Homeಕರ್ನಾಟಕಶಿವಮೊಗ್ಗ: 'ಭೂತ ಬಿಡಿಸುತ್ತೇನೆ' ಎಂದು ಥಳಿಸಿ ಮಹಿಳೆಯ ಜೀವವನ್ನೇ ತೆಗೆದ ಮಂತ್ರವಾದಿ

ಶಿವಮೊಗ್ಗ: ‘ಭೂತ ಬಿಡಿಸುತ್ತೇನೆ’ ಎಂದು ಥಳಿಸಿ ಮಹಿಳೆಯ ಜೀವವನ್ನೇ ತೆಗೆದ ಮಂತ್ರವಾದಿ

- Advertisement -
- Advertisement -

ಗೀತಮ್ಮ ಎಂಬ 45 ವರ್ಷದ ಮಹಿಳೆಗೆ ಭೂತ ಬಿಡಿಸುವ ಹೆಸರಿನಲ್ಲಿ ಮಹಿಳಾ ಮಂತ್ರವಾದಿಯೋರ್ವರು ಹಲವಾರು ಗಂಟೆಗಳ ಕಾಲ ಕ್ರೂರವಾಗಿ ಥಳಿಸಿದ್ದು, ಅಸ್ವಸ್ಥಗೊಂಡಿದ್ದ ಆಕೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲ್ಲೂಕಿನ ಜಂಬರಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಗೀತಮ್ಮ ಅವರ ಮಗ ಸಂಜಯ್ (20) ತನ್ನ ತಾಯಿಗೆ ಭೂತ ಹಿಡಿದಿದೆ ಎಂದು ನಂಬಿ ಆಶಾ (35) ಎಂಬ ಮಹಿಳೆಯ ಬಳಿಗೆ ಕರೆದೊಯ್ದಿದ್ದಾನೆ; ಆಕೆಗೆ ಅಲೌಕಿಕ ಶಕ್ತಿ ಇದೆ ಎಂದು ಆತ ನಂಬಿದ್ದ. ಗ್ರಾಮದಲ್ಲಿ ದೆವ್ವ ಬಿಡಿಸುವುದಕ್ಕೆ ಹೆಸರುವಾಸಿಯಾದ ಆಶಾ, ಗೀತಮ್ಮ ಅವರನ್ನು ಸುಮಾರು ಆರು ಗಂಟೆಗಳ ಕಾಲ ಹೊಡೆದಿದ್ದಾಳೆ ಎನ್ನಲಾಗಿದೆ. ಹಲ್ಲೆಯ ಸಮಯದಲ್ಲಿ ಉಂಟಾದ ಗಾಯಗಳಿಂದ ಗೀತಮ್ಮ ಸಾವನ್ನಪ್ಪಿದ್ದಾರೆ.

ಹೊಳೆಹೊನ್ನೂರು ಪೊಲೀಸರು ಆಶಾ ಮತ್ತು ಸಂಜಯ್ ಇಬ್ಬರನ್ನೂ ಬಂಧಿಸಿದ್ದಾರೆ. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ.

“ಗೀತಮ್ಮನ ಮೈಯಲ್ಲಿ ದೆವ್ವವೊಂದು ಸೇರಿಕೊಂಡಿದ್ದು,  ಅದನ್ನು ಹೊರ ಹಾಕುತ್ತೇನೆ ಎಂದು ಆಶಾ ಹಾಗೂ ಆಕೆಯ ಪತಿ ತಿಳಿಸಿದ್ದರು; ಮಾತನ್ನು ನಂಬಿ ಅವರ ಮನೆಗೆ ಕರೆದೊಯ್ದಿದ್ದೆವು. ಆರಂಭದಲ್ಲಿ ದೇವರ ಪೂಜೆ ಮಾಡಿ, ನಂತರ ದೆವ್ವ ಓಡಿಸುತ್ತೇನೆ ಎಂದು ತಲೆಮೇಲೆ ಕಲ್ಲು ಹೊರಿಸಿ, ಗ್ರಾಮದ ಹೊರಗಿನ ಮರವೊಂದರ ಬಳಿಗೆ ಕರೆದೊಯ್ದರು. ಅದೇ ಮರದ ರೆಂಬೆಯೊಂದರಿಂದ ಮನಬಂದಂತೆ ಥಳಿಸಿದರು. ತಲೆ ಮೇಲೆ ದೊಡ್ಡ ಗಾತ್ರದ ಕಲ್ಲು ಇರುವಾಗಲೇ ಪಕ್ಕದ ಕಾಲುವೆಯಲ್ಲಿದ್ದ ತಣ್ಣೀರು ಎರಚಿದರು. ಇದರಿಂದ ಚಳಿ ತಾಳಲಾಗದೇ ನಡುಗುತ್ತಿದ್ದ ಅಮ್ಮ ಕುಸಿದು ಬಿದ್ದರು” ಎಂದು ಸಂಜಯ್ ಹೊಳೆಹೊನ್ನೂರು ಠಾಣೆ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ

ಗೀತಮ್ಮ ಕುಸಿದುಬಿದ್ದ ಬಳಿಕ, ‘ಅವರ ಮೈನಲ್ಲಿದ ಆತ್ಮ ಹೊರಹೋಗಿದೆ’ ಎಂದು ಮಂತ್ರವಾದಿ ಆಶಾ ಹೇಳಿದ್ದರು. ‘ಮುಂದೆ ಯಾವುದೇ ತೊಂದರೆ ಇಲ್ಲ; ಎಲ್ಲವೂ ಸರಿಯಾಗಿದೆ’ ಎಂದು ಹೇಳಿ ಮನೆಗೆ ಕಳಿಸಿದರು. ಆದರೆ, ಈ ವೇಳೆ ತೀವ್ರ ಅಸ್ವಸ್ಥವಾಗಿದ್ದ ಅವರನ್ನು ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಜುಲೈ 9ಕ್ಕೆ ಭಾರತ್ ಬಂದ್: 25 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗಿ, ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ – ದೇಶದಾದ್ಯಂತ ಸೇವೆಗಳ ವ್ಯಾಪಕ ವ್ಯತ್ಯಯ ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...