Homeಕರ್ನಾಟಕ'ಬಂಡೆ ರೀತಿ ನಮ್ಮ ಸರ್ಕಾರ ಭದ್ರ': ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ, ಡಿಸಿಎಂ

‘ಬಂಡೆ ರೀತಿ ನಮ್ಮ ಸರ್ಕಾರ ಭದ್ರ’: ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ, ಡಿಸಿಎಂ

- Advertisement -
- Advertisement -

“ಸರ್ಕಾರ ಬಿದ್ದೋಗುತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ಆದರೆ, ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಭದ್ರವಾಗಿರುತ್ತೆ. 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, “ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೋಟಿ ರೂಪಾಯಿ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ? ಎಂದು ಪ್ರಶ್ನಿಸಿದರು.

ಸೋತ ಗಿರಾಕಿಗಳು ಸರ್ಕಾರ ಬಿದ್ದೋಗುತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು, ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ನಾಡಿನ ಜನರಿಗೆ ಉತ್ತರಿಸಬೇಕು ಎಂದರು.

ಕೃಷಿ ಪ್ರಗತಿಗಾಗಿ ವರ್ಷಕ್ಕೆ 19 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ ಎಂದ ಸಿಎಂ, 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆಅರ್‌ಎಸ್‌ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂ.ಡಿಗೆ ಸೂಚನೆ ನೀಡಿದರು.

ಕೆಆರ್‌ಎಸ್‌ನ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 ಟಿಎಂಸಿ ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ ‘ಸಿದ್ದರಾಮಯ್ಯ ಕಾಲ್ಗುಣ ಚೆನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ಅಣಕಿಸಿದರು.

ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ 3,000 ಕೋಟಿ ಹಣ ರೂಪಾಯಿ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಟ್ಟಿರಲಿಲ್ಲ ಎಂದು ಎಂದರು.

ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಕಾಲೆಳೆದರು.

ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ? ಹಾಗಾಗಿ, ಬಿಜೆಪಿ, ಜೆಡಿಎಸ್‌ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.

ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ, ಡಿಸಿಎಂ

ಕೆಆರ್‌ಎಸ್. ಜಲಾಶಯಕ್ಕೆ ಬಾಗಿನ ಅರ್ಪಿಸಲು ಸೋಮವಾರ ಬೆಂಗಳೂರಿನಿಂದ ಸಿಎಂ, ಡಿಸಿಎಂ ಒಟ್ಟಿಗೆ ಒಂದೇ ವಿಮಾನದಲ್ಲಿ ಮೈಸೂರಿನ‌ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಕೈ ಕೈ ಹಿಡಿದುಕೊಂಡು ನಾವಿಬ್ಬರೂ ಒಟ್ಟಿಗೆ ಇದ್ದೇವೆ ಎಂಬ ಸ್ಪಷ್ಟ ಸಂದೇಶ ರವಾನಿಸಿದರು.

ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...