ಇಂತಹ ಉಲ್ಲಂಘನೆಗಳು ನಡೆಯದಂತೆ ತಡೆಯಲು, ಎಲ್ಲ ಪೊಲೀಸ್ ಸಿಬ್ಬಂದಿಗೆ “ಬಂಧಿತರ ಹಕ್ಕುಗಳು, ಮಾನವ ಘನತೆ ಮತ್ತು ಕಾನೂನುಬದ್ಧ ಕಾರ್ಯವಿಧಾನಗಳ” ಕುರಿತು ತರಬೇತಿ ನೀಡಬೇಕು.

ಲಂಗೇಟ್ ಶಾಸಕ ಶೇಖ್ ಖುರ್ಷೀದ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು “ಮಾನವ ಘನತೆಗೆ ಮಾಡಿದ ಅವಮಾನ ಮಾತ್ರವಲ್ಲದೆ, ಅಧಿಕಾರದ ಸ್ಪಷ್ಟ ದುರುಪಯೋಗ” ಎಂದು ಅವರು ಬಣ್ಣಿಸಿದ್ದಾರೆ.

“ಯಾವ ಅಪರಾಧವೇ ಇರಲಿ, ನಮ್ಮ ನ್ಯಾಯ ವ್ಯವಸ್ಥೆಯು ಕಾನೂನಿನ ಆಡಳಿತದಿಂದ ನಡೆಯಬೇಕು, ಹೊರತು ಜನರ ಭಾವನೆಗಳು ಅಥವಾ ಸಾರ್ವಜನಿಕವಾಗಿ ಅವಮಾನ ಮಾಡುವುದರಿಂದಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಪ್ಪಿತಸ್ಥರಿಗೆ ತಕ್ಷಣ ಹೊಣೆಗಾರಿಕೆ ನಿಗದಿಪಡಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ ಶಾಸಕರು, “ಕಾನೂನು ಜಾರಿಗೊಳಿಸುವ ಸಂಸ್ಥೆಗಳು ಎಂದಿಗೂ ಪ್ರದರ್ಶನಕ್ಕಾಗಲಿ ಅಥವಾ ಅವಮಾನ ಮಾಡುವುದಕ್ಕಾಗಲಿ ಬಳಕೆಯಾಗಬಾರದು” ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹಾಮಿ ಕೂಡ ಪೊಲೀಸರ ವರ್ತನೆಯನ್ನು ಖಂಡಿಸಿದ್ದಾರೆ. “ಪೊಲೀಸರು ಜನಸಮೂಹವಲ್ಲ. ಅವರು ಕಾನೂನಿನ ರಕ್ಷಕರು. ಅವರ ಕೆಲಸ ತನಿಖೆ ನಡೆಸುವುದು ಮತ್ತು ನ್ಯಾಯವನ್ನು ಎತ್ತಿಹಿಡಿಯುವುದು, ಸಾರ್ವಜನಿಕವಾಗಿ ಶಿಕ್ಷೆ ನೀಡುವುದಲ್ಲ” ಎಂದು ಅವರು ಹೇಳಿದ್ದಾರೆ.

ರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...