ಫೋಟೋಗೆ ಪೋಸ್ ನೀಡಲು ಹೋದಾಗ 36 ವರ್ಷದ ವ್ಯಕ್ತಿಯೊಬ್ಬರು ನೀರು ಪಾಲಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಶ್ರೀರಂಗಪಟ್ಟಣದ ಸರ್ವ ಧರ್ಮ ಆಶ್ರಮದ ಬಳಿಯ ಕೃಷ್ಣ ರಾಜ ಸಾಗರ (ಕೆಆರ್‌ಎಸ್) ಪ್ರದೇಶದ ಬಳಿ ಸ್ನೇಹಿತರೊಂದಿಗೆ ಪಿಕ್ನಿಕ್‌ಗೆ ಬಂದಿದ್ದ ಆಟೋ ಚಾಲಕ ಮೈಸೂರಿನ ಮಹೇಶ್ ಎಂದು ಗುರುತಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಫೋಟೋಗೆ ಪೋಸ್ ನೀಡುತ್ತಿದ್ದಾಗ ಮಹೇಶ್ ಕಾಲುಜಾರಿ ನದಿಗೆ ಬಿದ್ದಿದ್ದಾರೆ. ನೀರಿನ ಮಟ್ಟ ಹೆಚ್ಚಾಗಿದ್ದು, ರಬಸ ಜೋರಾಗಿರುವುದರಿಂದ ಅವರು ವೇಗವಾಗಿ ಕೊಚ್ಚಿಕೊಂಡು ಹೋಗಿದ್ದಾರೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸೇರಿದಂತೆ ರಕ್ಷಣಾ ತಂಡಗಳು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ಘಟನೆಯನ್ನು ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮತ್ತೊಂದು ಘಟನೆಯಲ್ಲಿ, ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಕಾಲುವೆಯ ಸೇತುವೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರಿ ಮಾಡುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಪೊಲೀಸರ ಪ್ರಕಾರ, ಮಧ್ಯಾಹ್ನ 2.30 ರ ಸುಮಾರಿಗೆ ಸೇತುವೆ ದಾಟುವಾಗ ಸವಾರನ ನಿಯಂತ್ರಣ ತಪ್ಪಿ ಡಿಬೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇಬ್ಬರೂ ಕಾಲುವೆಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಮೃತರ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು


