Homeಮುಖಪುಟಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ...

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ

- Advertisement -
- Advertisement -

ನೈಋತ್ಯ ದೆಹಲಿಯ ವಸಂತ್ ವಿಹಾರ್‌ನಲ್ಲಿ ಆಸ್ತಿ ವ್ಯಾಪಾರಿಯೊಬ್ಬರು ಒಬ್ಬರು ಚಲಾಯಿಸುತ್ತಿದ್ದರು ಎನ್ನಲಾದ ಐಷಾರಾಮಿ ಆಡಿ ಕಾರು ಹರಿದ ಪರಿಣಾಮ ಫುಟ್‌ಪಾತ್‌ನಲ್ಲಿ ಮಲಗಿದ್ದ ಎಂಟು ವರ್ಷದ ಬಾಲಕಿ ಸೇರಿದಂತೆ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ಜುಲೈ 9ರಂದು ನಸುಕಿನಲ್ಲಿ ಈ ಘಟನೆ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘಟನೆ ನಡೆದ ಬೆನ್ನಲ್ಲೇ ಚಾಲಕ 40 ವರ್ಷದ ಉತ್ಸವ್ ಶೇಖರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಶೇಖರ್ ಅವರು ಮದ್ಯಪಾನ ಮಾಡಿ ದ್ವಾರಕದ ತನ್ನ ಮನೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ತಡರಾತ್ರಿ 1.45ರ ಸುಮಾರಿಗೆ ಶಿವಕ್ಯಾಂಪ್ ಬಳಿ ಅವಘಡ ಸಂಭವಿಸಿದೆ.

“ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದುಕೊಳ್ಳಲಾಗಿದೆ. ತಾವು ಫುಟ್‌ಪಾತ್‌ನಲ್ಲಿ ಮಲಗಿದ್ದಾಗ ಬಿಳಿ ಬಣ್ಣದ ಆಡಿ ಕಾರು ಹರಿದಿದೆ ಎಂಬುವುದಾಗಿ ಅವರು ಹೇಳಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಅಮಿತ್ ಗೋಯಲ್ ತಿಳಿಸಿದ್ದಾರೆ.

ಗಾಯಗೊಂಡವರು ಲಾಧಿ (40), ಬಿಮ್ಲಾ (8), ಸಬಾಮಿ (45), ನಾರಾಯಣಿ (35), ಮತ್ತು ರಾಮ್ ಚಂದರ್ (45) ಎಂದು ತಿಳಿದು ಬಂದಿದೆ. ಇವರೆಲ್ಲರೂ ರಾಜಸ್ಥಾನದ ನಿವಾಸಿಗಳು. ಇತ್ತೀಚೆಗೆ ದೆಹಲಿಗೆ ಆಗಮಿಸಿದ್ದರು ಮತ್ತು ಪ್ರಸ್ತುತ ನಿರುದ್ಯೋಗಿಗಳಾಗಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಕಾರು ಹರಿಸಿದ ಆರೋಪಿ ಶೇಖರ್, ಆ ಬಳಿಕ 200 ಮುಂದಕ್ಕೆ ಹೋಗಿ ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದರು. ನಂತರ ಅವರನ್ನು ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...