Homeಮುಖಪುಟಬಿಹಾರ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿಗೆ ಗುಂಡಿಕ್ಕಿ ಹತ್ಯೆ: ಗ್ಯಾಂಗ್ ವಾರ್‌ ಶಂಕೆ

ಬಿಹಾರ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿಗೆ ಗುಂಡಿಕ್ಕಿ ಹತ್ಯೆ: ಗ್ಯಾಂಗ್ ವಾರ್‌ ಶಂಕೆ

- Advertisement -
- Advertisement -

ಬಿಹಾರದ ಬಕ್ಸಾರ್ ಜಿಲ್ಲೆಯ ವಿಚಾರಣಾಧೀನ ಕೈದಿ ಚಂದನ್ ಕುಮಾರ್ ಅಲಿಯಾಸ್ ಚಂದನ್ ಮಿಶ್ರಾ ಅವರನ್ನು ಗುರುವಾರ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿದೆ.

ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಚಂದನ್ ಕುಮಾರ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದರು. ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಾಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಘಟನೆಯನ್ನು ದೃಢಪಡಿಸಿದ ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಾರ್ತಿಕೇಯ ಶರ್ಮಾ, “ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದನ್ ಕುಮಾರ್ ಅವರನ್ನು ಪಾಟ್ನಾದ ಬೇವೂರ್ ಕೇಂದ್ರ ಜೈಲಿನಲ್ಲಿ ಇರಿಸಲಾಗಿತ್ತು. ಅಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ, ಪೆರೋಲ್ ಮೇಲೆ ಬಿಡುಗಡೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿಸಿದ್ದಾರೆ.

ಗ್ಯಾಂಗ್‌ಗಳ ನಡುವಿನ ವೈಷಮ್ಯವೇ ಕೊಲೆಗೆ ಕಾರಣ ಎಂದು ನಂಬಲಾಗಿದೆ. ಹತ್ಯೆಯಲ್ಲಿ ಭಾಗಿಯಾದವರ ಗುರುತನ್ನು ಪತ್ತೆ ಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿಯನ್ನು ಹಾಡಹಗಲೇ ಹತ್ಯೆ ಮಾಡಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ, ವಕೀಲ ಜಿತೇಂದ್ರ ಕುಮಾರ್ ಮೆಹ್ತಾ ಮತ್ತು ಮರಳು ವ್ಯಾಪಾರಿ ರಾಮಕಾಂತ್ ಯಾದವ್ ಇತ್ತೀಚೆಗಷ್ಟೆ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದರು.

ಗುತ್ತಿಗೆ ಹಂತಕರನ್ನು ಮಟ್ಟ ಹಾಕಲು ಬಿಹಾರ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಕಾರ್ಯನಿರ್ವಹಿಸುತ್ತಿದೆ. ಇದರಡಿ ಗುತ್ತಿಗೆ ಹಂತಕರ ಡೇಟಾ ಬ್ಯಾಂಕ್ ನಿರ್ವಹಿಸಲು ಪ್ರತ್ಯೇಕ ವಿಭಾಗ ಸ್ಥಾಪಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ಪ್ರಧಾನ ಕಚೇರಿ) ಕುಂದನ್ ಕೃಷ್ಣನ್, “ಕೆಲವು ಯುವಕರು ಹಣಕ್ಕಾಗಿ ಗುತ್ತಿಗೆ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಗುತ್ತಿಗೆ ಹಂತಕರ ಮೇಲೆ ನಿಗಾ ಇಡಲು ಹೊಸ ಘಟಕವನ್ನು ರಚಿಸಲಾಗಿದೆ. ಭವಿಷ್ಯದಲ್ಲಿ ಅವರ ಚಟುವಟಿಕೆಗಳನ್ನು ಪರಿಶೀಲಿಸಲು ಗುತ್ತಿಗೆ ಹಂತಕರ ಡೇಟಾ ಬ್ಯಾಂಕ್ ಸ್ಥಾಪಿಸಲಾಗುವುದು ಎಂದಿದ್ದಾರೆ.

ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ; ಬಾಲಕಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...