Homeಕರ್ನಾಟಕದೇವನಹಳ್ಳಿ ಗೆಲುವು ಪ್ರಜಾಪ್ರಭುತ್ವದ ವಿಜಯ: ಸಂಯುಕ್ತ ಕಿಸಾನ್ ಮೋರ್ಚಾದಿಂದ ಅಭಿನಂದನೆ, ದೇಶಾದ್ಯಂತ ವಿಜಯೋತ್ಸವ ಆಚರಣೆಗೆ ಕರೆ

ದೇವನಹಳ್ಳಿ ಗೆಲುವು ಪ್ರಜಾಪ್ರಭುತ್ವದ ವಿಜಯ: ಸಂಯುಕ್ತ ಕಿಸಾನ್ ಮೋರ್ಚಾದಿಂದ ಅಭಿನಂದನೆ, ದೇಶಾದ್ಯಂತ ವಿಜಯೋತ್ಸವ ಆಚರಣೆಗೆ ಕರೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ದೇವನಹಳ್ಳಿ ರೈತರು ತಮ್ಮ ಭೂಮಿ ರಕ್ಷಣೆಗಾಗಿ ನಡೆಸಿದ ಹೋರಾಟದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ್ದು, ರಾಜ್ಯ ಸರ್ಕಾರವು 1,777 ಎಕರೆ ಕೃಷಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಈ ಮಹತ್ವದ ಗೆಲುವಿಗೆ ಸಂಯುಕ್ತ ಕಿಸಾನ್ ಮೋರ್ಚಾ (SKM) ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದು, ಈ ವಿಜಯವನ್ನು ಭಾರತದಾದ್ಯಂತದ ಹಳ್ಳಿಗಳಲ್ಲಿ ಆಚರಿಸಲು ಕರೆ ನೀಡಿದೆ.

ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಭೂಸ್ವಾಧೀನಕ್ಕೆ ಗುರುತಿಸಿದ್ದ 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸುವಲ್ಲಿ ದೇವನಹಳ್ಳಿ ರೈತರು ಯಶಸ್ವಿಯಾಗಿದ್ದಾರೆ ಎಂದು SKM ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಗೆಲುವಿನ ಹಿಂದಿರುವ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಕಿಸಾನ್, ಕಾರ್ಮಿಕ, ವಿದ್ಯಾರ್ಥಿ, ಯುವ, ಮಹಿಳಾ, ದಲಿತ ಸಂಘಟನೆಗಳ ಅಚಲ ಸಂಕಲ್ಪವನ್ನು SKM ಕೊಂಡಾಡಿದೆ. ಮೂರು ವರ್ಷಗಳ ಸುದೀರ್ಘ ಹೋರಾಟದಲ್ಲಿ ಪ್ರದರ್ಶಿತವಾದ ರೈತ ಸಂಘಟನೆಗಳ ಒಗ್ಗಟ್ಟು, ಕಾರ್ಮಿಕ ಸಂಘಟನೆಗಳ ಬೆಂಬಲ ಮತ್ತು ವ್ಯಾಪಕ ಕಾರ್ಮಿಕ-ರೈತ ಐಕ್ಯತೆಯೇ ಈ ದೊಡ್ಡ ಗೆಲುವಿಗೆ ನಿರ್ಣಾಯಕ ಅಂಶಗಳಾಗಿವೆ ಎಂದು SKM ಹೇಳಿದೆ.

ದೇವನಹಳ್ಳಿ ಹೋರಾಟದ ವಿಶಿಷ್ಟತೆಯೆಂದರೆ, ಅದು ಕೇವಲ ಭೂಮಿಗೆ ಪರಿಹಾರ ಕೇಳುವ ಹೋರಾಟವಾಗಿರಲಿಲ್ಲ, ಬದಲಿಗೆ ಫಲವತ್ತಾದ ಕೃಷಿ ಭೂಮಿಯ ಅಸ್ತಿತ್ವವನ್ನು ರಕ್ಷಿಸುವ ಹೋರಾಟವಾಗಿತ್ತು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಬಹು-ಬೆಳೆ ಭೂಮಿಯನ್ನು ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಬಿಲ್ಡರ್‌ಗಳ ಹಿತಾಸಕ್ತಿಗಾಗಿ ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸಿಕೊಡಲು ಹಿಂದಿನ ಬಿಜೆಪಿ ಸರ್ಕಾರ ಸಜ್ಜಾಗಿತ್ತು ಎಂಬುದನ್ನು SKM ಉಲ್ಲೇಖಿಸಿದೆ.

13 ಗ್ರಾಮಗಳ ರೈತರು ತಳಮಟ್ಟದಿಂದ ಪ್ರಬಲ ಪ್ರತಿರೋಧವನ್ನು ಕಟ್ಟಿಕೊಂಡರು. ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರು 3 ಗ್ರಾಮಗಳನ್ನು ಸ್ವಾಧೀನದಿಂದ ಹೊರಗಿಡುವ ಮೂಲಕ ಒಗ್ಗಟ್ಟನ್ನು ಒಡೆಯಲು ನಡೆಸಿದ ಪ್ರಯತ್ನಗಳನ್ನು ರೈತರು ಸಮರ್ಥವಾಗಿ ಎದುರಿಸಿದರು. ಜೂನ್ 26, 2025 ರಂದು ಪೊಲೀಸರು ಶಾಂತಿಯುತ ಪ್ರತಿಭಟನಾಕಾರರ ಮೇಲೆ ಕ್ರೂರ ದಾಳಿ ನಡೆಸಿ ಬಂಧಿಸಿದಾಗ, ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗಳು ಭುಗಿಲೆದ್ದಿತ್ತು. ಬರಹಗಾರರು, ಕಲಾವಿದರು, ನಾಗರಿಕ ಸಮಾಜದ ಗುಂಪುಗಳು ರೈತರ ಪರವಾಗಿ ದನಿ ಎತ್ತಿದವು. ಹೋರಾಟದ ಕೇಂದ್ರಬಿಂದು ನಂತರ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಸ್ಥಳಾಂತರಗೊಂಡಿತು, ಅಲ್ಲಿ ಸಾವಿರಾರು ಜನರು ಸಂಯುಕ್ತ ಹೋರಾಟ ಕರ್ನಾಟಕದ ಅಡಿಯಲ್ಲಿ ಹಲವು ದಿನಗಳ ಕಾಲ ಪ್ರತಿಭಟನೆ ನಡೆಸಿದರು. ವಿಜೂ ಕೃಷ್ಣನ್, ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್ ಮತ್ತು ಸುನೀಲಂ ಸೇರಿದಂತೆ SKM ನಾಯಕರು ಸಹ ಈ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ಅದು ಹೇಳಿದೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಸ್ವಾಧೀನ ಪ್ರಕ್ರಿಯೆಗಳನ್ನು ನಿಲ್ಲಿಸಿ 1,777 ಎಕರೆ ಭೂಮಿಯನ್ನು ಮುಕ್ತಗೊಳಿಸಲು ತೆಗೆದುಕೊಂಡ ಸಕಾರಾತ್ಮಕ ನಿರ್ಧಾರವನ್ನು SKM ಸ್ವಾಗತಿಸಿದೆ. LARR ಕಾಯಿದೆ 2013 ಅನ್ನು ಉಲ್ಲಂಘಿಸಿ ನಡೆಯುತ್ತಿರುವ ಅನ್ಯಾಯದ ಭೂಸ್ವಾಧೀನಗಳ ವಿರುದ್ಧ ಭಾರತದಾದ್ಯಂತ ಸಾವಿರಾರು ಸ್ಥಳಗಳಲ್ಲಿ ನಡೆಯುತ್ತಿರುವ ಭೂ ಹೋರಾಟಗಳಿಗೆ ದೇವನಹಳ್ಳಿ ವಿಜಯವು ಸ್ಫೂರ್ತಿ ನೀಡಲಿದೆ ಎಂದು SKM ವಿಶ್ವಾಸ ವ್ಯಕ್ತಪಡಿಸಿದೆ.

ಈ ಐತಿಹಾಸಿಕ ಹೋರಾಟದ ಮಾಹಿತಿಯನ್ನು ಜನರಿಗೆ ತಲುಪಿಸಲು ಮತ್ತು ತಮ್ಮ ಹಳ್ಳಿಗಳು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಾಮೂಹಿಕ ಪ್ರದರ್ಶನಗಳೊಂದಿಗೆ ಈ ಮಹಾನ್ ವಿಜಯವನ್ನು ಆಚರಿಸಲು SKM ದೇಶದ ರೈತರಿಗೆ ಕರೆ ನೀಡಿದೆ.

ದೇವನಹಳ್ಳಿ ಭೂ ಹೋರಾಟದ ಐತಿಹಾಸಿಕ ವಿಜಯ: ಪ್ರಜಾಪ್ರಭುತ್ವದ ಮರುಹುಟ್ಟು ಮತ್ತು ರೈತಶಕ್ತಿಯ ಹೊಸ ಅಧ್ಯಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...