Homeಮುಖಪುಟತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

- Advertisement -
- Advertisement -

ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ಭಾನುವಾರ (ಜು.13) ಮುಂಜಾನೆ 4 ಗಂಟೆಯ ಸುಮಾರಿಗೆ ಹೈದರಾಬಾದ್‌ನ ಫಿಲ್ಮ್‌ನಗರದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕೋಟಾ ಶ್ರೀನಿವಾಸ ರಾವ್ ಅವರು ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ದಕ್ಷಿಣ ಭಾರತದ ಅಗ್ರಗಣ್ಯ ನಟರಲ್ಲಿ ಒಬ್ಬರಾದ ಕೋಟಾ ಶ್ರೀನಿವಾಸ ರಾವ್ ಅವರು, ರಂಗಭೂಮಿಯಿಂದ ಬೆಳೆದು ಬಂದು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು. ವೃತ್ತಿ ಜೀವನದಲ್ಲಿ ಅವರು ವಿವಿಧ ಭಾಷೆಗಳ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಖಳನಾಯಕ, ಹಾಸ್ಯ ಮತ್ತು ಪೋಷಕ ಪಾತ್ರಗಳನ್ನು ನಿರ್ವಹಿಸಿ ಖ್ಯಾತಿಯನ್ನು ಗಳಿಸಿದ್ದರು. ರಾಜಕೀಯಕ್ಕೆ ಕಾಲಿಟ್ಟು ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು.

ಜುಲೈ 10, 1942ರಂದು ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದ ಕೋಟಾ ಶ್ರೀನಿವಾಸ ರಾವ್, 1978ರಲ್ಲಿ ಬಿಡುಗಡೆಯಾದ ‘ಪ್ರಾಣಂ ಖರೀಧು’ ಚಿತ್ರದ ಮೂಲಕ ಸಿನಿಮಾ ಜಗತ್ತಿನಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದರು.

ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡುವ ಮೊದಲು, ಅವರು ಮೆಚ್ಚುಗೆ ಪಡೆದ ರಂಗಭೂಮಿ ಕಲಾವಿದರಾಗಿದ್ದರು. ಅವರ ಕಮಾಂಡಿಂಗ್ ಧ್ವನಿ ಮತ್ತು ಅಭಿವ್ಯಕ್ತಿಶೀಲ ನಟನೆ ಜನರ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. 2013ರಲ್ಲಿ ಬಿಡುಗಡೆಯಾದ ರಾಮ್ ಚರಣ್ ಅವರ ಹಿಟ್ ಚಿತ್ರಗಳಲ್ಲಿ ಒಂದಾದ ‘ನಾಯಕ್‌’ನಲ್ಲಿ ನಿರ್ವಹಿಸಿದ ಪಾತ್ರದಿಂದ ಶ್ರಿನಿವಾಸ ರಾವ್ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಿತ್ತು.

ಶ್ರೀನಿವಾಸ ರಾವ್ ಅವರು ತೆಲುಗಿನ ಪ್ರಮುಖ ನಟರಾದ ಕೃಷ್ಣ, ಚಿರಂಜೀವಿ, ಬಾಲಕೃಷ್ಣ, ನಾಗಾರ್ಜುನ, ವೆಂಕಟೇಶ್, ಮಹೇಶ್ ಬಾಬು, ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಮತ್ತು ಸಾಯಿ ಧರಮ್ ತೇಜ್ ಸೇರಿದಂತೆ ಹಲವರ ಜೊತೆ ನಟಿಸಿದ್ದರು.

“ಅಹನಾ ಪೆಲ್ಲಂಟಾ”, “ಪ್ರತಿಘಾತನಾ”, “ಯಮುದಿಕಿ ಮೊಗುಡು”, “ಖೈದಿ ನಂ.786”, “ಶಿವ”, “ಬೊಬ್ಬಿಲಿ ರಾಜ”, “ಯಮಲೀಲಾ”, “ಸಂತೋಷಂ”, “ಬೊಮ್ಮರಿಲ್ಲು”, “ಅತ್ತಾಡು”, ಮತ್ತು “ರೇಸ್ ಗುರ್ರಂ” ಶ್ರೀನಿವಾಸ ರಾವ್ ನಟಿಸಿದ ಪ್ರಮುಖ ಚಿತ್ರಗಳು.

ರಾಜಕೀಯದಲ್ಲೂ ಚಾಪು ಮೂಡಿಸಿದ್ದ ಶ್ರೀನಿವಾಸ ರಾವ್ 1999 ರಿಂದ 2004ರ ನಡುವೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗಿದ್ದರು. ತೆರೆಯ ಮೇಲಿಯೂ ರಾಜಕಾರಣಿಯಾಗಿ ನಟಿಸಿ ಮೆಚ್ಚುಗೆ ಪಡೆದಿದ್ದರು. ಅಲ್ಲು ಅರ್ಜುನ್ ಮುಖ್ಯ ಪಾತ್ರದಲ್ಲಿ ನಟಿಸಿದ ‘ಜುಲಾಯಿ’ ಅಂತಹ ಒಂದು ಚಿತ್ರವಾಗಿದ್ದು, ಇದರಲ್ಲಿ ರಾವ್ ಶಾಸಕನ ಪಾತ್ರವನ್ನು ನಿರ್ವಹಿಸಿದ್ದರು. ಕನ್ನಡದ “ನಮ್ಮ ಬಸವ”, “ಕಬ್ಜ” ಸೇರಿದಂತೆ ಕೆಲ ಸಿನಿಮಾಗಳಲ್ಲಿ ಶ್ರೀನಿವಾಸ ರಾವ್ ನಟಿಸಿದ್ದರು.

ಕೋಟಾ ಶ್ರೀನಿವಾಸ ರಾವ್ ಅವರು ಪದ್ಮಶ್ರೀ, ನಂದಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ರಾವ್ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ತೆಲುಗು ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಬನಿ ಮಿಡಿದಿದ್ದಾರೆ.

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...