Homeಮುಖಪುಟದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ...

ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್

ಹಿರಿಯ ಅಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಮತ್ತು ಸ್ವಯಂ ಘೋಷಿತ ದೇವಮಾನವನ ಹೆಸರು ಪ್ರಕರಣದಲ್ಲಿ ಕೇಳಿ ಬಂದಿದೆ.

- Advertisement -
- Advertisement -

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ| ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ| ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂಪಾಯಿ ಲಂಚ ಪಡೆಯಲಾಗುತ್ತಿತ್ತು ಎಂಬುವುದು ಪ್ರಕರಣದ ಆರೋಪವಾಗಿದೆ.

ಛತ್ತೀಸ್‌ಗಢದ ಸ್ವಘೋಷಿತ ದೇವಮಾನವ ರಾವತುರ ಸರ್ಕಾರ್, ಯುಜಿಸಿ ಮಾಜಿ ಅಧ್ಯಕ್ಷ ಹಾಗೂ ಟಿಐಎಸ್‌ಎಸ್‌ ಹಾಲಿ ಕುಲಪತಿ ಡಿ.ಪಿ ಸಿಂಗ್ ಮತ್ತು ರಿಯಲ್‌ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮಾಜಿ ಅಧ್ಯಕ್ಷ ಸಂಜಯ್ ಶುಕ್ಲಾ, ಇಂದೋರ್‌ನ ಇಂಡೆಕ್ಸ್ ವೈದ್ಯಕೀಯ ಕಾಲೇಜಿನ ಸುರೇಶ್ ಸಿಂಗ್ ಭಡೋರಿಯಾ ಸೇರಿದಂತೆ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಕರ್ನಾಟಕ, ಆಂಧ್ರ ಪ್ರದೇಶದ ಹಿರಿಯ ಆಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಸಹಿತ 35 ವ್ಯಕ್ತಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಅಕ್ರಮ ಮಾನ್ಯತೆ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಅಚ್ಚರಿಯೆಂದರೆ ಈ ಹಗರಣದಲ್ಲಿ ಆರೋಗ್ಯ ಸಚಿವಾಲಯದ ಕೆಲವು ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳಪೆ ಮಟ್ಟದ ವೈದ್ಯಕೀಯ ಕಾಲೇಜುಗಳಿಗೆ ಅಕ್ರಮ ಅನುಮೋದನೆಗಳನ್ನು ಪಡೆಯಲು ನಕಲಿ ಅಧ್ಯಾಪಕರು, ಸುಳ್ಳು ತನಿಖೆಗಳು ಮತ್ತು ಗೌಪ್ಯ ಸೂಕ್ಷ್ಮ ಮಾಹಿತಿಗಳ ಸೋರಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಹವಾಲಾ ಮತ್ತು ಬ್ಯಾಂಕಿಂಗ್ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ರಾಯ್ಪುರದ ವೈದ್ಯಕೀಯ ಸಂಸ್ಥೆಯಲ್ಲಿ 55 ಲಕ್ಷ ರೂಪಾಯಿ ಲಂಚ ಪ್ರಕರಣದಿಂದ ಆರಂಭವಾದ ತನಿಖೆ, ಈಗ ರಾಷ್ಟ್ರಮಟ್ಟದ ಹಗರಣವನ್ನು ಬಯಲಿಗೆಳೆದಿದೆ.

ಛತ್ತೀಸ್‌ಗಢದ ಶ್ರೀರಾಮಪುರ ಸರ್ಕಾರ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಗೆ ನಿಯೋಜಿಸಲಾದ ಎನ್‌ಎಂಪಿ ತಪಾಸಣೆ ತಂಡದಲ್ಲಿ ಮಂಡ್ಯದ ಡಾ. ಮಂಜಪ್ಪ ಅವರಿದ್ದರು. ಈ ಸಂಸ್ಥೆಯ ಪರವಾಗಿ ವರದಿ ನೀಡಲು ತಂಡವು 55 ಲಕ್ಷ ರೂ. ಲಂಚ ಪಡೆದಿತ್ತು. ಮಂಜಪ್ಪ ಅವರು ಈ ಹಣವನ್ನು ಪಡೆಯುವಂತೆ ಬೆಂಗಳೂರಿನ ಸತೀಶ್‌ಗೆ ತಿಳಿಸಿದ್ದರು. ಬೆಂಗಳೂರಿನಲ್ಲಿ ಲಂಚದ ಹಣ ಸ್ವೀಕರಿಸುವ ಸಮಯದಲ್ಲೇ ಸಿಬಿಐ ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ.

ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...