Homeಕರ್ನಾಟಕಧರ್ಮಸ್ಥಳ ಸಾವು ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸುವಂತೆ ಕೋರಿ ಸಿಎಂಗೆ ಮಹಿಳಾ ಆಯೋಗ ಪತ್ರ

ಧರ್ಮಸ್ಥಳ ಸಾವು ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸುವಂತೆ ಕೋರಿ ಸಿಎಂಗೆ ಮಹಿಳಾ ಆಯೋಗ ಪತ್ರ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

“ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಜುಲೈ 12ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ. ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿರುತ್ತಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಈ ನಿಟ್ಟಿನಲ್ಲಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಬೇಕು” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ: ನಟ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...