Homeಮುಖಪುಟಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ಉದ್ಧವ್ ಠಾಕ್ರೆ..

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ಉದ್ಧವ್ ಠಾಕ್ರೆ..

- Advertisement -
- Advertisement -

ಮಹಾರಾಷ್ಟ್ರದ ನೂತನ ಸಿಎಂ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಪುಣೆ ವಿಮಾನ ನಿಲ್ದಾಣಕ್ಕೆ ಬಂದ ಅಮಿತ್ ಶಾ ಮತ್ತು ಮೋದಿಯವರನ್ನು ಮಾಜಿ ಸಿಎಂ ದೇವೇಂದ್ರ ಫಢ್ನವಿಸ್‌ ಮತ್ತು ರಾಜ್ಯಪಾಲರೊಂದಿಗೆ ಸ್ವಾಗತಿಸಿದ್ದಾರೆ.

ಪೊಲೀಸ್ ಮಹಾನಿರ್ದೇಶಕರ ಮತ್ತು ಇನ್ಸ್‌ಪೆಕ್ಟರ್ ಜನರಲ್‌ಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿಯವರು ಪುಣೆಗೆ ಆಗಮಿಸಿದ್ದಾರೆ. ಮೂರು ದಿನಗಳ ಸಭೆಯಲ್ಲಿ ರಾಜ್ಯಗಳ ಪೊಲೀಸ್ ಪಡೆಗಳು, ಕೇಂದ್ರ ಗುಪ್ತಚರ ಮತ್ತು ತನಿಖಾ ಸಂಸ್ಥೆಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಉನ್ನತ ಅಧಿಕಾರಿಗಳು ಒಗ್ಗೂಡಿ ಆಂತರಿಕ ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಪ್ರಧಾನಿಯವರನ್ನು ಸ್ವಾಗತಿಸಿದ ನಂತರ, ಉದ್ಧವ್ ಠಾಕ್ರೆ ನೇರವಾಗಿ ಮುಂಬೈಗೆ ತೆರಳಿದರು ಎಂದು ರಾಜ್ಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಅಧಿಕಾರದಲ್ಲಿ ಸಮಾನ ಪಾಲು ಪಡೆಯುವ ಶಿವಸೇನೆಯ ಬೇಡಿಕೆಯ ಬಗ್ಗೆ ಉಂಟಾದ ಬಿಜೆಪಿ ಮತ್ತು ಶಿವಸೇನೆಯ ನಡುವಿನ ಜಗಳವು ಸುಮಾರು 30 ವರ್ಷಗಳಿಂದ ಅವರೀರ್ವರ ನಡುವೆ ಇದ್ದ ಮೈತ್ರಿಯನ್ನು ಕಳೆದ ತಿಂಗಳು ರದ್ದುಗೊಳಿಸಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...