Homeಕರ್ನಾಟಕಐಪಿಎಸ್ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದತಿ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ: ನಾಳೆ ವಿಚಾರಣೆ

ಐಪಿಎಸ್ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದತಿ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ: ನಾಳೆ ವಿಚಾರಣೆ

- Advertisement -
- Advertisement -

ಹಿರಿಯ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ರದ್ದುಪಡಿಸಿರುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಆದೇಶವನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬುಧವಾರ(ಜು.2)  ಪ್ರಶ್ನಿಸಿದೆ.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಪ್ರಕರಣವನ್ನು ನ್ಯಾಯಮೂರ್ತಿಗಳಾದ ಎಸ್‌ ಜಿ ಪಂಡಿತ್‌ ಮತ್ತುಟಿ ಎಂ.ನದಾಫ್‌ ಅವರ ವಿಭಾಗೀಯ ಪೀಠದ ಮುಂದೆ ಉಲ್ಲೇಖಿಸಿ, ತುರ್ತಾಗಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ಕೋರಿದರು.

ಆಗ ಪೀಠವು ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸರ್ಕಾರಕ್ಕೆ ಸೂಚಿಸಿ, ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿತು.

ಪೊಲೀಸ್‌ ಮಹಾನಿರ್ದೇಶಕರ ವರದಿ ಆಧರಿಸಿ, ಮೇಲ್ನೋಟಕ್ಕೆ ಕರ್ತವ್ಯ ಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಿಎಟಿಗೆ ಮುಚ್ಚಿದ ಲಕೋಟೆಯಲ್ಲಿ ಜೂನ್‌ 3 ಮತ್ತು 4ರಂದು ನಡೆದಿರುವ ಘಟನೆಯ ಮಾಹಿತಿಯನ್ನು ಸಲ್ಲಿಕೆ ಮಾಡಲಾಗಿದೆ. ಅದನ್ನು ಪರಿಗಣಿಸದೇ ಆದೇಶ ಮಾಡಿದೆ. ಮ್ಯಾಜಿಸ್ಟೀರಿಯಲ್‌ ತನಿಖೆ ಮತ್ತು ನ್ಯಾಯಾಂಗ ತನಿಖಾ ಆಯೋಗ ರಚಿಸಿರುವುದನ್ನು ಸಿಎಟಿಯು ತಪ್ಪಾಗಿ ಅರ್ಥೈಸಿದ್ದು, ಸರ್ಕಾರವು ಕಾಲ್ತುಳಿತಕ್ಕೆ ಯಾರು ಕಾರಣ ಎಂಬುದನ್ನು ಇನ್ನಷ್ಟೇ ಪತ್ತೆಹಚ್ಚಬೇಕಿದೆ ಎಂಬುವುದಾಗಿ ಹೇಳಿದೆ ಎಂದು ನಿರ್ಧಾರಕ್ಕೆ ಬಂದಿದೆ ಎಂದು ಸಿಎಟಿ ಆದೇಶಕ್ಕೆ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಘಟನೆಯ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ಕೇಂದ್ರ ಸರ್ಕಾರವು ವಿಕಾಸ್‌ ಕುಮಾರ್‌ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಆದೇಶಿಸಿದೆ. ಇದು ಸಿಎಟಿಯಲ್ಲಿ ತೀರ್ಪು ಕಾಯ್ದಿರಿಸಿದ ಬಳಿಕ ನಡೆದಿರುವ ಘಟನೆಯಾಗಿದ್ದು, ಅದನ್ನು ಮೆಮೊದ ಮೂಲಕ ಸಿಎಟಿ ಗಮನಕ್ಕೆ ತರಲಾಗಿತ್ತು. ಇದನ್ನೂ ಸಿಎಟಿಯು ಪರಿಗಣಿಸಿಲ್ಲ. ಈ ಹಂತದಲ್ಲಿ ಅಧಿಕಾರಿಗಳ ಅಮಾನತನ್ನು ತೆರವು ಮಾಡುವುದರಿಂದ ತನಿಖೆಯ ಮೇಲೆ ಪರಿಣಾಮ ಉಂಟಾಗುತ್ತದೆ. ಇದು ಸಾಕ್ಷಿಗಳ ಪರಿಶೀಲನೆಗೆ ಸಮಸ್ಯೆ ಉಂಟು ಮಾಡಲಿದ್ದು, ಸಾಕ್ಷ್ಯ ತಿರುಚುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಧಿಕಾರಿಗಳನ್ನು ಸೇವೆಯಿಂದ ಹೊರಗಿಡುವುದು ಅಗತ್ಯವಾಗಿದೆ ಎಂದು ಎಜಿ ಪೀಠಕ್ಕೆ ವಿವರಿಸಿದ್ದಾರೆ.

ಜೂನ್ 4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. ಈ ದುರಂತಕ್ಕೆ ಹೊಣೆಮಾಡಿ ಸರ್ಕಾರ ಅಮಾನತು ಮಾಡಿದ ಪೊಲೀಸ್ ಅಧಿಕಾರಿಗಳಲ್ಲಿ ವಿಕಾಸ್ ಕುಮಾರ್ ಕೂಡ ಒಬ್ಬರು.

ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಭದ್ರತಾ ಉಸ್ತುವಾರಿ ವಹಿಸಿದ್ದ ವಿಕಾಸ್ ಕುಮಾರ್ ಅವರನ್ನು ಬೇಜವ್ದಾರಿಯ ಕಾರಣ ನೀಡಿ ಸರ್ಕಾರ ಅಮಾನತು ಮಾಡಿತ್ತು.

ಇದನ್ನು ಪ್ರಶ್ನಿಸಿ ವಿಕಾಸ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಸರ್ಕಾರದ ಆದೇಶ ರದ್ದುಗೊಳಿಸಿ ಆದೇಶಿಸಿದೆ. ಅಲ್ಲದೆ, ಅವರನ್ನು ಮೂಲಸ್ಥಾನಕ್ಕೆ ಮರು ನೇಮಿಸಲು ಮತ್ತು ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ಸೂಚಿಸಿದೆ.

Courtesy : barandbench.com

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...