Homeಕರ್ನಾಟಕನಾಡ ಉಳಿಸಿ ಸಮಾವೇಶ: 'ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ' - ಸುನಿಲಂ...

ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವು ರಾಜ್ಯ ಸರ್ಕಾರಕ್ಕೆ ‘ಗಂಟಲ ಮುಳ್ಳಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ಸುನಿಲಂ ಹೇಳಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಕರ್ನಾಟಕದ ನಾನಾ ಭಾಗಗಳಿಂದ ಬಂದ ರೈತರಿಗೆ ಅಭಿನಂದನೆ ಸಲ್ಲಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗೆ ತೀಕ್ಷ್ಣ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ ಅವರೇ, ರೈತ-ಕಾರ್ಮಿಕರ ಸಂಗಾತಿಯಾಗಿರಿ!’: “ಸಿದ್ದರಾಮಯ್ಯನವರೇ, ನಿಮಗೆ ನಾನು ಹೇಳಲು ಬಯಸುತ್ತೇನೆ. ನೀವು ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಆಗಿದ್ದು ಆಮೇಲೆ. ಅದಕ್ಕೂ ಮುನ್ನ ನೀವು ರೈತರು, ಕಾರ್ಮಿಕರ ಸಂಗಾತಿ. ಅದನ್ನು ಮರೆತು ನೀವು ಕಾರ್ಪೊರೇಟ್ ತಾಳಕ್ಕೆ ಕುಣಿದು ನಿಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತಂದುಕೊಳ್ಳಬೇಡಿ,” ಎಂದು ಸುನಿಲಂ ನೇರವಾಗಿ ಕರೆ ನೀಡಿದರು.

ಕಾಂಗ್ರೆಸ್ ಹೈಕಮಾಂಡ್‌ಗೂ ಇದೇ ಸಂದೇಶ ನೀಡಿದ ಅವರು, “ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿದ್ದು ಕೇವಲ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ. ಇಲ್ಲಿನ ರೈತರು, ಕಾರ್ಮಿಕರು, ನಾಗರಿಕ ಸಂಘಟನೆಗಳು ಶ್ರಮಿಸಿವೆ. ಅದನ್ನು ನೀವು ಮರೆಯಬಾರದು,” ಎಂದು ನೆನಪಿಸಿದರು.

‘ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ’: “ನಾಗರಿಕ ಸಮಾಜ ಕೆಲವೊಂದು ಸಲ ಯಾವುದಾದರೂ ಪಕ್ಷದ ಪರ ನಿಂತರೆ ಅವರಿಗೆ ‘ಇವರು ನಮ್ಮವರು’ ಎಂದು ಅನಿಸಿಬಿಡುತ್ತದೆ. ಸಿದ್ದರಾಮಯ್ಯನವರೇ, ನೀವು ಕೇಳಿಸಿಕೊಳ್ಳಿ. ನಾಗರಿಕ ಸಂಘಟನೆಗಳು ಯಾವತ್ತೂ ಪಕ್ಷಗಳ ಪರ ಅಲ್ಲ. ರೈತರ ಪರ, ಕಾರ್ಮಿಕರ ಪರ. ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ,” ಎಂದು ಸುನಿಲಂ ನಾಗರಿಕ ಸಮಾಜದ ನಿಲುವನ್ನು ಸ್ಪಷ್ಟಪಡಿಸಿದರು.

‘ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು’: “ಕಾಂಗ್ರೆಸ್‌ನ ಜನಗಳೇ ಮತ್ತೊಂದು ವಿಚಾರ. ಇಲ್ಲಿ ಕುಳಿತಿರುವವರನ್ನು ಕಂಡರೆ ಬಿಜೆಪಿಗೆ ಭಯ. ಸಂಸತ್ತಿನಲ್ಲಿ ಆಯೋಜಿಸಿದ್ದ ಕೃಷಿ ಸ್ಥಾಯಿ ಸಮಿತಿ ಸಭೆಗೆ ರೈತರು, ಕಾರ್ಮಿಕರ ಪರವಾಗಿ ಪ್ರಕಾಶ್ ರಾಜ್ ಒಬ್ಬರು ಹೋದಾಗ ಬಿಜೆಪಿಗರು ಪಲಾಯನ ಮಾಡಿದರು. ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು. ಈ ದೇಶ ಅವರಿಗೆ ಸೇರಿದ್ದು,” ಎಂದು ಸುನಿಲಂ ರೈತ ಮತ್ತು ಕಾರ್ಮಿಕ ಶಕ್ತಿಯನ್ನು ಒತ್ತಿ ಹೇಳಿದರು.

“ಬಿಜೆಪಿಯ ಧೋರಣೆ ಸ್ಪಷ್ಟ – ಯಾರು ರೈತರು, ಕಾರ್ಮಿಕರ ಪರ ನಿಂತವರನ್ನು ಅವರು ದೇಶದ್ರೋಹಿಗಳು, ‘ತುಕ್ಡೆ ತುಕ್ಡೆ ಗ್ಯಾಂಗ್’ನವರು ಎನ್ನುತ್ತಾರೆ. ‘ಇಂಡಿಯಾ’ ಒಕ್ಕೂಟಕ್ಕೆ ಆ ಧೋರಣೆ ಇಲ್ಲ ಎಂಬ ವಿಶ್ವಾಸದಲ್ಲಿ ನಾವಿದ್ದೇವೆ,” ಎಂದರು.

‘ದೇವನಹಳ್ಳಿ ಹೋರಾಟ ದೇಶಕ್ಕೆ ಅನುಕರಣೀಯ’: ಸರ್ಕಾರ ನಂಬಿರುವ ಅಭಿವೃದ್ಧಿ ಮಾದರಿ ರೈತರನ್ನು, ಹಳ್ಳಿಗಳನ್ನು ನಾಶ ಮಾಡುವಂತದ್ದಾಗಿದೆ ಎಂದು ಸುನಿಲಂ ಟೀಕಿಸಿದರು. “ಅದಕ್ಕಾಗಿಯೇ ಅವರು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಜಾರಿಗೆ, ಸಾಲ ಮನ್ನಾಗೆ ಸಿದ್ಧರಿಲ್ಲ. ರೈತರ ಭೂಮಿಯನ್ನು ಕಸಿದುಕೊಂಡು ಅವರನ್ನು ಓಡಿಸುವ ಯೋಚನೆಯಲ್ಲಿ ಅವರಿದ್ದಾರೆ,” ಎಂದು ಆರೋಪಿಸಿದರು.

ಕೊನೆಯದಾಗಿ, “ದೇವನಹಳ್ಳಿಯ ರೈತರ ಹೋರಾಟ ದೇಶಕ್ಕೆ ಅನುಕರಣೀಯ. ಎಂತಹದ್ದೇ ಪರಿಹಾರ ಕೊಟ್ಟರೂ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂಬ ಅವರ ನಿಲುವು ಮೆಚ್ಚುವಂತದ್ದು. ನಾವು ದೆಹಲಿಯನ್ನು ಸುತ್ತುವರಿದು ಹೋರಾಟ ಮಾಡಿದ್ದೆವು. ಅಂತಹ ಹೋರಾಟ ಬೆಂಗಳೂರಿನಲ್ಲಿ ಮಾಡುವ ಶಕ್ತಿ ನಮಗಿದೆ. ಸರ್ಕಾರ ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಸರ್ಕಾರ ರೈತರ ಹೋರಾಟಕ್ಕೆ ಮಣಿಯಬೇಕು, ಭೂ ಸ್ವಾಧೀನ ಕೈಬಿಡಬೇಕು,” ಎಂದು ಸುನಿಲಂ ಕರ್ನಾಟಕ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...