Homeಕರ್ನಾಟಕಕರಾವಳಿಯ ನೆಲದಲ್ಲಿ ಎಸ್‌ವೈಎಸ್‌ನಿಂದ 'ಸೌಹಾರ್ದ ಸಂಚಾರ': ಸರ್ವಧರ್ಮಿಯರು ಭಾಗಿ

ಕರಾವಳಿಯ ನೆಲದಲ್ಲಿ ಎಸ್‌ವೈಎಸ್‌ನಿಂದ ‘ಸೌಹಾರ್ದ ಸಂಚಾರ’: ಸರ್ವಧರ್ಮಿಯರು ಭಾಗಿ

- Advertisement -
- Advertisement -

ಇತ್ತೀಚೆಗೆ ಕೋಮು ಕೊಲೆಗಳು, ಗುಂಪು ಹತ್ಯೆಗೆ ಸಾಕ್ಷಿಯಾಗಿರುವ ಕರಾವಳಿಯಲ್ಲಿ ‘ಸುನ್ನೀ ಯುವಜನ ಸಂಘ (ಎಸ್‌ವೈಎಸ್‌) ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಘೋಷವಾಕ್ಯದೊಂದಿಗೆ ‘ಸೌಹಾರ್ದ ಸಂಚಾರ’ ಯಾತ್ರೆ ಕೈಗೊಂಡಿದೆ.

ಜುಲೈ 14ರಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಚಾಲನೆ ನೀಡಲಾಗಿರುವ ಯಾತ್ರೆಯು ಇಂದು (ಜುಲೈ 16) ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಮಾಪ್ತಿಯಾಗಲಿದೆ.

ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾಪು, ಪಡುಬಿದ್ರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ, ಸುರತ್ಕಲ್, ಮಂಗಳೂರು, ಫರಂಗಿಪೇಟೆ, ಬಿ.ಸಿ ರೋಡ್, ಕಲ್ಲಡ್ಕ, ಮಾಣಿ, ಪುತ್ತೂರು, ಜಾಲ್ಸೂರು, ಸುಳ್ಯ ಹೀಗೆ ಎರಡು ಜಿಲ್ಲೆಗಳ ಪ್ರಮುಖ ಪಟ್ಟಣಗಳಲ್ಲಿ ಯಾತ್ರೆ ಹಾದು ಹೋಗಿದೆ.

ಎಲ್ಲಾ ಪ್ರದೇಶಗಳಲ್ಲಿಯೂ, ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ಸೇರಿದಂತೆ ವಿವಿಧ ಧರ್ಮಗಳ ನಾಯಕರು, ಸ್ಥಳೀಯ ರಾಜಕೀಯ, ಸಾಮಾಜಿಕ, ಸಾಮುದಾಯಿಕ ಮುಖಂಡರು ಮತ್ತು ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಕೋಮು ಸಂಘರ್ಷದ ಪ್ರದೇಶ ಎಂಬ ಕಪ್ಪು ಚುಕ್ಕೆಯಿದೆ. ಈ ವರ್ಷದ 6 ತಿಂಗಳ ಒಳಗೆ ಎರಡು ಕೋಮು ಹತ್ಯೆಗಳು, ಮತ್ತೊಂದು ಕೋಮು ಪ್ರಚೋದಿತ ಗುಂಪು ಹತ್ಯೆ ನಡೆದಿವೆ. ಈ ಕಪ್ಪು ಚುಕ್ಕೆಯನ್ನು ಹೋಗಲಾಡಿಸಿ ತುಳುನಾಡಿನ ಸೌಹಾರ್ದ ಪರಂಪರೆಯನ್ನು ಎತ್ತಿ ಹಿಡಿಯುವುದು ಈ ಸೌಹಾರ್ದ ಸಂಚಾರ ಯಾತ್ರೆಯ ಉದ್ದೇಶ ಎಂದು ಸಂಘಟಕರು ಹೇಳಿದ್ದಾರೆ.

ಎಸ್‌ವೈಎಸ್‌, ಕಳೆದೆರಡು ದಿನಗಳಿಂದ ನಿಮಿಷಾ ಪ್ರಿಯಾ ವಿಷಯದಲ್ಲಿ ಸುದ್ದಿಯಲ್ಲಿರುವ ಭಾರತದ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ನೇತೃತ್ವ ನೀಡುವ ಸುನ್ನೀ ಯುವಕರ ಸಂಘಟನೆಯಾಗಿದೆ. ಇದರ ಸಹೋದರ ವಿದ್ಯಾರ್ಥಿ ಸಂಘಟನೆ ಸುನ್ನೀ ಸ್ಟೂಡೆಂಡ್ ಫೆಡರೇಶನ್ (ಎಸ್‌ಎಸ್‌ಎಫ್) ಇತ್ತೀಚಿಗೆ ರಾಜ್ಯಾದ್ಯಂತ ‘ಸೌಹಾರ್ದ ನಡಿಗೆ’ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಜುಲೈ 4ರಂದು ಆ ಕಾರ್ಯಕ್ರಮದ ಸಮಾರೋಪ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿದೆ.

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...