Homeಮುಖಪುಟಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಇಂದೂಧರ ಹೊನ್ನಾಪುರ ಹೇಳಿದರು.

13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂಡವಾಳಶಾಹಿಗಳ ಪರ ನಿಲ್ಲದೆ, ಬಲವಂತದ ಭೂಸ್ವಾಧೀನ ಹಿಂಪಡೆಬೇಕು” ಎಂದು ಆಗ್ರಹಿಸಿದರು.

“ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು, ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹರಿಸುವ ಬದಲು ಈ ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿದೆ” ಎಂದರು.

“ಇವತ್ತು ರೈತರ ವಿರುದ್ಧ ನಿಂತಿರುವ ಇದೇ ಸಿದ್ದರಾಮಯ್ಯ ಅವರು, ಅಂದು ರೈತರ ಪರ ಮಾತಾಡಿದ್ರು. ಪದೇಪದೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀವಿ ಎಂದು ಹೇಳ್ತಿದ್ದೀರಿ; ಈ ಮಾತನ್ನೂ ಉಳಿಸಿಕೊಳ್ಳಿ. ಕಾರ್ಪೊರೇಟ್‌ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ. ನೀವು ಜನಪರವಾಗಿಯೇ ಇರಿ. ಈ ಕಾರ್ಪೊರೇಟ್ ಸೆಕ್ಟರ್‌ಗಳು ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಎಂದರೆ ಕಾರ್ಖಾನೆಗಳನ್ನ ಮಾತ್ರ ಕಟ್ಟೊದಲ್ಲ, ಜನರೆಲ್ಲರ ನೆಮ್ಮದಿ.. ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ ಎಂದು ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ, ಅವರು ಕೇಳಿದ ಭೂಮಿ ಕೊಡಬೇಕಾ ಎಂದು ನಾನು ಸಚಿವರನ್ನು ಕೇಳ್ತೀನಿ. ನಾಳೆ ಇದೇ ಕಾರ್ಪೊರೇಟ್ ಕಂಪನಿಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ? ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇಂದು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ.. ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ.. ನಮ್ಮನ್ನ ಉಳ್ಳವರ ಮನೆಗೆ ಜೀತಗಾರರನ್ನಾಗಿಸಬೇಡಿ, ಅವರ ಬಾಗಿಲು ಕಾಯುವ ಹಾಳುಗಳನ್ನಾಗಿಸಬೇಡಿ. ನಿಮಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಈ ನಿರ್ಧಾರದಿಂದ ಹಿಂದೆ ಸರಿಯಿರಿ” ಎಂದು ಅವರು ಇಂದೂಧರ ಅವರು ಆಗ್ರಹಿಸಿದರು.

“ಅಭಿವೃದ್ಧಿ ಎಂದರೆ ಎಲ್ಲ ಜನರ ಪರವಾಗಿರೋದು, ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನಾವು ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗವಾಗಬೇಡಿ. ಸಿದ್ದರಾಮಯ್ಯ ಅವರೇ ನೀವು ವಿವೇಚನೆ ಹೊಂದಿರುವವರು ಎಂದು ನಾವು ನಂಬಿದ್ದೇವೆ.. ನೀವು ಸರ್ವರ ಒಳಿತು ಮತ್ತು ಈ ನೆಲ-ಜಲವನ್ನ ಉಳಿಸುವುದು ಅನಿವಾರ್ಯ. ನಿಮಗೆ ಒತ್ತಡ ಇದೆ ಎಂಬುದು ಗೊತ್ತು. ಆದರೂ, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು” ಎಂದರು.

ನಿಮ್ಮನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಹುಟ್ಟುತ್ತಿದೆ

“ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ.
ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಫ್ರೀಡಂ ಪಾರ್ಕಿನಲ್ಲಿ ಹುಟ್ಟುತ್ತಿದೆ.
ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಇಲ್ಲಿ ಮೊಳಕೆ ಹೊಡೆಯುತ್ತಿವೆ. ಕರ್ನಾಟಕದ ಎಲ್ಲ ಜನ ಚಳವಳಿಗಳು, ಕಾರ್ಮಿಕರು, ರೈತರು ಎಲ್ಲರೂ ಕರ್ನಾಟಕದ ಮೂಲೆ ಮೂಲೆಯಲ್ಲು ಈ ಹೋರಾಟಕ್ಕೆ ಜೊತೆಯಾಗ್ತಿದ್ದಾರೆ.. ಇದು ಎಚ್ಚರಿಕೆ, ಈ ವಿಚಾರದಲ್ಲಿ ನೀವು ರೈತಪರ ನಿಲುವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಂಬಿದ್ದೇವೆ, ಆ ನಂಬಿಕೆಯನ್ನು ಉಳಿಸಿಕೊರ್ಳಳುವ ಮೂಲಕ ಒಳ್ಳೆ ತೀರ್ಮಾನವನ್ನು ತೆಗೆದುಕೊಂಡು ನಮಗೆ ಇಲ್ಲಿಂದ ಮುಕ್ತಿ ಕೊಡಿ” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕರಾದ ವಿ.ನಾಗರಾಜ, ಸಿದ್ದನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಚನ್ನರಾಯಪಟ್ಟಣ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...