Homeಕರ್ನಾಟಕದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ: 'ಕರ್ನಾಟಕ ಗೆದ್ದಿದೆ' ಎಂದು ಹೋರಾಟ ಸಮಿತಿಗಳಿಂದ ಹೃದಯಸ್ಪರ್ಶಿ ಘೋಷಣೆ

ದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ: ‘ಕರ್ನಾಟಕ ಗೆದ್ದಿದೆ’ ಎಂದು ಹೋರಾಟ ಸಮಿತಿಗಳಿಂದ ಹೃದಯಸ್ಪರ್ಶಿ ಘೋಷಣೆ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ಕಳೆದ 1198 ದಿನಗಳಿಂದಲೂ ತಮ್ಮ ಪೂರ್ವಜರ ಮಣ್ಣಿಗಾಗಿ ನಡೆಸುತ್ತಿದ್ದ ತಪಸ್ಸಿನಂತಹ ಹೋರಾಟಕ್ಕೆ ಇಂದು ಐತಿಹಾಸಿಕ ವಿಜಯ ಲಭಿಸಿದೆ. “ಇಂದು ಕರ್ನಾಟಕ ಗೆದ್ದಿದೆ! ನಮ್ಮ ಹಿರಿಯರ ಮಣ್ಣನ್ನು ನಾವು ಮಾರುವುದಿಲ್ಲ ಎಂಬ ರೈತರ ಅಚಲ ಸಂಕಲ್ಪಕ್ಕೆ ಕೊನೆಗೂ ಫಲ ಸಿಕ್ಕಿದೆ” ಎಂದು ಹೋರಾಟ ಸಮಿತಿಗಳು ಜಂಟಿಯಾಗಿ ಘೋಷಿಸಿವೆ. ಈ ಘೋಷಣೆ ರೈತರ ಮುಖದಲ್ಲಿ ಹರ್ಷವನ್ನು, ಕಣ್ಣಲ್ಲಿ ಆನಂದಭಾಷ್ಪವನ್ನು ತರಿಸಿತ್ತು ಎಂದು ಜಂಟಿ ಹೇಳಿಕೆ ತಿಳಿಸಿದೆ.

ರೈತರ ಕಷ್ಟಗಳಿಗೆ ಸರ್ಕಾರ ಆರಂಭದಲ್ಲಿ ಸ್ಪಂದಿಸದೆ, ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಕಠಿಣ ಸಂದರ್ಭದಲ್ಲಿ ಸಂಯುಕ್ತ ಹೋರಾಟ ಕರ್ನಾಟಕವು ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ದೃಢವಾಗಿ ತೀರ್ಮಾನಿಸಿ ಜೂನ್ 25ರಂದು “ದೇವನಹಳ್ಳಿ ಚಲೋ”ಗೆ ಕರೆ ನೀಡಿತ್ತು. ಈ ಕರೆಯು ಇಡೀ ಕರ್ನಾಟಕವನ್ನು ಜಾಗೃತಗೊಳಿಸಿತು; ನಟ ಪ್ರಕಾಶ್ ರಾಜ್ ಸೇರಿದಂತೆ ನಾಡಿನ ನಾಗರಿಕ ಸಮಾಜ ಅಮೋಘವಾಗಿ ಸ್ಪಂದಿಸಿತ್ತು. ಆದರೂ, ಆಡಳಿತವು ಹೋರಾಟಗಾರರನ್ನು ಬಂಧಿಸಿ ಚಳುವಳಿಯನ್ನು ದಮನಿಸುವ ಪ್ರಯತ್ನ ನಡೆಸಿತ್ತು. ಆದರೆ, ಕರ್ನಾಟಕದ ಎಲ್ಲಾ ಜನ ಸಂಘಟನೆಗಳ ನಾಯಕತ್ವ ಒಂದು ಮುಷ್ಟಿಯಾಗಿ, ದಿಟ್ಟವಾಗಿ ಇದನ್ನು ಎದುರಿಸಿ ಫ್ರೀಡಂ ಪಾರ್ಕ್‌ನಲ್ಲಿ “ಭೂ ಸತ್ಯಾಗ್ರಹ”ವನ್ನು ಮುಂದುವರೆಸಿತು ಎಂದು ಜಂಟಿ ಹೇಳಿಕೆ ತಿಳಿಸಿದೆ.

ಜುಲೈ 4ರಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಿತು. ಅಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕತ್ವ ಒಳಗೊಂಡಂತೆ ವಿವಿಧ ರಾಜ್ಯಗಳಿಂದ ಅಪೂರ್ವ ಬೆಂಬಲ ವ್ಯಕ್ತವಾಗಿತ್ತು. ಕರ್ನಾಟಕದ ದುಡಿಯುವ ಜನರು, ವಿಶೇಷವಾಗಿ ಬಡ ಬಗರ್ ಹುಕುಂ ರೈತರು, ಭೂಮಿ ಹಕ್ಕು ಕಳೆದುಕೊಂಡವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ “ನಾಡ ಉಳಿಸಿ ಸಮಾವೇಶ”ವನ್ನು ಕರ್ನಾಟಕದ ದನಿಯಾಗಿ ಮಾರ್ಪಡಿಸಿದ್ದರು. ಸಭೆಯಲ್ಲಿ ಮುಖ್ಯಮಂತ್ರಿಗಳು “ಸರ್ಕಾರಕ್ಕೆ ಇನ್ನು 10 ದಿನಗಳ ಕಾಲಾವಕಾಶ ಕೊಡಿ” ಎಂದು ಚಳುವಳಿಗಾರರನ್ನು ಕೋರಿದ್ದರು. ರೈತರಿಗೆ ಯಾವುದೇ ವಂಚನೆಯಾಗದಂತೆ ನೋಡಿಕೊಳ್ಳಬೇಕು ಎಂಬ ಭಾವನಾತ್ಮಕ ಮನವಿಯೊಂದಿಗೆ ಈ ಕಾಲಾವಕಾಶವನ್ನು ಸರ್ಕಾರಕ್ಕೆ ನೀಡಲಾಗಿತ್ತು ಎಂದು ಅದು ಹೇಳಿದೆ.

ಈ ಹತ್ತು ದಿನಗಳ ಅವಧಿಯು ರೈತರಿಗೆ ಮತ್ತೊಂದು ಅಗ್ನಿಪರೀಕ್ಷೆಯಾಗಿತ್ತು. ರೈತರ ಒಗ್ಗಟ್ಟನ್ನು ಒಡೆಯಲು ಕೆಲವು ಸ್ಥಳೀಯ ಪುಡಾರಿಗಳು ಹಾಗೂ ರಿಯಲ್ ಎಸ್ಟೇಟ್ ಏಜೆಂಟರು ಅನೇಕ ಹುನ್ನಾರಗಳನ್ನು ನಡೆಸಿದರು. ಆದರೆ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಚನ್ನರಾಯಪಟ್ಟಣ ಹಾಗೂ 13 ಹಳ್ಳಿಗಳ ಜನ ಈ ಷಡ್ಯಂತ್ರವನ್ನು ಧೈರ್ಯದಿಂದ ವಿಫಲಗೊಳಿಸಿದರು. ಪ್ರತಿ ಹಳ್ಳಿಯಲ್ಲಿ ಗ್ರಾಮ ಸಂಕಲ್ಪ ಸಮಾವೇಶಗಳನ್ನು ನಡೆಸಿ, ಅಂತಿಮವಾಗಿ ಜುಲೈ 14ರಂದು ನಡೆದ “ಗ್ರಾಮ ಸಂಕಲ್ಪ ಸಮಾವೇಶ”ದಲ್ಲಿ “ಪ್ರಾಣ ಹೋದರೂ – ಭೂಮಿ ಕೊಡುವುದಿಲ್ಲ” ಎಂಬ ತಮ್ಮ ಒಗ್ಗಟ್ಟಿನ ಮತ್ತು ಪ್ರಾಣಕ್ಕಿಂತ ಮಿಗಿಲಾದ ತೀರ್ಮಾನವನ್ನು ಮತ್ತೊಮ್ಮೆ ರುಜುವಾತುಪಡಿಸಿದರು ಎಂದು ಹೇಳಿಕೆಯು ತಿಳಿಸಿದೆ.

ಇಂದು, ಅಂದರೆ ಜುಲೈ 15ರಂದು, ಇಡೀ ಕರ್ನಾಟಕ ಮಾತ್ರವಲ್ಲದೆ ಭಾರತವೇ ಕಾತರದಿಂದ ಕಾಯುತ್ತಿದ್ದ ಮಹತ್ವದ ಸಭೆ ವಿಧಾನ ಸೌಧದಲ್ಲಿ ನಡೆಯಿತು. ಸಭೆಯಲ್ಲಿ ನೇರವಾಗಿ ವಿಷಯಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕೃಷಿಯನ್ನು ಬಿಡುವುದಿಲ್ಲ” ಎಂಬ ರೈತರ ಅಚಲ ಸಂಕಲ್ಪವನ್ನು, ಮತ್ತು “ಇಡೀ ಕರ್ನಾಟಕದ ಜನ ಸಂಘಟನೆಗಳು ಹಾಗೂ ನಾಗರಿಕರೆಲ್ಲಾ ಒಗ್ಗೂಡಿ ದನಿ ಎತ್ತಿದ್ದ ಐತಿಹಾಸಿಕ ಪರಿಯನ್ನು ಪುರಸ್ಕರಿಸಿ”, ಭೂಸ್ವಾಧೀನದ ಇಡೀ ನೋಟಿಫಿಕೇಶನ್‌ ಅನ್ನು ಸಂಪೂರ್ಣವಾಗಿ ಕೈಬಿಡುವ ಐತಿಹಾಸಿಕ ತೀರ್ಮಾನವನ್ನು ಘೋಷಿಸಿದರು. ಜನಮನಕ್ಕೆ ಸ್ಪಂದಿಸಿದ್ದಕ್ಕಾಗಿ, ಈ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದ್ದಕ್ಕಾಗಿ ಸರ್ಕಾರಕ್ಕೆ, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಕಾಂಗ್ರೆಸ್ಸಿನ ಹೈಕಮಾಂಡ್‌ಗೆ, ಅದರಲ್ಲೂ ವಿಶೇಷವಾಗಿ ರಾಹುಲ್ ಗಾಂಧಿಯವರಿಗೆ ಹೋರಾಟ ಸಮಿತಿಗಳು ಕೃತಜ್ಞತೆಗಳನ್ನು ಸಲ್ಲಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇದು ಜನ ಚಳುವಳಿಗಳ ಒಗ್ಗಟ್ಟಿನ ಹೋರಾಟಕ್ಕೆ ಸಂದ ಸಮಷ್ಟಿ ಜಯವಾಗಿದೆ” ಎಂದು ಹೋರಾಟಗಾರರು ಭಾವುಕವಾಗಿ ಬಣ್ಣಿಸಿದ್ದಾರೆ. ಈ ಐಕ್ಯತೆಯನ್ನು ಹೀಗೇ ಮುಂದುವರೆಸುವುದಾಗಿ, ಜನರ ನೋವಿಗೆ ದನಿಯಾಗಿ ದುಡಿಯುವುದಾಗಿ ಮತ್ತು ಆಳುವವರನ್ನು ಪ್ರಶ್ನಿಸುವ ಜನದನಿಯಾಗಿ ಕೆಲಸ ಮಾಡುವುದಾಗಿ ಈ ಐತಿಹಾಸಿಕ ಸಂದರ್ಭದಲ್ಲಿ ಮತ್ತೊಮ್ಮೆ ಸಂಕಲ್ಪ ತೊಟ್ಟಿದ್ದಾರೆ. ಕರ್ನಾಟಕದ ಅಭಿವೃದ್ಧಿ ಮಾದರಿ ಹೇಗಿರಬೇಕು? ಭೂ ಬಳಕೆ ನೀತಿ ಏನಾಗಿರಬೇಕು? ಎಂಬ ಅಮೂಲ್ಯ ಪ್ರಶ್ನೆಗಳ ಸುತ್ತ ಸಾರ್ವಜನಿಕ ಚರ್ಚೆ ಚಾಲನೆ ನೀಡುವ ತೀರ್ಮಾನವನ್ನೂ ತೆಗೆದುಕೊಳ್ಳುತ್ತಿದ್ದು, ಸರ್ಕಾರವೂ ಈ ಚರ್ಚೆಯಲ್ಲಿ ಕೈಜೋಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎಂದು ಅದು ತಿಳಿಸಿದೆ.

‘ಜನ ಚಳವಳಿಗಳ ಐಕ್ಯತೆ ಚಿರಾಯುವಾಗಲಿ!’

‘ಬಲವಂತದ ಭೂಸ್ವಾಧೀನಗಳು ಕೊನೆಯಾಗಲಿ!’

‘ಭೂಮಿಯ ಮೇಲೆ ದುಡಿಯುವ ಜನರ ಹಕ್ಕು ಮರುಸ್ಥಾಪನೆಯಾಗಲಿ!’

ಇದು ಹೋರಾಟಗಾರರ ಅಚಲ ನಂಬಿಕೆಯ, ಸಾಮೂಹಿಕ ಪ್ರಯತ್ನದ ಮತ್ತು ಪ್ರಜಾಪ್ರಭುತ್ವದ ವಿಜಯದ ಸಂಕೇತವಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...