Homeಕರ್ನಾಟಕಅಹಂಕಾರ-ಗಂಡಿನ ದರ್ಪದ ಮುಂದೆ 'ತಾಯ್ತನ' ಗೆಲ್ಲುತ್ತದೆ: ಚುಕ್ಕಿ ನಂಜುಂಡಸ್ವಾಮಿ

ಅಹಂಕಾರ-ಗಂಡಿನ ದರ್ಪದ ಮುಂದೆ ‘ತಾಯ್ತನ’ ಗೆಲ್ಲುತ್ತದೆ: ಚುಕ್ಕಿ ನಂಜುಂಡಸ್ವಾಮಿ

- Advertisement -
- Advertisement -

ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಹಂಕಾರ ಮತ್ತು ಗಂಡಿನ ದರ್ಪ ಕಾಣಿಸುತ್ತಿದೆ. ಆದರೆ, ಇಲ್ಲಿ ತಾಯ್ತನದ ಶಕ್ತಿ ಇದೆ. ಅಂತಿಮವಾಗಿ ತಾಯ್ತನವೇ ಗೆಲ್ಲುತ್ತದೆ ಎಂದು ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರದಲ್ಲಿ ಸಚಿವ ಎಂ.ಬಿ. ಪಾಟೀಲ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನಗೆ ರೈತ ಸಂಘದ ನಾಯಕಿ ಚುಕ್ಕಿ ನಂಜುಂಡ್ಸ್ವಾಮಿ ಬೇಸರ ಹೊರಹಾಕಿದರು.

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಧರಣಿ ಸ್ಥಳದಲ್ಲಿ ಇಂದು ನಡೆದ ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಅವರು, “ಇಲ್ಲಿನ ಒಗ್ಗಟ್ಟು ಮುರಿಯುವ ಕೆಲಸವನ್ನು ಕೆವರು ಮಾಡುತ್ತಿದ್ದಾರೆ. ಇಷ್ಟು ದಿನ ಇವರು ಯಾರೂ ನಮಗೆ ಕಂಡಿರಲಿಲ್ಲ, ಇದ್ದಕ್ಕಿದ್ದಂತೆ ಭೂಮಿ ಕೊಡುತ್ತೇವೆ ಎಂದು ಈಗ ಮುಂದೆ ಬಂದಿದ್ದಾರೆ. ಈ ನಡುವೆ, ಕಾನೂನಿನ ತೊಡಕು ಇದೆ ಎಂದು ಹೇಳಿ 10 ದಿನ ಕಾಲಾವಕಾಶ ಕೇಳಿದ್ದರು. ಇ ಂದ್ಯದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಕ್ಷಣಾ ಮಂತ್ರಿಗಳನ್ನು ಭೇಟಿ ಮಾಡಿ ಬಂದಿದ್ದಾರೆ. ಡಿಫೆನ್ಸ್‌ ಕಾರಿಡಾರ್ ಮಾಡುತ್ತೇವೆ ಎಂದು ಅನುಮತಿ ಕೇಳಿದ್ದಾರೆ. ರೈತರು ಭೂಮಿ ಕೊಡದೇ ಇದ್ದರೆ ಡಿಫೆನ್ಸ್‌ ಕಾರಿಡಾರ್ ಆಂಧ್ರಪ್ರದೇಶಕ್ಕೆ ಹೋಗುತ್ತದೆ ಎಂದು ಹೇಳಿದ್ದಾರೆ; ಇದೆಲ್ಲಾ ಮಾಡುತ್ತಿರುವುದು ಸರಿಯಲ್ಲ” ಎಂದರು.

“ಡಿಫೆನ್ಸ್‌ ಕಾಡಿರಾಡ್ ಮಾಡುವುದೇ ಇದ್ದರೆ ಅದಕ್ಕೆ ಕೆಐಎಡಿಬಿ ಮಧ್ಯಸ್ಥಿತಕೆ ಬೇಕಾಗಿರುಲ್ಲ. ಅದನ್ನು ನಿರ್ಧರಿಸುವ ಹಕ್ಕು ಕೇಂದ್ರ ಸರ್ಕಾರಕ್ಕಿದೆ. ಕೇಂದ್ರ ಯಾವುದೇ ರಾಜ್ಯದಲ್ಲಿ ಬೇಕಿದ್ದರೂ ಮಾಡಬಹುದು. ಜು.4 ರ ಸಭೆವರೆಗೂ ಸರ್ಕಾರಕ್ಕೆ ಇಲ್ಲಿ ಏನು ಮಾಡಬೇಕು ಎಂಬುದು ಗೊತ್ತಿರಲಿಲ್ಲ. ಅದಕ್ಕಾಗಿಯೇ ಅವರು ಇದ್ದಕ್ಕಿದ್ದಂತೆ ಡಿಫೆನ್ಸ್ ಕಾರಿಡಾರ್ ನೆಪದಲ್ಲಿ ಭೂಮಿಯನ್ನು ಕೆಐಎಡಿಬಿ ಲ್ಯಾಂಡ್‌ ಬ್ಯಾಂಕ್‌ನಲ್ಲಿ ಇಟ್ಟುಕೊಳ್ಳಲು ಯೋಚಿಸಿದ್ದಾರೆ. ಇವರ ಷಡ್ಯಂತ್ರವನ್ನು ನಾವು ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದರು.

“ನಾಳಿನ ಸಭೆ ಏನಾಗುತ್ತದೆ ನೋಡೋಣ, ನಾವು ಸಾಕಷ್ಟು ಆಶಾಭಾವ ಇಟ್ಟುಕೊಳ್ಳೋಣ. ನಮಗೆ ಸಾಕಷ್ಟು ತಾಳ್ಮೆ ಬೇಕು. ಏಕೆಂದರೆ, ರೈತರಾದ ನಮಗೆ ಬೆಳೆ ಬೆಳೆಯುವಾಗ ಕಾಣಿಸುವ ಎಲ್ಲ ಸಮಸ್ಯೆಗಳು ಈಗಲೂ ಬರುತ್ತವೆ. ನಾವು ಭೂಮಿಯನ್ನು ಅಳೆಯುವ ಕೆಲಸ ಮಾಡಿಲ್ಲ. ಅರ್ಧ ಎಕರೆ, ಒಂದು ಎಕರೆ ಇದ್ದರೂ ಶ್ರದ್ಧೆಯಿಂದ ಬೆಳೆ ಬೆಳೆಯುವ ಕೆಲಸ ಮಾಡುತ್ತಿದ್ದೇವೆ. ನಮಗೆ ನಷ್ಟವಾದರೂ ಬೇರೆಯವರಿಗೆ ನೀಡುವ ಕೆಲಸ ಮಾಡುತ್ತಿದ್ದೇವೆ. ಇಂಥ ನಿಸ್ವಾರ್ಥದ ಸಂಸ್ಖೃತಿ ಒಂದುಕಡೆಯಾದರೆ, ಎಲ್ಲವೂ ನಾನೇ ಎಂಬ ಮನಸ್ಥಿತಿ ಒಂದು ಕಡೆ. ಈ ಎರಡೂ ವೈರುಧ್ಯಗಳ ನಡುವೆ ನಡೆಯುತ್ತಿರುವ ಹೋರಾಟ ಇದು. ಅಹಂಕಾರ ಹಾಗೂ ಗಂಡಿನ ದರ್ಪ ಇಲ್ಲಿ ಕಾಣಿಸುತ್ತಿದೆ; ಆದರೆ ಇಲ್ಲಿ ತಾಯ್ತನದ ಶಕ್ತಿ ಇದೆ. ಅಂತಿಮವಾಗಿ ತಾಯ್ತನವೇ ಗೆಲ್ಲುತ್ತದೆ” ಎಂದರು.

ಸುಧೀರ್ಘ ಹಾಗೂ ಸಾತ್ವಿಕ ತಪಸ್ಸಿಗೆ ಫಲ ಸಿಗಲೇಬೇಕು: ನೂರ್ ಶ್ರೀಧರ್

ಜನಶಕ್ತಿ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್ ಮಾತನಾಡಿ, “13 ಹಳ್ಳಿಗಳ ಭೂತಪಸ್ವಿಗಳಿಗೆ ಶರಣು, 1200 ದಿನಗಳ ದೊಡ್ಡ ಮಹಾತಪಸ್ಸು ಮಾಡಿದ್ದೀರ. ಇಂಥಹ ಸುಧೀರ್ಘ ಹಾಗೂ ಸಾತ್ವಿಕ ತಪಸ್ಸಿಗೆ ನಾಳೆ ಒಳ್ಳೆ ಫಲ ಸಿಗಲೇಬೇಕು” ಎಂದರು.

“ಕೆಐಎಡಿಬಿ ಎಲ್ಲ ಕಡೆ ಭೂಮಿ ಕಬಳಿಸುತ್ತಿರುವಾಗ ನಮ್ಮನ್ನು ತಡೆಯುವವರೇ ಇಲ್ಲ ಎನ್ನುತ್ತಿರುವಾಗ, ಎಲ್ಲ ಸರ್ಕಾರಗಳ ಅಹಂಕಾರವನ್ನು 13 ಹಳ್ಳಿಗಳ ಜನ ತಡೆದಿದ್ದಾರೆ. ಅಂತಿಮ ಅಧಿಸೂಚನೆ ಬಂದ ಬಳಿಕವೂ ಹಲವು ಜನರ ಬೆಂಬಲ ಸಿಕ್ಕಿದೆ. ಇದು 13 ಹಳ್ಳಿಗಳ ಹೋರಾಟವಲ್ಲ, ಇಡೀ ದೇಶದ ಹೋರಾಟ. ನೂರಕ್ಕೆ ನೂರು ನಾಳಿನ ಫಲಿತಾಂಶ ನಮ್ಮ ಪರವಾಗಿ ಆಗೇ ಆಗುತ್ತದೆ. ನಾಳಿನ ಸಭೆಗೆ ಎಲ್ಲ ತಾಯಂದಿರೂ ಸಿಹಿ ತನ್ನಿ, ‘ಸಿಹಿ ತಿಂದು, ಸಿಹಿ ಸುದ್ದಿ ಕೊಡಿ’ ಎಂದು ಮುಖ್ಯಮಂತ್ರಿಗಳನ್ನು ಕೇಳೋಣ” ಎಂದರು.

“ಇಲ್ಲಿರುವ ಸಂಘಟನೆಗಳೆಲ್ಲವೂ ಕೇವಲ ಕಾವಲು ಪಡೆಗಳು ಮಾತ್ರ, ನಿಮ್ಮ ಭೂಮಿ ಕೈತಪ್ಪುವುದಕ್ಕೆ ನಾವು ಬಿಡುವುದೇ ಇಲ್ಲ. ಈ ತಪಸ್ಸಿಗೆ ನಾಳೆ ಪ್ರತಿಫಲ ಸಿಗಬಹುದು. ನಮ್ಮ ಭೂಮಿ ಬಲವಂತದ ವಶಪಡಿಸಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಿದರೆ ಶಿವನ ತಪ್ಪಸ್ಸು ಕೆಡಿಸಿದಂತೆ. ಶಿವ ಮೂರನೇ ಕಣ್ಣು ಬಿಟ್ಟಾಗ ಪ್ರಳಯ ಸೃಷ್ಠಿ ಆಗುತ್ತದೆ’ ಇಲ್ಲೂ ಕೂಡ ಅದೇ ಆಗುತ್ತದೆ. ಅಂಥ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಿದರೆ ಅವರಿಗೇ ತೊಂದರೆ; ನಮಗೇನೂ ಆಗುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಸಮಾವೇಶದಲ್ಲಿ ಇಂದಿರಾ ಕೃಷ್ಣಪ್ಪ, ಬಡಗಲಪುರ ನಾಗೇಂದ್ರ, ಎಸ್‌.ಆರ್‌. ಹಿರೇಮಠ್‌, ಟಿ.ಯಶವಂತ್, ಮೀನಾಕ್ಷಿ ಸುಂದರಂ, ಗುರುಪ್ರಸಾದ್ ಕೆರಗೋಡು, ಕೆವಿ ಭಟ್, ಚಾಮರಸ ಪಾಟೀಲ್, ಎಚ್.ಆರ್. ಬಸವರಾಜಪ್ಪ, ಮುಖ್ಯಮಂತ್ರಿ ಚಂದ್ರು, ದೇವಿ, ಚುಕ್ಕಿ ನಂಜುಂಡಸ್ವಾಮಿ, ಕಾಳಪ್ಪ, ಅಪ್ಪಣ್ಣ, ಜಿಜಿ ನಾರಾಯಣಸ್ವಾಮಿ, ಆಂಜನೇಐ ರೆಡ್ಡಿ, ನೂರ್ ಶ್ರೀಧರ್, ನಂಜಪ್ಪ ನಲ್ಲಪ್ಪನಹಳ್ಳಿ, ಮಾರೇಗೌಡ, ಕಾರಳ್ಳಿ ಶ್ರೀನಿವಾಸ್, ರಮೇಶ್‌ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೇವನಹಳ್ಳಿ: ಭೂಮಿ ಕೊಡುವುದಿಲ್ಲ ಎಂದು ದಾಖಲೆ ನೀಡಿದ ಶೇ.80 ರಷ್ಟು ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...