Homeಮುಖಪುಟಅಕ್ರಮ ಗಣಿಗಾರಿಕೆ ಪ್ರಕರಣ| ವಶಪಡಿಸಿಕೊಂಡ ಚಿನ್ನ ಬಿಡುಗಡೆಗೆ ಜನಾರ್ದನ ರೆಡ್ಡಿ ಮನವಿ; ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ

ಅಕ್ರಮ ಗಣಿಗಾರಿಕೆ ಪ್ರಕರಣ| ವಶಪಡಿಸಿಕೊಂಡ ಚಿನ್ನ ಬಿಡುಗಡೆಗೆ ಜನಾರ್ದನ ರೆಡ್ಡಿ ಮನವಿ; ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯ ಸಮಯದಲ್ಲಿ ವಶಪಡಿಸಿಕೊಂಡ 57.89 ಕಿಲೋಗ್ರಾಂಗಳಷ್ಟು ಚಿನ್ನವನ್ನು ಬಿಡುಗಡೆ ಮಾಡುವಂತೆ ಕೋರಿ ತೆಲಂಗಾಣ ಹೈಕೋರ್ಟ್‌ನಲ್ಲಿ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಮುಖ ಆರೋಪಿ ಗಾಲಿ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಿದ್ದಾರೆ.

ಹೈ ಪ್ರೊಫೈಲ್ ಗಣಿಗಾರಿಕೆ ಹಗರಣದ ತನಿಖೆಯ ಭಾಗವಾಗಿ ಚಿನ್ನವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಜುಲೈ 8 ರ ಮಂಗಳವಾರ ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರ ಪೀಠ ಅರ್ಜಿ ವಿಚಾರಣೆ ನಡೆಸಿತು. ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಗೆ ಗಣಿಗಾರಿಕೆ ಗುತ್ತಿಗೆ ನೀಡುವ ಮೊದಲು ರೆಡ್ಡಿ ಮತ್ತು ಅವರ ಪತ್ನಿ ಚಿನ್ನವನ್ನು ಖರೀದಿಸಿದ್ದಾರೆ ಎಂದು ರೆಡ್ಡಿ ಪರ ವಕೀಲರು ವಾದಿಸಿದರು.

ಸಿಬಿಐ ನ್ಯಾಯಾಲಯವು ಚಿನ್ನವನ್ನು ವಶಪಡಿಸಿಕೊಳ್ಳಲು ಕಾರಣಗಳನ್ನು ನಿರ್ದಿಷ್ಟಪಡಿಸಿಲ್ಲ, ಮಧ್ಯಂತರ ಆದೇಶಗಳನ್ನು ನೀಡಲು ವಿಫಲವಾದರೆ ಅರ್ಜಿದಾರರಿಗೆ ಸರಿಪಡಿಸಲಾಗದ ನಷ್ಟವನ್ನು ಉಂಟುಮಾಡಬಹುದು ಎಂದು ವಕೀಲರು ಎಚ್ಚರಿಸಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ವಾದಿಸಾಸಿದ ಸಿಬಿಐ ವಕೀಲ ಶ್ರೀನಿವಾಸ್ ಕಪಾಟಿಯಾ, ಕೌಂಟರ್ ಅಫಿಡವಿಟ್ ಸಲ್ಲಿಸಲು ಸಮಯ ಕೋರಿದರು. ಈ ಕೋರಿಕೆಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಲಕ್ಷ್ಮಣ್, ವಿಚಾರಣೆಯನ್ನು ಜುಲೈ 23 ಕ್ಕೆ ಮುಂದೂಡಿದರು.

ಪ್ರಕರಣದಲ್ಲಿ ರೆಡ್ಡಿ ಮತ್ತು ಇತರೆ ಆರೋಪಿಗಳು ಇತ್ತೀಚೆಗೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಜೂನ್ ಆರಂಭದಲ್ಲಿ, ತೆಲಂಗಾಣ ಹೈಕೋರ್ಟ್ ರೆಡ್ಡಿಗೆ ಜಾಮೀನು ನೀಡಿತು. ಸಿಬಿಐ ವಿಶೇಷ ನ್ಯಾಯಾಲಯವು ವಿಧಿಸಿದ್ದ ಅವರ ಅಪರಾಧ ಮತ್ತು ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿತು. ಅವರು ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ನ್ಯಾಯಾಲಯದ ಅನುಮತಿಯಿಲ್ಲದೆ ದೇಶವನ್ನು ತೊರೆಯದಂತೆ ನಿರ್ದೇಶಿಸಿತು.

2009 ರ ಹಿಂದಿನ ಈ ಪ್ರಕರಣವು ಒಎಂಸಿಯಿಂದ ದೊಡ್ಡ ಪ್ರಮಾಣದ ಅಕ್ರಮ ಗಣಿಗಾರಿಕೆಯ ಆರೋಪಗಳ ಮೇಲೆ ಕೇಂದ್ರೀಕೃತವಾಗಿದೆ. ಅನುಮತಿ ಪಡೆದ ಪ್ರದೇಶಗಳನ್ನು ಮೀರಿ ಅನಧಿಕೃತವಾಗಿ ಕಬ್ಬಿಣದ ಅದಿರು ಗಣಿಗಾರಿಕೆ ಮಾಡಿದ್ದರಿಂದ ಸರ್ಕಾರದ ಖಜಾನೆಗೆ ಗಮನಾರ್ಹ ನಷ್ಟವಾಗಿದೆ ಎಂದು ಸಿಬಿಐ ಆರೋಪಿಸಿದೆ.

ರಾಜಸ್ಥಾನ| ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...