Homeಕರ್ನಾಟಕದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

ದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

- Advertisement -
- Advertisement -

ಅಹಮದಾಬಾದ್: ಬೆಂಗಳೂರಿನ ದೇವನಹಳ್ಳಿ ಗ್ರಾಮೀಣ ಪ್ರದೇಶದಲ್ಲಿ 13 ಗ್ರಾಮಗಳ ರೈತರು ತಮ್ಮ 1777 ಎಕರೆ ಫಲವತ್ತಾದ ಕೃಷಿ ಭೂಮಿಯ ಬಲವಂತದ ಸ್ವಾಧೀನ ವಿರೋಧಿಸಿ ನಡೆಸುತ್ತಿರುವ 3 ವರ್ಷಗಳ ಹೋರಾಟವು, ಕಾರ್ಮಿಕ ಸಂಘಟನೆಗಳಲ್ಲೂ ಪ್ರತಿಧ್ವನಿಸಿದೆ. ಗುಜರಾತ್‌ನ ಕಾರ್ಮಿಕರ ಪ್ರಮುಖ ಟ್ರೇಡ್ ಯೂನಿಯನ್ ಆದ ‘ಮಜೂರ್ ಅಧಿಕಾರ್ ಮಂಚ್’ (Majur Adhikar Manch)ರೈತರ ‘ಭೂಮಿ ಸತ್ಯಾಗ್ರಹ’ ಹೋರಾಟಕ್ಕೆ ತನ್ನ ಸಂಪೂರ್ಣ ಬೆಂಬಲ ಘೋಷಿಸಿದೆ.

ಜುಲೈ 3, 2025 ರಂದು ನೀಡಿದ ಪತ್ರಿಕಾ ಹೇಳಿಕೆಯಲ್ಲಿ, ಮಜೂರ್ ಅಧಿಕಾರ್ ಮಂಚ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಶ್ರೀವಾಸ್ತವ ಅವರು, “ಕರ್ನಾಟಕದ ರಾಜಧಾನಿ ಸಮೀಪದ ಈ ಫಲವತ್ತಾದ ಭೂಮಿಯನ್ನು ದುರ್ಬಲ ವರ್ಗದ ರೈತರಿಗೆ ಭೂ ಸುಧಾರಣೆ ಕಾಯಿದೆಯಡಿಯಲ್ಲಿ ನೀಡಲಾಗಿತ್ತು. ಆದರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮೀಪ್ಯದಿಂದಾಗಿ ಇದು ಕಾರ್ಪೊರೇಟ್ ವಲಯದ ಆಮಿಷಕ್ಕೆ ಒಳಗಾಗಿದೆ” ಎಂದು ವಿಶ್ಲೇಷಿಸಿದ್ದಾರೆ.

ರಾಜಕೀಯ ಪಕ್ಷಗಳ ‘ಮುಖವಾಡ’ ಬಯಲು: ಶ್ರೀವಾಸ್ತವ ಅವರು ಹಿಂದಿನ ಬಿಜೆಪಿ ಮತ್ತು ಹಾಲಿ ಕಾಂಗ್ರೆಸ್ ಸರ್ಕಾರಗಳ ನೀತಿಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. “ಹಿಂದಿನ ಬಿಜೆಪಿ ಸರ್ಕಾರ, 2013ರ ‘ಭೂಸ್ವಾಧೀನ ಕಾಯಿದೆ’ಯನ್ನು ಬದಿಗೊತ್ತಿ ಕೆ.ಐ.ಎ.ಡಿ.ಬಿ. ಮೂಲಕ ಭೂಸ್ವಾಧೀನಕ್ಕೆ ಮುಂದಾಗಿತ್ತು. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದರೆ ಅಧಿಸೂಚನೆ ರದ್ದುಪಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಸಂಪೂರ್ಣ ‘ಯು-ಟರ್ನ್’ ತೆಗೆದುಕೊಂಡಿದೆ. ರೈತರ ನ್ಯಾಯಯುತ ಹಕ್ಕುಗಳನ್ನು ಕಡೆಗಣಿಸಿ, ಕಾರ್ಪೊರೇಟ್ ಹಿತಾಸಕ್ತಿಗಳನ್ನು ಪೂರೈಸುವಲ್ಲಿ ಹಿಂದಿನ ಬಿಜೆಪಿ ಸರ್ಕಾರದಂತೆಯೇ ವರ್ತಿಸುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ‘ಮತಿಗೆಟ್ಟ’ (ಫ್ಲಿಪ್-ಫ್ಲಾಪ್) ವರ್ತನೆಯನ್ನು ಸಂಘಟನೆ ತೀವ್ರವಾಗಿ ಖಂಡಿಸಿದೆ.

ಬಲವಂತದ ಸ್ವಾಧೀನ ರದ್ದುಪಡಿಸಿ: ಮಜೂರ್ ಅಧಿಕಾರ್ ಮಂಚ್ ದೇವನಹಳ್ಳಿ ರೈತರ ನಾಲ್ಕು ಪ್ರಮುಖ ಬೇಡಿಕೆಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದು, “ಕರ್ನಾಟಕ ಸರ್ಕಾರವು ಈ ಬಲವಂತದ ಭೂಸ್ವಾಧೀನ ಅಧಿಸೂಚನೆಯನ್ನು ತಕ್ಷಣವೇ ಸಂಪೂರ್ಣವಾಗಿ ರದ್ದುಗೊಳಿಸಬೇಕು” ಎಂದು ದೃಢವಾಗಿ ಆಗ್ರಹಿಸಿದೆ. ಇದು ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ರೈತ ಮತ್ತು ಕಾರ್ಮಿಕ ವರ್ಗದ ಐಕ್ಯತೆಯ ಸಂಕೇತವಾಗಿ ಹೊರಹೊಮ್ಮಿದೆ.

ದೇವನಹಳ್ಳಿ ಭೂಸ್ವಾಧೀನದ ವಿರುದ್ಧ ಪ್ರತಿಭಟನೆ: ಸಿದ್ದರಾಮಯ್ಯ ಸರಕಾರ ವಿಶ್ವಾಸಾರ್ಹತೆಯಿಂದ ನಡೆದುಕೊಳ್ಳಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...