Homeಕರ್ನಾಟಕದಲಿತ ಕುಟುಂಬದ ಮೇಲೆ ದೌರ್ಜನ್ಯ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ

ದಲಿತ ಕುಟುಂಬದ ಮೇಲೆ ದೌರ್ಜನ್ಯ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ

- Advertisement -
- Advertisement -

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ಮೇಲೆ ನಡೆದ ಗೂಂಡಾಗಿರಿ ಪ್ರಕರಣದಲ್ಲಿ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಹಾಗೂ ಬೇಗೂರು ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಕರ್ತವ್ಯಲೋಪ ಮತ್ತು ಆರೋಪಿಗಳೊಂದಿಗೆ ಶಾಮೀಲಾಗಿರುವ ಗಂಭೀರ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಜನಾಧಿಕಾರ ಸಂಘರ್ಷ ಪರಿಷತ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದೆ.

ಬೇಗೂರಿನ ದಲಿತ ನಿವಾಸಿ ನಾಗರಾಜು ಮತ್ತು ಅವರ ಕುಟುಂಬಸ್ಥರಿಗೆ ಸೇರಿದ ಜಮೀನಿಗೆ ಮೇ 28ರಂದು ತಡರಾತ್ರಿ ಸುಮಾರು 400ಕ್ಕೂ ಅಧಿಕ ಮಂದಿ ನುಗ್ಗಿ, ಜೆಸಿಬಿಯಿಂದ ಜಮೀನಲ್ಲಿದ್ದ ಕಟ್ಟಡಗಳನ್ನು ಧ್ವಂಸಗೊಳಿಸಿದ್ದಾರೆ.

ಅಲ್ಲದೆ, ನಾಗರಾಜು ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಎಚ್ ಆರ್. ರವಿಚಂದ್ರ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿಯ ಸಿಬ್ಬಂದಿ ನಯೀಮ್‌ ನೂರ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಆದರೆ, ಈ ಪ್ರಕರಣದ ತನಿಖೆಯನ್ನು ಪೊಲೀಸರು ಸರಿಯಾಗಿ ನಡೆಸುತ್ತಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಜೊತೆಗೆ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ, ಬೇಗೂರು ಠಾಣೆ ಇನ್ಸ್‌ಪೆಕ್ಟರ್ ಹಾಗೂ ಆಗ್ನೇಯ ವಿಭಾಗದ ಡಿಸಿಪಿಯವರು ಪ್ರಕರಣದ ಆರೋಪಿಗಳೊಂದಿಗೆ ಶಾಮೀಲಾಗಿದ್ದಾರೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ನೀಡಿದ ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್ ಆರೋಪಿಸಿದೆ.

ಗೃಹ ಸಚಿವ ಜಿ. ಪರಮೇಶ್ವರ್‌ಗೆ ಮನವಿ ಸಲ್ಲಿಕೆ

ದಲಿತ ಕುಟುಂಬದ ಮೇಲೆ ನಡೆದ ದಬ್ಬಾಳಿಕೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್. ಪಿ ಸುಧಾಮ್ ದಾಸ್ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೇಗೂರು ಠಾಣೆ ಇನ್ಸ್‌ಪೆಕ್ಟರ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಹಾಗೂ ಆಗ್ನೇಯ ವಿಭಾಗದ ಡಿಸಿಪಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಅವರನ್ನು ಪ್ರಕರಣದ ತನಿಖೆ ಮುಗಿಯುವವರೆಗೆ ಬೇರೆಡೆಗೆ ವರ್ಗಾಯಿಸಬೇಕು ಎಂದು ಸುಧಾಮ್ ದಾಸ್ ಆಗ್ರಹಿಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಪರಮೇಶ್ವರ್ ಅವರು, ಪೊಲೀಸರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.

ಪುತ್ತೂರು ವಿದ್ಯಾರ್ಥಿನಿಗೆ ವಂಚನೆ: ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...