Homeಕರ್ನಾಟಕವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

ವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

- Advertisement -
- Advertisement -

ಚಿಕ್ಕಬಳ್ಳಾಪುರ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 48 ವಿಷಯಗಳು ಕುರಿತು ಚರ್ಚೆ ಮಾಡಲಾಗಿದ್ದು, 3400 ಕೋಟಿ ರೂಪಾಯಿ ಮೊತ್ತ ಮಂಜೂರು ಮಾಡಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ; ಒಟ್ಟು 48 ವಿಷಯಗಳು ಚರ್ಚೆಯಾಗಿದೆ. 3400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ” ಎಂದರು.

“2050 ಕೋಟಿ ಬೆಂಗಳೂರು ಕಂದಾಯ ಭಾಗಕ್ಕೇ ಕೊಟ್ಟಿದ್ದೇವೆ, ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆಯಾಗಿದೆ. ಈ ಯೋಜನೆಯಿಂದ 24.1 ಟಿಎಂಸಿ ನೀರಿ ಸಿಗಲಿದ್ದು, ಕುಡಿಯುವ ನೀರಿಗೆ 14 ಟಿಎಂಸಿ ಬೇಕಾಗಿದೆ. ಆದ್ದರಿಂದ, ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಕಾಮಗಾರಿ ಮುಗಿಸಲು ಸಂಪುಟ ಸಭೆ ತೀರ್ಮಾನ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸುತ್ತೇವೆ” ಎಂದು ಭರವಸೆ ನೀಡಿದರು.

“9807 ಕೋಟಿ ಮೊತ್ತದಲ್ಲಿ ಕೈಗೊಂಡ ಗ್ರಾವಿಟಿ ಮುಖ್ಯ ಕೆನಲ್‌ನ‌ ಕೆಲಸ ಶೇ.85 ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ರೂಪಾಯಿ ಬೇಕಾಗಿದೆ. ನಮ್ಮಲ್ಲಿ ಉಳಿದಿರುವುದು 6100 ಕೋಟಿ ರೂಪಾಯಿ ಮಾತ್ರ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡಲಾಗುವುದು” ಎಂದರು.

“ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ. ಇದರ ಜೊತೆಗೆ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಐಎಎಸ್‌, ಐಆರ್‌ಎಸ್‌, ಐಪಿಎಸ್‌ ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ರೂಪಾಯಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು” ಎಂದು ಘೋಷಿಸಿದರು.

“ಬೆಂಗಳೂರು ಕೇಂದ್ರ ವಿವಿಗೆ ‘ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ’ ಎಂದು ಹೆಸರಿಡಲು ತೀರ್ಮಾನ ಮಾಡಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಇಲ್ಲದ ಹೊಸ ತಾಲ್ಲೂಕುಗಳಲ್ಲಿ ಸಿಚ್‌ಸಿಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ” ಎಂದರು.

“ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ತಾಲ್ಲೂಕು, ಎಂದು ಬಾಗೇಪಲ್ಲಿಗೆ ಭಾಗ್ಯನಗರ ಎಂದು ಹೆಸರಿಡಲಾಗುವುದು. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು. ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ” ಎಂದು ಮುಖ್ಯಮಂತ್ರಿಗಳು ಹೇಳಿದರು.

ಸಚಿವ ಸಂಪುಟ ಸಭೆಯ ಇತರೆ ಘೋಷಣೆಗಳು:

ಈ ಸಚಿವ ಸಂಪುಟ ಸಭೆಯಲ್ಲಿ 3400 ಕೋಟಿ ರೂಗಳಿಗೆ ಅನುಮೋದನೆ ನೀಡಲಾಗಿದ್ದು, ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ.

ಕುಡಿಯುವ ನೀರಿನ ಯೋಜನೆಗಳು, ಅದರಲ್ಲೂ ಮುಖ್ಯವಾಗಿ ಎತ್ತಿನ ಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು.

ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ಶಿಕ್ಷಣಕ್ಕೆ- 1627.25 ಕೋಟಿ ರೂ ನಿಗದಿ ಮಾಡಲಾಗಿದ್ದು, ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಲಾಗಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ. ನೀರಾವರಿ ಯೋಜನೆಗಳಿಗೆ – 1154 ಕೋಟಿ, 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ. ಇದರ ಜೊತೆಗೆ, ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ಘೋಷಣೆ ಮಾಡಲಾಗಿದೆ.

ಒಟ್ಟಾರೆ 123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಲಾಗಿದೆ. ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮೀಕರಣ ಮಾಡಲು ಸರ್ಕಾರ ತೀರ್ಮಾನಿಸಿದೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...