Homeಅಂತರಾಷ್ಟ್ರೀಯಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ: ವರದಿ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ: ವರದಿ

ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಮಹತ್ವದ ಬೆಳವಣಿಗೆ

- Advertisement -
- Advertisement -

ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ನಲ್ಲಿ ನಾಳೆ (ಜು.16) ಜಾರಿಯಾಗಲಿದ್ದ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.

ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಜಾರಿಗೊಳಿಸಲು ನಾಳೆಗೆ ದಿನಾಂಕ ನಿಗದಿಯಾಗಿದೆ. ಈ ನಡುವೆ ಅವರ ರಕ್ಷಣೆಗೆ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಯೆಮನ್‌ನ ಪ್ರಮುಖ ಸೂಫಿ ವಿದ್ವಾಂಸ ಶೇಖ್ ಹಬೀರ್ ಉಮರ್ ಬಿನ್ ಹಾಫಿಝ್ ಅವರ ಮೂಲಕ ನಡೆಸಿದ ಪ್ರಯತ್ನ ಫಲಪ್ರದವಾಗಿದೆ ಎಂದು ವರದಿ ಹೇಳಿದೆ.

ಶೇಖ್ ಹಬೀಬ್ ಅವರ ಪ್ರತಿನಿಧಿಗಳು ಮತ್ತು ಮೃತ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬದ ನಡುವೆ ಮಂಗಳವಾರ ಧಮರ್‌ನಲ್ಲಿ ನಿರ್ಣಾಯಕ ಸಭೆ ನಡೆಯುವ ನಿರೀಕ್ಷೆಯಿದೆ. ಯೆಮನ್‌ನ ಹೊದೈದಾ ರಾಜ್ಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಮತ್ತು ಶೂರಾ ಕೌನ್ಸಿಲ್ ಸದಸ್ಯರಾಗಿ ಪ್ರಬಲ ಹುದ್ದೆಗಳನ್ನು ಹೊಂದಿರುವ ತಲಾಲ್ ಅವರ ಕುಟುಂಬದ ಸಂಬಂಧಿ ಮಾತುಕತೆಯಲ್ಲಿ ಭಾಗವಹಿಸಲು ಧಮರ್‌ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿ ವಿವರಿಸಿದೆ.

ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...

ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ ಸೆರೆ

ತಮಿಳುನಾಡಿನ ಥೇಣಿ ಜಿಲ್ಲಾ ಜೈಲಿನಿಂದ 17 ಕೈದಿಗಳು ಪರಾರಿಯಾದ ಒಂದು ದಿನದೊಳಗೆ, ಮಂಗಳವಾರ ಸಂಜೆಯ ವೇಳೆಗೆ ತಮಿಳುನಾಡು ಪೊಲೀಸರು ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಅವರ ಪೈಕಿ 13 ಮಂದಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ವಲಯದ...

ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರು ಕಟ್‌: ಎಸ್‌ಐಆರ್‌ ಬಳಿಕ ಅರ್ಧದಷ್ಟು ಮತದಾರರು ಪಟ್ಟಿಯಿಂದ ಹೊರಕ್ಕೆ 

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಬರೋಬ್ಬರಿ 46.88 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಂದರೆ, ಎಸ್‌ಐಆರ್‌ ಆರಂಭಕ್ಕೂ ಮುನ್ನ ನಗರದಲ್ಲಿದ್ದ ಒಟ್ಟು...

ಉತ್ತರ ಪ್ರದೇಶ| ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಸಾವು ಪ್ರಕರಣ; ಎಫ್‌ಐಆರ್ ದಾಖಲು

ಅಕ್ಟೋಬರ್ 25 ರಂದು ಪ್ರತಾಪಗಢದ ಡಾ. ಸೋನೆಲಾಲ್ ಪಟೇಲ್ ವೈದ್ಯಕೀಯ ಕಾಲೇಜು ಆವರಣದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಕುಟುಂಬವು, ಸೋಮವಾರ ತಡರಾತ್ರಿ ಆತನ ಮೃತದೇಹವನ್ನು ಹೊತ್ತುಕೊಂಡು ತಮ್ಮ ಊರಾದ...

SIR ಬಳಿಕವೂ ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಬಿಜೆಪಿ ಸದಸ್ಯನ ಹೆಸರು!

ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ. ಈ ನಡುವೆ ಬಿಜೆಪಿ ಸದಸ್ಯ ಉದಯ್ ಕುಮಾರ್ ಹಾಗೂ ಅವರ ಪತ್ನಿ ಬಿಂದು...

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...