Homeಕರ್ನಾಟಕದೇವನಹಳ್ಳಿಯಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದ ಆಕ್ರೋಶ

ದೇವನಹಳ್ಳಿಯಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ಬುಧವಾರ ನಡೆದ ‘ದೇವನಹಳ್ಳಿ ಚಲೋ’ ಪ್ರತಿಭಟನೆಯನ್ನು ಪೊಲೀಸರು ಹತ್ತಿಕ್ಕಿದ್ದು, ಪ್ರತಿಭಟನಾನಿರತ ಹೋರಾಟಗಾರರು ಮತ್ತು ರೈತರನ್ನು ಅಮಾನವೀಯವಾಗಿ ಎಳೆದಾಡಿ ಬಂಧಿಸಿದ್ದರು. ಸರ್ಕಾರದ ಈ ನಡೆ ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಇಂದು ಸರ್ಕಾರದ ವಿರುದ್ಧ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಪ್ಪರದಕಲ್ಲಿನ ಬಳಿಯಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ, ಕಾರ್ಮಿಕ, ಪ್ರಗತಿಪರ ಮತ್ತು ರೈತ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬಲವಂತದ ಭೂಸ್ವಾಧೀನ ವಾಪಸ್‌ ಪಡೆಯಬೇಕು ಹಾಗೂ ಪ್ರತಿಭಟನಾನಿರತರನ್ನು ಬಂಧಿಸಲು ಹಿಂಸಾತ್ಮಕ ದಾರಿ ಬಳಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದರು.

ಪೊಲೀಸರಿಂದ ನಿನ್ನೆ ದೌರ್ಜನ್ಯಕ್ಕೆ ಒಳಗಾಗಿದ್ದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್, ನಂಜಪ್ಪ, ರಮೇಶ್ ಚೀಮಾಚನಹಳ್ಳಿ, ಮಾರೇಗೌಡ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕರಾದ ಕೊರಳೂರು ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.

ಬಳ್ಳಾರಿ

ದೇವನಹಳ್ಳಿಯಲ್ಲಿ ಶಾಂತಿಯುತ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಗಳು ದಬ್ಬಾಳಿಕೆಯಿಂದ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ( ಸಮಿತಿ ಅಂಬೇಡ್ಕರ್ ವಾದ) ಬಳ್ಳಾರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ

ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ನಡೆಸುತ್ತಿದ್ದ ಹೋರಾಟದಲ್ಲಿ ರೈತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ ಬಂಧಿಸಿರುವ ಕ್ರಮವನ್ನು ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಂಧಿಸಿರುವ ಮುಖಂಡರು ಹಾಗೂ ಹೋರಾಟಗಾರರನ್ನು ಬೇಷರತ್ ಆಗಿ ಬಿಡುಗಡೆ ಮಾಡಬೇಕು. ಡಿಸಿಪಿ ಸಜಿತ್‌ರವರ ಮೇಲೆ‌ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯಲ್ಲಿ ಬಲವಂತದ ಭೂಸ್ವಾದೀನದ ವಿರುದ್ಧ ಹಮ್ಮಿಕೊಂಡಿದ್ದ ದೇವನಹಳ್ಳಿ ಚಲೋ ಹೋರಾಟದಲ್ಲಿ ರೈತರು ಮತ್ತು ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸಿ ಬಂಧಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐ(ಎಂ)ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿತ್ತು. ಸಿಪಿಐ(ಎಂ) ಬೆಂಗಳೂರು ಉತ್ತರ-ದಕ್ಷಿಣ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್, ಸಿಪಿಐಎಂ ರಾಜ್ಯ ನಾಯಕರಾದ ಯು.ಬಸವರಾಜ, ಗೋಪಾಲಕೃಷ್ಣ ಅರಳಹಳ್ಳಿ, ಕೆ.ಮಹಾಂತೇಶ್, ಉತ್ತರ ಜಿಲ್ಲಾ ಕಾರ್ಯದರ್ಶಿ ಎನ್.ಪ್ರತಾಪ್ ಸಿಂಹ, ರಾಜ್ಯ ಸಮಿತಿ ಸದಸ್ಯರಾದ ಯಶವಂತ್ ಹಾಗೂ ಇತರರು ಭಾಗವಹಿಸಿ ಮಾತನಾಡಿದರು.

ಹೊಸಕೋಟೆ

ದಾವಣಗೆರೆ

ಮಂಡ್ಯ

ಹಾಗಲಗಂಚಿ-ಶೃಂಗೇರಿ

ಆಳಂದ

ಕಂಪ್ಲಿ

ಕುಡತಿನಿ

ಕುರಗೋಡು

ಚಿಕ್ಕಬಳ್ಳಾಪುರ

ತುಮಕೂರು

ಪಾವಗಡ

ಬಾಗೇಪಲ್ಲಿ

ಹಾಸನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಸ್ವಾಧೀನಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಸರ್ಕಾರದ ನಿರ್ಧಾರ ವಿರೋಧಿಸಿ ಮೂರೂವರೆ ವರ್ಷಗಳಿಂದ ರೈತರು ಹೋರಾಟ ನಡೆಸಿತ್ತಿದ್ದಾರೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮತ್ತು ಕೆಐಎಡಿಬಿ ನಡುವಿನ ಸಂಘರ್ಷ ನಿರ್ಣಾಯ ಹಂತಕ್ಕೆ ತಲುಪಿದ್ದು, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ಬುಧವಾರ (ಜೂ.25) ದೇವನಹಳ್ಳಿ ಚಲೋ ಹೋರಾಟಕ್ಕೆ ಕರೆ ನೀಡಿತ್ತು.

ಚನ್ನರಾಯಪಟ್ಟಣ ರೈತರ ಬಂಧನ: ಸಿಎಂ ಭೇಟಿಗೆ ಆಗಮಿಸಿದ್ದ ನಟ ಪ್ರಕಾಶ್‌ ರಾಜ್‌ ಅವರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...