Homeಮುಖಪುಟಪ್ರೊ. ಅಲಿ ಖಾನ್ ಪ್ರಕರಣ: ಎಸ್‌ಐಟಿಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಪ್ರೊ. ಅಲಿ ಖಾನ್ ಪ್ರಕರಣ: ಎಸ್‌ಐಟಿಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರ ‘ಆಪರೇಷನ್ ಸಿಂಧೂರ’ ಕುರಿತ ಎರಡು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳ ತನಿಖೆಗಾಗಿ ರಚಿಸಲಾದ ಹರಿಯಾಣ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) “ತನ್ನನ್ನು ತಾನೇ ದಾರಿ ತಪ್ಪಿಸುತ್ತಿದೆ” ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಕೇವಲ ಎರಡು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತನಿಖೆ ಮಾಡಲು ಮಾತ್ರ ಎಸ್‌ಐಟಿಯನ್ನು ರಚಿಸಲಾಗಿದೆ ಎಂಬುವುದನ್ನು ಪುನರುಚ್ಚರಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಎಸ್‌ಐಟಿ ತನ್ನ ತನಿಖಾ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವುದು ಏಕೆ? ಎಂದು ಪ್ರಶ್ನಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 28ರಂದು ಆದೇಶ ನೀಡಿದ್ದ ನ್ಯಾಯಾಲಯ, ಎಸ್‌ಐಟಿಯ ತನಿಖೆ ಅಲಿ ಖಾನ್ ಅವರ ಎರಡು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂದು ಹೇಳಿತ್ತು. ಆದರೆ, ಎಸ್‌ಐಟಿ ಅಲಿ ಖಾನ್ ಅವರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ. ಅಲ್ಲದೆ, ಕಳೆದ ಹತ್ತು ವರ್ಷಗಳ ಅವರ ವಿದೇಶ ಪ್ರವಾಸಗಳ ಬಗ್ಗೆ ಕೇಳುತ್ತಿದೆ ಎಂದು ಅಲಿ ಖಾನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅಲಿ ಖಾನ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ನಿಜವಾದ ಅರ್ಥವನ್ನು ತಿಳಿದುಕೊಳ್ಳಲು ಮತ್ತು ಅವುಗಳಿಂದ ಯಾವ ಅಪರಾಧ ನಡೆದಿದೆ ಎಂಬುವುದನ್ನು ಸ್ಪಷ್ಟಪಡಿಸಲು ಎಸ್‌ಐಟಿಯನ್ನು ನಿರ್ದಿಷ್ಟವಾಗಿ ರಚಿಸಲಾಗಿದೆ. ಹೀಗಿರುವಾಗ ಅರ್ಜಿದಾರರ ಎಲೆಕ್ಟ್ರಾನಿಕ್ ಸಾಧನಗಳನ್ನು ಏಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಎಂದು ನ್ಯಾಯಾಲಯ ಪ್ರಶ್ನಿಸಿತು.

ಎಸ್‌ಐಟಿಯವರು ಯಾವ ಉದ್ದೇಶಕ್ಕೆ ಅಲಿ ಖಾನ್ ಅವರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬುವುದು ನಮಗೆ ಗೊತ್ತಾಗಬೇಕಿದೆ. ಈ ಬಗ್ಗೆ ನಾವು ಅಧಿಕಾರಿಗಳನ್ನು ಕರೆದು ಕೇಳುತ್ತೇವೆ ಎಂದು ನ್ಯಾಯಮೂರ್ತಿ ಕಾಂತ್ ಅವರು ರಾಜ್ಯ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರಿಗೆ ತಿಳಿಸಿದರು.

“ಎಸ್‌ಐಟಿ ಅಲಿ ಖಾನ್ ಅವರ ಪೋಸ್ಟ್‌ಗಳನ್ನು ಮಾತ್ರ ಪರಿಶೀಲಿಸಬೇಕಿತ್ತು. ಆದರೆ, ತನ್ನನ್ನು ತಾನೇ ದಾರಿ ಅದು ತಪ್ಪಿಸುತ್ತಿರುವುದು ಏಕೆ? ಇದು ನಮಗೆ ಗೊತ್ತಾಗಬೇಕು” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, “ತನಿಖೆಯನ್ನು ಹೇಗೆ ನಡೆಸಬೇಕು ಎಂಬುದು ತನಿಖಾಧಿಕಾರಿಯ ವಿಶೇಷ ಹಕ್ಕು ಮತ್ತು ಅವರು ಎಲ್ಲಾ ಅಪರಾಧ ಅಂಶಗಳನ್ನು ಪರಿಶೀಲಿಸಬೇಕಿದೆ ಎಂದರು. ಇದಕ್ಕೆ ಕೌಂಟರ್ ಕೊಟ್ಟ ವಕೀಲ ಸಿಬಲ್ “ಸಂಚಾರ ವಿಚಾರಣೆ” ಸಾಧ್ಯವಿಲ್ಲ. ಅರ್ಜಿದಾರರಿಗೆ ನಾಲ್ಕು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಅರ್ಜಿದಾರರು (ಅಲಿ ಖಾನ್) ತನಿಖೆಗೆ ಸಹಕರಿಸಿದ್ದಾರೆ ಮತ್ತು ತಮ್ಮ ಎಲೆಕ್ಟ್ರಾನಿಕ್ಸ್‌ ಸಾಧನಗಳನ್ನು ಒಪ್ಪಿಸಿದ್ದಾರೆ ಎಂದು ಗಮನಿಸಿದ ನ್ಯಾಯಾಲಯ, ಅವರಿಗೆ ಮತ್ತೆ ಸಮನ್ಸ್ ನೀಡಬಾರದು ಎಂದು ನಿರ್ದೇಶಿತು. ಅಲ್ಲದೆ, “ತನಿಖೆ ನಡೆಸುವುದಕ್ಕೆ ನಿಮಗೆ ಅವರ ಅಗತ್ಯ ಇಲ್ಲ. ಒಂದು ನಿಘಂಟಿನ ಅವಶ್ಯಕತೆ ಇದೆ” ಎಂದು ಛೀಮಾರಿ ಹಾಕಿತು.

ನಂತರ, ನ್ಯಾಯಾಲಯವು ಮೇ 28 ರ ಆದೇಶವನ್ನು ಎಸ್‌ಐಟಿಗೆ ನೆನಪಿಸಿತು. ನಾಲ್ಕು ವಾರಗಳಲ್ಲಿ ತನಿಖೆಯನ್ನು ಮುಗಿಸಲು ನಿರ್ದೇಶಿಸಿತು.

ಮಧ್ಯಂತರ ಜಾಮೀನು ನೀಡುವಾಗ ವಿಧಿಸಲಾದ ಷರತ್ತುಗಳ ಪ್ರಕಾರ ಅರ್ಜಿದಾರರು ಸಬ್-ಜುಡಿಸ್ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವುದನ್ನು ಮಾತ್ರ ನಿರ್ಬಂಧಿಸಲಾಗಿದೆ. ಅವರು ಇತರ ವಿಷಯಗಳ ಬಗ್ಗೆ ಬರೆಯಲು ಅಥವಾ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸ್ವತಂತ್ರರು ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಮೇ 21ರಂದು, ನ್ಯಾಯಾಲಯವು ಪ್ರಾಧ್ಯಾಪಕ ಅಲಿ ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು ಮತ್ತು ಅವರ ಎರಡು ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ಬಳಸಲಾದ ಕೆಲವು ಅಭಿವ್ಯಕ್ತಿಗಳ ಸರಿಯಾದ ತಿಳುವಳಿಕೆಗಾಗಿ ಮತ್ತು ಬಳಸಿದ ಪದಗುಚ್ಛಗಳ ಸಂಕೀರ್ಣತೆಯನ್ನು ಸಮಗ್ರವಾಗಿ ಅರ್ಥಮಾಡಿಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಹರಿಯಾಣ ಡಿಜಿಪಿಗೆ ನಿರ್ದೇಶಿಸಿತ್ತು.

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...