Homeಕರ್ನಾಟಕ‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

- Advertisement -
- Advertisement -

ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಆಸಕ್ತ ಯುವಜನರಿಂದ ಅರ್ಜಿ ಆಹ್ವಾನಿಸಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ; ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್‌ ಅವಧಿಯಲ್ಲಿ ಸ್ಕಾಲರ್‌ಶಿಪ್‌ ಸಿಗಲಿದೆ. ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕ್ರಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ.

ಮೊಬೈಲ್‌ ಜರ್ನಲಿಸಮ್, ವೆಬ್‌ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್‌ಲೈನ್‌ ಜರ್ನಲಿಸಮ್‌ನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್ ಒಳಗೊಂಡಿದೆ.

ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್‌ನಲ್ಲಿ ಈ ವಸತಿಸಹಿತ (ರೆಸಿಡೆನ್ಷಿಯಲ್) ಕೋರ್ಸ್‌ ನಡೆಯಲಿದೆ. ಕ್ಯಾಂಪಸ್‌ನಲ್ಲಿ ಸುಸಜ್ಜಿತ ವಸತಿ, ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌ ವ್ಯವಸ್ಥೆ ಇದೆ. ವೃತ್ತಿಪರ ಮೆಂಟರಿಂಗ್, ಕೌನ್ಸಲಿಂಗ್ ವ್ಯವಸ್ಥೆಯ ಯುವಜನ ಸ್ನೇಹಿ ವಾತಾವರಣದಲ್ಲಿ ಕೋರ್ಸ್‌ ನಡೆಯಲಿದೆ.

ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ಕಳೆದ ಹದಿನೈದು ವರ್ಷಗಳಿಂದ ಗುಣಮಟ್ಟದ ಮಾಧ್ಯಮ ಶಿಕ್ಷಣವನ್ನು ನೀಡುತ್ತಿದೆ. ಅವಕಾಶ ವಂಚಿತ ಗ್ರಾಮೀಣ, ಅಂಚಿನ ಸಮುದಾಯಗಳ ಯುವಜನರಿಗೆ ಶಿಕ್ಷಣ ನೀಡುವುದು ಮತ್ತು ಆ ಮೂಲಕ ಅವರ ಸಾಮಾಜಿಕ ಚಲನೆಯಲ್ಲಿ ಭಾಗಿಯಾಗುವುದು ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್‌ನ ಮುಖ್ಯ ಗುರಿಯಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ತರಗತಿಗಳು ಆರಂಭವಾಗುತ್ತವೆ.

ಆಸಕ್ತರು https://forms.gle/JFSS5Kzvs4DhVoco9 ಈ ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ 9945065060 / 9036602022 ಅಥವಾ [email protected] ಮೂಲಕ ಸಂಪರ್ಕಿಸಬಹುದು.

ಪ್ರಕಟಣೆ: ದಯಾನಂದ ಅಧ್ಯಾಪಕರು ಹಾಗೂ ಸಂಯೋಜಕರು, ಜರ್ನಲಿಸಮ್ ಕೋರ್ಸ್, ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...