Homeಮುಖಪುಟಒಡಿಶಾ| ಬಿಜೆಪಿ ನಾಯಕನ ಬಂಧನಕ್ಕೆ ಒತ್ತಾಯಿಸಿ ಅಧಿಕಾರಿಗಳಿಂದ ಸಾಮೂಹಿಕ ರಜೆ: ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ

ಒಡಿಶಾ| ಬಿಜೆಪಿ ನಾಯಕನ ಬಂಧನಕ್ಕೆ ಒತ್ತಾಯಿಸಿ ಅಧಿಕಾರಿಗಳಿಂದ ಸಾಮೂಹಿಕ ರಜೆ: ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ

- Advertisement -
- Advertisement -

ಭುವನೇಶ್ವರ ಮಹಾನಗರ ಪಾಲಿಕೆಯ (ಬಿಎಂಸಿ) ಹಿರಿಯ ಅಧಿಕಾರಿಯ ಮೇಲೆ ಸೋಮವಾರ ನಡೆದ ಹಲ್ಲೆಯನ್ನು ಖಂಡಿಸಿ ಒಡಿಶಾದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿರಿಯ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಸಾಮೂಹಿಕ ರಜೆ ಹಾಕಿದ್ದಾರೆ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಆಡಳಿತಾತ್ಮಕ ಕೆಲಸಗಳು ವ್ಯತ್ಯಯಗೊಂಡಿವೆ ಎಂದು ವರದಿಯಾಗಿದೆ.

ಬ್ಲಾಕ್, ತಾಲೂಕು ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆಗಳನ್ನು ಒದಗಿಸುವಲ್ಲಿ ಒಡಿಶಾ ಆಡಳಿತ ಸೇವೆ (ಒಎಎಸ್) ಮತ್ತು ಒಡಿಶಾ ಕಂದಾಯ ಸೇವೆ (ಒಆರ್‌ಎಸ್) ಅಧಿಕಾರಿಗಳು ಬೆನ್ನೆಲುಬಾಗಿರುವುದರಿಂದ, ಅವರ ಸಾಮೂಹಿಕ ಪ್ರತಿಭಟನಾ ರಜೆ ಆಡಳಿತದ ಮೇಲೆ ಪರಿಣಾಮ ಬೀರಿದೆ.

ಸೋಮವಾರ, ಬಿಎಂಸಿಯ ಹೆಚ್ಚುವರಿ ಆಯುಕ್ತ, ಹಿರಿಯ ಒಎಎಸ್ ಅಧಿಕಾರಿ ರತ್ನಾಕರ್ ಸಾಹೂ ಅವರನ್ನು ಕಚೇರಿಯ ಕೊಠಡಿಯಿಂದ ಹೊರಗೆ ಎಳೆದೊಯ್ದು ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿತ್ತು. ಅಲ್ಲದೆ, ಬಿಜೆಪಿ ನಾಯಕ ಜಗನ್ನಾಥ್ ಪ್ರಧಾನ್ ಅವರಲ್ಲಿ ಕ್ಷಮೆಯಾಚಿಸುವಂತೆ ಒತ್ತಾಯಿಸಿತ್ತು.

ಪ್ರಕರಣ ಸಂಬಂಧ ಬಿಎಂಸಿಯ ಬಿಜೆಪಿ ಕಾರ್ಪೊರೇಟರ್ ಜೀವನ್ ರೌಟ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿಯ ಒಡಿಶಾ ಘಟಕ ಐವರನ್ನೂ ಪಕ್ಷದಿಂದ ಉಚ್ಛಾಟಿಸಿದೆ.

ಸಾಮೂಹಿಕ ರಜೆ ಘೋಷಿಸಿದ ಒಡಿಶಾ ಆಡಳಿತ ಸೇವಾ ಸಂಘವು, ಬಿಜೆಪಿ ನಾಯಕ ಜಗನ್ನಾಥ್ ಪ್ರಧಾನ್ ಅವರನ್ನು ತಕ್ಷಣ ಬಂಧಿಸುವುದು ಸೇರಿದಂತೆ ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿ ಮುಂದೆ ಇಟ್ಟಿದೆ. ಸಂಘದ ಸದಸ್ಯರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಅಹುಜಾ ಅವರನ್ನು ಭೇಟಿ ಮಾಡಿ, ಜಗನ್ನಾಥ್ ಪ್ರಧಾನ್ ಅಧಿಕಾರಿ ಮೇಲಿನ ದಾಳಿಯ ಕಿಂಗ್‌ಪಿನ್ ಎಂದು ಆರೋಪಿಸಿ ಮನವಿ ಸಲ್ಲಿಸಿದೆ.

ಈ ನಡುವೆ, ಅಧಿಕಾರಿ ಸಾಹೂ ಅವರು ತಮ್ಮೊಂದಿಗೆ ಮತ್ತು ಬಿಎಂಸಿಯ ಮಹಿಳಾ ನೈರ್ಮಲ್ಯ ಕಾರ್ಯಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಜಗನ್ನಾಥ್ ಪ್ರಧಾನ್, ಇದು ಹಲ್ಲೆಗೆ ಕಾರಣವಾಗಿದೆ ಎಂದಿದ್ದಾರೆ. ಅವರೂ ಹಲ್ಲೆಯನ್ನು ಖಂಡಿಸಿದ್ದಾರೆ.

ತಹಶೀಲ್ದಾರ್‌ಗಳು, ಸಬ್‌-ಕಲೆಕ್ಟರ್‌ಗಳು, ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಎಲ್ಲಾ ಕ್ಷೇತ್ರ ಮಟ್ಟದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಭದ್ರತೆ ಒದಗಿಸುವಂತೆ ಎಎಎಸ್‌ ಸಂಘವು ಒತ್ತಾಯಿಸಿದೆ. ರಾಜ್ಯ ಸರ್ಕಾರವು ಈ ಘಟನೆಯನ್ನು ಸಾರ್ವಜನಿಕವಾಗಿ ಖಂಡಿಸಬೇಕೆಂದು ಎಂದು ಆಗ್ರಹಿಸಿದೆ.

ತಮ್ಮ ಬೇಡಿಕೆಗಳು ಈಡೇರುವವರೆಗೆ ಸಾಮೂಹಿಕ ರಜೆ ಹಾಕಲು ಎಲ್ಲಾ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಒಎಎಸ್‌ ಸಂರ್ಘ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದೆ.

ಅಧಿಕಾರಿ ಮೇಲಿನ ಹಲ್ಲೆಯಂತಹ ಹೇಯ ಕೃತ್ಯಗಳು ರಾಜ್ಯಾದ್ಯಂತ ಕೆಲಸ ಮಾಡುವ ಅಧಿಕಾರಿಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದು ಒಎಎಸ್‌ ಹೇಳಿದೆ.

ಪುರಿಯಲ್ಲಿ ಜಗನ್ನಾಥ ದೇವರ ರಥಯಾತ್ರೆ ನಡೆಯುತ್ತಿರುವುದರಿಂದ, ಉತ್ತರದ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಅಧಿಕಾರಿಗಳು ಸಾಮೂಹಿಕ ರಜೆ ಹಾಕದಂತೆ ಒಡಿಶಾದ ಕಂದಾಯ ಸಚಿವ ಸುರೇಶ್ ಪೂಜಾರಿ ಮನವಿ ಮಾಡಿದ್ದಾರೆ.

ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...