Homeಕರ್ನಾಟಕಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನ ಭೂಮಿ ಕೊಡಲು ಸಿದ್ಧರಿಲ್ಲ: ಕಾರಳ್ಳಿ ಶ್ರೀನಿವಾಸ್

ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನ ಭೂಮಿ ಕೊಡಲು ಸಿದ್ಧರಿಲ್ಲ: ಕಾರಳ್ಳಿ ಶ್ರೀನಿವಾಸ್

- Advertisement -
- Advertisement -

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿ ಜನರ ಒಗ್ಗಟ್ಟು ಒಡೆಯುವುದೇ ಭೂಸ್ವಾಧೀನ ಪರ ತಂಡದ ದುರುದ್ದೇಶ; ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನರು ನಮ್ಮ ಜೊತೆಗಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

1195 ದಿನಗಳಿಂದ ಬಲವಂತದ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಅಂತಿಮ ಹಂತ ತಲುಪಿದ್ದು, ಜು.15 ರಂದು ತನ್ನ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮಧ್ಯೆ, ದೇವನಹಳ್ಳಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ನಾವು ಭೂಸ್ವಾಧೀನ ಪರವಾಗಿದ್ದೇವೆ ಎಂದು ಪತ್ರಿಕಾಗೋಷ್ಠಿ ನಡೆಸಿರುವುದು ನೈಜ ಹೋರಾಟಗಾರರ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರಳ್ಳಿ ಶ್ರೀನಿವಾಸ್, “1195 ದಿನಗಳ ಹೋರಾಟವನ್ನು ನೈಜ ರೈತರೇ ನಡೆಸಿದ್ದಾರೆ, ತಮ್ಮ ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನರು ಇಂದು ಇಲ್ಲಿದ್ದಾರೆ. ಆದರೆ, ಭೂಮಿ ಮಾರುವವರು ಮತ್ತು ಮಧ್ಯವರ್ತಿಗಳು ಬೆಂಗಳೂರಿಗೆ ಹೊರಟಿದ್ದಾರೆ” ಎಂದರು.

“ಇತ್ತೀಚೆಗೆ ಭೂಮಿ ಕೊಡುವುದಾಗಿ ಹೇಳಿ ಕೆಲವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಹೋರಾಟ ನಿರ್ಣಾಯಕ ಹಂತ ತಲುಪಿರುವಾಗ ಈ ರೀತಿಯ ಪ್ರಚೋದನೆಗೆ ಸರ್ಕಾರವೇ ನೇರ ಕಾರಣ. ಜೂನ್ 25 ರ ‘ದೇವನಹಳ್ಳಿ ಹೋರಾಟ’ದ ಬಳಿಕ ನಮ್ಮ ಹೋರಾಟ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. 4 ನೇ ತಾರೀಕು ನಡೆದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ತೆಗೆದುಕೊಳ್ಳಲು 10 ದಿನ ಸಮಯ ಕೇಳಿದ್ದರು, ಡಿನೋಟಿಫೈ ಮಾಡಲು ಕಾನೂನು ತೊಡಕಿದೆ ಎಂದು ಹೇಳಿದ್ದರು. ಹೀಗೆ ಹೇಳಿದ ಬಳಿಕ ಸರ್ಕಾರ ನಡೆದುಕೊಳ್ಳುತ್ತಿರುವುದು ಸರಿಯಲ್ಲ; ಸಚಿವ ಎಂ.ಬಿ. ಪಾಟೀಲ್ ಅವರ ನಡೆಯೂ ಒಪ್ಪುವುದಕ್ಕೆ ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದ ಮುಖ್ಯಮಂತ್ರಿ ಯಾರು?

“ನಮಗೆ ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಅನುಮಾನ ಕಾಡುತ್ತಿದೆ ಎಂ.ಬಿ. ಪಾಟೀಲ್ ಅಥವಾ ಸಿದ್ದರಾಮಯ್ಯನವರೋ? ಭೂಸ್ವಾಧೀನ ವಿಚಾರದಲ್ಲಿ ಅವರೇ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ” ಎಂದರು.

“ಎಸ್‌ಸಿ-ಎಸ್‌ಟಿ ಸಮುದಾಯವನ್ನು ಮುಂದೆ ಇಟ್ಟುಕೊಂಡು ಭೂಮಿ ಕೊಡುತ್ತಾರೆ ಎಂದು ಮಾರಾಟ ಮಾಡಿಸುವ ಮಧ್ಯವರ್ತಿಗಳು ಸುಳ್ಳು ಹೇಳುತ್ತಿದ್ದಾರೆ. ಜಮೀನು ಮಾರಾಟ ಮಾಡುವವರು ಮತ್ತು ಅದರ ಮಧ್ಯವರ್ತಿಗಳು ಬೆಂಗಳೂರಿಗೆ ಹೊರಟಿದ್ದಾರೆ. ಎಲ್ಲ ದಲಿತರೂ ಭೂಮಿ ಕೊಡುತ್ತಾರೆ ಎಂಬ ಮಧ್ಯವರ್ತಿಗಳ ಆರೋಪ ನಿಜವಲ್ಲ. ಹೊಲೆಯ ಮತ್ತು ಮಾದಿಗ ಸಮುದಾಯದ ಜಮೀನು ಮಾಲೀಕರು ಇಲ್ಲೇ ಇದ್ದಾರೆ. ಅವರು ಯಾವುದೇ ಕಾರಣಕ್ಕೂ ಭೂಮಿ ಕೊಡುವುದಕ್ಕೆ ಒಪ್ಪುವುದಿಲ್ಲ” ಎಂದು ಹೇಳಿದರು.

“ಹೊಲದಲ್ಲಿ ದುಡಿಯುವ ಎಲ್ಲ ಹಿಂದುಳಿದ ಜಾತಿ ಜನರೂ ಇಲ್ಲಿದ್ದಾರೆ, ಅವರೆಲ್ಲರೂ ಭೂಮಿ ಕೊಡುವುದಿಲ್ಲ ಎಂದು ಹೋರಾಟ ನಡೆಸುತ್ತಿದ್ದಾರೆ. ನಮ್ಮ ಒಗ್ಗಟ್ಟು ಮುರಿಯಲು ಜಗಳ ತಂದಿಡಲು ಯತ್ನಿಸುತ್ತಿದ್ದಾರೆ. ‘ಹಸಿರು ವಲಯ’ ಎಂದು ಹೇಳಿ ಭಯ ಹುಟ್ಟಿಸುತ್ತಿದ್ದಾರೆ. ಪತ್ರಿಕೆಯೊಂದರ ಊಹಾತ್ಮಕ ಸುದ್ದಿಯನ್ನೇ ಸರ್ಕಾರದ ಆದೇಶ ಎಂದು ಹೇಳುತ್ತಿದ್ದಾರೆ. ಜಮೀನು ಮಾರಾಟ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿಯೇ ರೈತರು ಇಷ್ಟು ದಿನದಿಂದ ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ, ಹೊಲವನ್ನು ಉತ್ತಿಬಿತ್ತಿ, ಅನ್ನ ಬೆಳೆಯುವ ರೈತರಿಗೆ ‘ಹಸಿರು ವಲಯ’ವೇ ಬೇಕು. ಮಧ್ಯವರ್ತಿಗಳು ಮಾತ್ರ ‘ಹಳದಿ ವಲಯ’ ಕೇಳುತ್ತಿದ್ದಾರೆ” ಎಂದರು.

“ಕೆಐಎಡಿಬಿ ನೋಟಿಸ್ ಕೊಡುವುದಕ್ಕೂ ಮೊದಲೇ ಭೂಮಿ ಮಾರಾಟಕ್ಕೆ ಅಗ್ರಿಮೆಂಟ್ (ಮಾರಾಟ ಒಪ್ಪಂದ) ಮಾಡಿಸಿಕೊಂಡಿದ್ದವರು ಆತಂಕದಿಂದ ಜನರನ್ನು ಕರೆದುಕೊಂಡು ಹೋಗಿದ್ದಾರೆ. ದಲಿತರಿಗೆ ಬೆದರಿಕೆ ಹಾಕುತ್ತಿರುವ ಇಂಥ ಪುಡಾರಿಗಳನ್ನು ಸರ್ಕಾರ ಒದ್ದು ಜೈಲಿಗೆ ಹಾಕಬೇಕು” ಎಂದು ಆಗ್ರಹಿಸಿದರು.

ಸರ್ಕಾರ ಪತನವಾದರೂ ಆಗಬಹುದು

“ಈಗ ಭೂಸ್ವಾಧೀನ ಪರವಾಗಿ ಮಾತನಾಡುತ್ತಿರುವವರಿಗೆ ನಮ್ಮನ್ನು ನೇರವಾಗಿ ಎದುರಿಸಲು ತಾಕತ್ತಿಲ್ಲ; ಮೂರೂವರೆ ವರ್ಷದ ಹೋರಾಟ ನೋಡಿದ ಅವರಿಗೆ ನಮ್ಮ ಶಕ್ತಿ ಏನೆಂಬುದು ಗೊತ್ತಿದೆ. ನಮ್ಮ ತಂಟೆಗೆ ಒಂದರೆ ಏನೂ ಮಾಡಲು ಸಾಧ್ಯವಿಲ್ಲ ಎಂಬುದು ಅರಿವು ಅವರಿಗಿದೆ. ಜು.25ರಂದು ರೈತರ ಪರವಾಗಿ ನಿರ್ಧಾರ ತೆಗೆದುಕೊಳ್ಳದೇ ಇದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಇದೇ ಕಾರಣಕ್ಕೆ ಅವರ ಸರ್ಕಾರ ಪತನವಾದರೂ ಆಗಬಹುದು. ಒಂದು ವೇಳೆ ಈ ಸರ್ಕಾರ ನಮ್ಮ ವಿರುದ್ಧವೇನಾದರೂ ನಿರ್ಧಾರ ಮಾಡಿದರೆ, ನಮ್ಮ ಚಳವಳಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುತ್ತೇವೆ. ಇದು ರೈತರ ನೈಜ ಹೋರಾಟ, ನಮ್ಮ ಹೋರಾಟ ಬೆಂಬಲಿಸುವಂತೆ ಅನ್ನ ತಿನ್ನುವ ಎಲ್ಲ ಕೈಗಳಿಗೆ ಮನವಿ ಮಾಡುತ್ತೇವೆ” ಎಂದರು.

ಮಟ್ಟಬಾರ್ಲು ಗ್ರಾಮದ ರೈತ ಮಹಿಳೆ ಮುನಿವೆಂಕಟಮ್ಮ ಮಾತನಾಡಿ, “ಭೂಮಿ ಕೊಡಲು ಎಷ್ಟು ಜನ ಸಿದ್ಧರಿದ್ದಾರೆ ಎಂಬ ಬಗ್ಗೆ ಸರ್ಕಾರ ಪರಿಶೀಲಿಸಬೇಕು. ಜು.25ರಂದು ನಮ್ಮ ಪರವಾಗಿ ನಿರ್ಧಾರ ಮಾಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮತ್ತಷ್ಟು ತೀವ್ರವಾಗುತ್ತದೆ. ಏಕೆಂದರೆ, ರಾಜ್ಯದ ಎಲ್ಲ ಜನಪರ ಹೋರಾಟಗಾರರ ಬೆಂಬಲ ನಮಗಿದೆ” ಎಂದರು.

“ಸಚಿವ ಎಂ.ಬಿ. ಪಾಟೀಲ್‌ಗೆ ದುಡ್ಡು ಬೇಕಿದೆ; ಅದಕ್ಕಾಗಿ ನಕಲಿ ಜನರನ್ನು ಸೃಷ್ಟಿ ಮಾಡಿದ್ದಾರೆ. ಆ ಮೂಲಕ ನಮ್ಮ ಒಗ್ಗಟ್ಟು ಒಡೆಯುವ ಕುತಂತ್ರ ಮಾಡುತ್ತಿದ್ದಾರೆ. ಇದೆಲ್ಲಾ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಮುನಿಯಪ್ಪ ಅವರಿಗೆ ಕಾಣುತ್ತಿಲ್ಲವೇ? ಸುಳ್ಳು ಸಾಕ್ಷಿ ಹೇಳುವವರ ಮಾತು ಕೇಳುವ ಮೂಲಕ ನಮ್ಮ ಹೋರಾಟದ ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದರು.

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚೀಮಾಚನಹಳ್ಳಿ ಲಕ್ಷ್ಮಿ ಮಾತನಾಡಿ, “ಕೆಲವರಿಗೆ ದುಡ್ಡಿನ ಆಸೆ ತೋರಿಸಿ ಹಾಗೂ ಹಸಿರು ವಲಯ ಆಗತ್ತದೆ ಎಂದು ಭಯ ಹುಟ್ಟಿಸಿ ಜನರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ನಮ್ಮಲ್ಲಿ ಶೇ.90 ರಷ್ಟು ಜನ ಭೂಮಿ ಕೊಡುವುದಿಲ್ಲ ಎಂದು ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿಗೆ ಹೋಗಿರುವ ಬಹುತೇಕರನ್ನು ಬೆದರಿಸಲಾಗಿದೆ. ಕೆಲವೇಕೆಲವು ಜನಕ್ಕೆ ಮಾತ್ರ ದುಡ್ಡು ಬೇಕು. ಆದರೆ, ಬಹುತೇಕರ ಆಯ್ಕೆ ಕೃಷಿ ಆಗಿದೆ” ಎಂದರು.

ನಲ್ಲಪ್ಪನಹಳ್ಳಿಯ ಇಂಜಿನಿಯರಿಂಗ್ ಪದವೀಧರೆ ಬಿಂದು ಮಾತನಾಡಿ, “ಭೂಮಿ ಕೊಡುತ್ತೇವೆ ಎಂದು ಬೆಂಗಳೂರಿಗೆ ಹೋಗಿರುವವರು ದುಡ್ಡಿಗಾಗಿ ತೆರಳಿದ್ದಾರೆ. ಆದರೆ, ನಾವು ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಸುತ್ತಮುತ್ತಲಿನ ಕಾರ್ಖಾನೆಗಳಿಂದ ನಮ್ಮಲ್ಲಿ ಹೆಚ್ಚಿನ ಮಾಲಿನ್ಯ ಆಗುತ್ತಿದೆ. ಇದು ನಮ್ಮ ಅಸ್ತಿತ್ವದ ಪ್ರಶ್ನೆ; ಒಂದೇ ಕಡೆ ಕಾರ್ಖಾನೆಗಳನ್ನು ಕಟ್ಟುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಕಷ್ಟವಾಗುತ್ತದೆ” ಎಂದರು.

“ಇಂಜಿನಿಯರಿಂಗ್ ಪದವಿ ಮಾಡಿದ್ದರೂ ಕೃಷಿಯಲ್ಲಿ ನಾವು ನೆಮ್ಮದಿಯಾಗಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ‘ಹಸಿರು ಉಳಿಸಿ’ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಅವರು ಈಗ ನಮ್ಮ ಭೂಮಿಯನ್ನೇ ಕಿತ್ತುಕೊಳ್ಳುತ್ತಿದ್ದಾರೆ. ರೈತರನ್ನು ಬೆಂಬಲಿಸದ ಸರ್ಕಾರ ನಮಗೆ ಯಾಕೆ ಬೇಕು? ಸ್ವಾತಂತ್ರ್ಯ ಪೂರ್ವದಿಂದಲೂ ನಾವು ಹೋರಾಟ ಮಾಡಿಕೊಂಡೆ ಎಲ್ಲವನ್ನೂ ಪಡೆದುಕೊಳ್ಳಬೇಕು; ಈಗ ನಮ್ಮ ಭೂಮಿ ಉಳಿಸಿಕೊಳ್ಳಲೂ ಹೋರಾಡಬೇಕಿದೆ. ಮುಖ್ಯಮಂತ್ರಿಗಳು ರೈತರ ಪರವಾಗಿ ನಿಲ್ಲಲೇಬೇಕು” ಎಂದು ಬಿಂದು ಆಗ್ರಹಿಸಿದರು.

ನಲ್ಲಪ್ಪನಹಳ್ಳಿ ಗ್ರಾಮದ ಕೃಷಿ ಪದವೀಧರ, ಆಧುನಿಕ ಕೃಷಿಕ ವಿನಯ್ ಮಾತನಾಡಿ, “13 ಹಳ್ಳಿಗಳ ರೈತರಲ್ಲಿ ಒಗ್ಗಟ್ಟು ಇರಲಿಲ್ಲ ಎಂದಿದ್ದರೆ ನಮ್ಮ ಹೋರಾಟ 1200 ದಿನ ಪೂರೈಸುತ್ತಿರಲಿಲ್ಲ. ನಾವೆಲ್ಲರೂ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಭೂಮಿ ಮಾರಿಸುವ ಕೆಲ ಏಜೆಂಟ್‌ಗಳು ನಮ್ಮ ಒಗ್ಗಟ್ಟು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಮಗೆ ಕೃಷಿ ವಲಯ (ಹಸಿರು ವಲಯ) ಬೇಕು; ದಲ್ಲಾಳಿಗಳಿಗೆ ಹಳದಿ ವಲಯ ಬೇಕು. ಅದನ್ನೇ ಮುಂದಿಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾರೆ. ಆದರೆ, ಭೂಮಿ ನಂಬಿ ಬದುಕುತ್ತಿರುವ ನಮಗೆ ಹಸಿರು ವಲವೇ ಬೇಕು” ಎಂದು ಹೇಳಿದರು.

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...