Homeಕರ್ನಾಟಕಸಿಎಸ್‌ ಶಾಲಿನಿ ರಜನೀಶ್ ಕುರಿತು ಮಾನಹಾನಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ದೂರು

ಸಿಎಸ್‌ ಶಾಲಿನಿ ರಜನೀಶ್ ಕುರಿತು ಮಾನಹಾನಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ದೂರು

- Advertisement -
- Advertisement -

ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಜುಲೈ 1ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ವಿಧಾನ ಪರಿಷತ್​ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಇತರ ಪ್ರಮುಖರು ಉಪ ಪೊಲೀಸ್​ ಆಯುಕ್ತ (ವಿಧಾನಸೌಧ ಭದ್ರತೆ) ಎಂ. ಎನ್​ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿದ್ದರು. ಆಗ ಪರಿಷತ್​ ವಿಪಕ್ಷ ಮುಖ್ಯ ಸಚೇತಕರೂ ಆಗಿರುವ ಎನ್.​ ರವಿಕುಮಾರ್ ಶಾಲಿನಿ ರಜನೀಶ್ ಅವರ ಕುರಿತು ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಮನೋಹರ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ರವಿಕುಮಾರ್ ಬಳಸಿರುವ ಪದಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇವೆ. ಈ ಹಿಂದೆ ಸಿ.ಟಿ ರವಿ ಸದನದಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ತಿಂಗಳ ಹಿಂದೆ ರವಿ ಕುಮಾರ್ ಕಲಬುರಗಿ ಡಿಸಿ ವಿರುದ್ದ ಹೇಳಿಕೆ ಕೊಟ್ಟು ಹೈಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದ್ದರು ಎಂದಿದ್ದಾರೆ.

ಇವರ ಈ ವರ್ತನೆಗಳು ಬಿಜೆಪಿಯ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಬಿಜೆಪಿಗೆ ಏನಾದರು ನೈತಿಕತೆ ಇದ್ದರೆ ರವಿಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮನೋಹರ್ ಆಗ್ರಹಿಸಿದ್ದಾರೆ.

ಪೊಲೀಸ್ ಮಹಾನಿರ್ದೇಶಕರು, ಮಹಿಳಾ ಆಯೋಗಕ್ಕೆ ಪತ್ರ

ಶಾಲಿನಿ ರಜನೀಶ್ ಕುರಿತು ಮಾನಹಾನಿಕರ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕೋರಿ ಮೈಸೂರಿನ ಒಡನಾಡಿ ಸಂಸ್ಥೆಯ ಪರಶುರಾಮ್ ಎಂ.ಎಲ್‌ ಮತ್ತು ಸ್ಟ್ಲ್ಯಾನ್ಲಿ ಕೆ.ವಿ ಅವರು ಪೊಲೀಸ್ ಮಹಾನಿರ್ದೇಶಕರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ ಹೀಗಿದೆ

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು “ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ಬಿಜೆಪಿಯ ಎನ್.ರವಿಕುಮಾರ್‌ ಅವರು ನೀಡಿರುವ ನೀಡಿರುವ ದ್ವಂದ್ವ ಹೇಳಿಕೆ ಆಶ್ಚರ್ಯಕರ ಹಾಗೂ ಅಸಹನೀಯವಾಗಿದೆ. ಇವರ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತಾವು ದಯಮಾಡಿ ಈ ನಿಟ್ಟಿನಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೋರುತ್ತಿದ್ದೇವೆ. ಇವರ ಹೇಳಿಕೆಯು ರಾಜ್ಯದಲ್ಲಿ ಉದ್ಯೋಗ ಮಾಡುತ್ತಿರುವ ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ತರುವಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗುತ್ತದೆ. ತಾವು ದಯಮಾಡಿ ಈ ವಿಚಾರದಲ್ಲಿ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎನ್. ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇವೆ.”

“ಮುಖ್ಯವಾಗಿ ಸಾಮಾಜಿಕ ಹೋರಾಟದ ಮುಂಚೂಣಿಯಲ್ಲಿರುವ ಒಡನಾಡಿ ಸಂಸ್ಥೆಯು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ 35 ವರ್ಷಗಳಿಂದ ಮಹಿಳೆಯರ ಸಶಕ್ತತೆ ಹಾಗೂ ಅವರ ಘನತೆಯುಕ್ತ ಜೀವನ ಕಟ್ಟಿಕೊಡುವಲ್ಲಿ ಶ್ರಮಿಸುತ್ತಿದೆ. ಇವರ ಹೇಳಿಕೆಯು ಮಹಿಳೆಯರ ಘನತೆಯನ್ನು ಕುಗ್ಗಿಸುವಂತಲ್ಲದೇ ಆತಂಕವನ್ನು ಸೃಷ್ಟಿಸುವಂತಾಗಿದೆ. ತಾವು ದಯಮಾಡಿ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿ. ಇದರೊಟ್ಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಲಿಂಕ್ ಅನ್ನು ಲಗತ್ತಿಸಲಾಗಿದೆ. https://www.facebook.com/share/p/1ZiquTtRut/.”

“ಪತ್ರದ ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಉಚ್ಚ ನ್ಯಾಯಾಲಯ, ಕರ್ನಾಟಕ ಇವರಿಗೂ ಕಳಿಸಲಾಗಿದೆ.”

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...