ದಕ್ಷಿಣ ಕೋಲ್ಕತ್ತಾದ ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಆರೋಪದ ಮೇಲೆ ಪೊಲೀಸರು ಮೂವರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ದಿ ಹಿಂದೂ ವರದಿ ಮಾಡಿದೆ. ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನ ಆವರಣದೊಳಗೆ ಬುಧವಾರ ಸಂಜೆ 7.30 ರಿಂದ ರಾತ್ರಿ 10.50 ರ ನಡುವೆ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ. ಪಶ್ಚಿಮ ಬಂಗಾಳ | ಕಾನೂನು
ಬಂಧಿತ ಆರೋಪಿಗಳನ್ನು 30 ವರ್ಷದ ಮನೋಜಿತ್ ಮಿಶ್ರಾ, 20 ವರ್ಷದ ಪ್ರಮಿತ್ ಮುಖರ್ಜಿ ಮತ್ತು 19 ವರ್ಷದ ಜೈಬ್ ಅಹ್ಮದ್ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳಲ್ಲಿ ಒಬ್ಬ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಉಳಿದವರು ಕಾಲೇಜಿನಲ್ಲಿ ಓದುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಯುವತಿಯ ದೂರಿನ ಆಧಾರದ ಮೇಲೆ ಕಸ್ಬಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಲ್ಲಿಸಿದ ನಂತರ ಅವರನ್ನು ಬಂಧಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.
ಆರೋಪಿಗಳಲ್ಲಿ ಮಿಶ್ರಾ ಮತ್ತು ಅಹ್ಮದ್ ಅವರನ್ನು ಗುರುವಾರ ತಲ್ಬಗನ್ ಕ್ರಾಸಿಂಗ್ ಬಳಿಯ ಸಿದ್ಧಾರ್ಥ ಶಂಕರ್ ಶಿಶು ರಾಯ್ ಉದ್ಯಾನ್‌ನಲ್ಲಿ ಬಂಧಿಸಲಾಯಿತು, ಆದರೆ ಮುಖರ್ಜಿ ಅವರನ್ನು ಶುಕ್ರವಾರ ಅವರ ನಿವಾಸದಿಂದ ಬಂಧಿಸಲಾಯಿತು ಎಂದು ವರದಿ ಹೇಳಿದೆ.
ಮೂವರೂ ಆರೋಪಿಗಳನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಲ್ಕತ್ತಾ ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾದ ಯುವತಿಯನ್ನು ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.
ಸಾಕ್ಷಿಗಳನ್ನು ಪರೀಕ್ಷಿಸಲಾಯಿತು ಮತ್ತು ಅವರ ಹೇಳಿಕೆಗಳನ್ನು ದಾಖಲಿಸಲಾಯಿತು ಎಂದು ಪೊಲೀಸ್ ಅಧಿಕಾರಿ ದಿ ಹಿಂದೂಗೆ ತಿಳಿಸಿದ್ದು, ಅಪರಾಧ ನಡೆದ ಸ್ಥಳವನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಕಾಯ್ದಿರಿಸಲಾಗಿದೆ ಎಂದು ಹೇಳಿದ್ದಾರೆ.
2024ರ ಆಗಸ್ಟ್ ತಿಂಗಳಲ್ಲಿ ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಸುಮಾರು ಹತ್ತು ತಿಂಗಳ ನಂತರ ಈ ಅತ್ಯಾಚಾರ ನಡೆದಿದೆ. ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಪತ್ತೆಯಾಗಿತ್ತು. ಈ ಘಟನೆಯು ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಪಶ್ಚಿಮ ಬಂಗಾಳ | ಕಾನೂನು
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಹಾರಾಷ್ಟ್ರ | ಹಿಂದಿ ಹೇರಿಕೆಯ ವಿರುದ್ಧ ಒಂದಾಗಲಿರುವ ರಾಜ್, ಉದ್ಧವ್ ಠಾಕ್ರೆ!
ಮಹಾರಾಷ್ಟ್ರ | ಹಿಂದಿ ಹೇರಿಕೆಯ ವಿರುದ್ಧ ಒಂದಾಗಲಿರುವ ರಾಜ್, ಉದ್ಧವ್ ಠಾಕ್ರೆ!

