Homeಮುಖಪುಟಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚುನಾವಣೆ...

ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚುನಾವಣೆ ಆಯೋಗ

- Advertisement -
- Advertisement -

ಪಾಟ್ನಾ: ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಪರಿಷ್ಕರಣೆ (SIR) ನಡೆಸುತ್ತಿದೆ.  ಈಗಾಗಲೇ 90.12% ಮತದಾರರ ನಮೂನೆ ಅರ್ಜಿಗಳು ಬಂದಿವೆ ಎಂದು ಆಯೋಗ ಹೇಳಿಕೊಂಡಿದೆ. ಅಲ್ಲದೆ, 36 ಲಕ್ಷಕ್ಕೂ ಹೆಚ್ಚು ಜನರು ‘ಅವರ ವಿಳಾಸಗಳಲ್ಲಿ ವಾಸವಿಲ್ಲ’ವೆಂದೂ ಹೇಳಿದೆ. ಇದು, ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದ್ದು, ನಿರ್ದಿಷ್ಟ ವರ್ಗದ ಜನತೆಯನ್ನು ಚುನಾವಣೆ ಕಣದಿಂದ ದೂರುವಿಡುವುದು ಈ ಕ್ರಮದ ಉದ್ದೇಶವೆಂದು ಆರೋಪಿಸಲಾಗುತ್ತಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಗುಡುವು ಇದೇ ಜುಲೈ 25ರಣದಯ ಅಂತ್ಯವಾಗುತ್ತದೆ. ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ಜೂನ್ 24ರಂದು ಆಯೋಗವು ಆದೇಶಿಸಿತ್ತು. ಜೂನ್ 25ರಿಂದ ಪ್ರಕ್ರಿಯೆ ಆರಂಭವಾಯಿತು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರು ತಮ್ಮ ಪೌರತ್ವ ಮತ್ತು ಬಿಹಾರದ ನಿವಾಸಿಗಳು ಎಂಬುದನ್ನು ಸಾಬೀತು ಮಾಡಬೇಕೆಂಬುದು ಆಯೋಗ ಹೊರಡಿಸಿದ್ದ ಆದೇಶದ ಸಾರವಾಗಿತ್ತು. ಆಯೋಗದ ಪೌರತ್ವ ಪರಿಷ್ಕರಣೆ ಮಾದರಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದಾಗ್ಯೂ, ಎಸ್‌ಐಆರ್‌ ಮುಂದುವರೆಸಲು ಅನುಮತಿ ನೀಡಿದ ನ್ಯಾಯಾಲಯವು, ಆಧಾರ್‌ ಕಾರ್ಡ್‌ ರೀತಿಯ ಗುರುತಿನ ಚೀಟಿಗಳನ್ನು ಪುರಾವೆಗಳಾಗಿ ಪರಿಗಣಿಸಲು ಸೂಚಿಸಿತ್ತು.

ಬಿಹಾರದಲ್ಲಿ ಒಟ್ಟು 7.8 ಕೋಟಿ ನೋಂದಾಯಿತ ಮತದಾರರಿದ್ದಾರೆ. ಅವರೆಲ್ಲರೂ ಜುಲೈ 25ರೊಳಗೆ ತಮ್ಮ ಗಣತಿ ನಮೂನೆಯನ್ನು ಸಲ್ಲಿಸಬೇಕಿದೆ. ಅವುಗಳನ್ನು ಪರಿಶೀಲಿಸಿ ಆಗಸ್ಟ್‌ 1ರಂದು ಆಯೋಗವು ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಈ ನಡುವೆ, ಶುಕ್ರವಾರ ಮಾಹಿತಿ ಹಂಚಿಕೊಂಡಿರುವ ಆಯೋಗವು ಈವರೆಗೆ 7.11 ಕೋಟಿ (90.12%) ಮತದಾರರು ತಮ್ಮ ನಮೂನೆಗಳನ್ನು ಸಲ್ಲಿಸಿದ್ದಾರೆ. ಅವುಗಳಲ್ಲಿ 6.85 ಕೋಟಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಅವರಲ್ಲಿ, 36.86 ಲಕ್ಷ ಮತದಾರರು (ಒಟ್ಟು ಮತದಾರರಲ್ಲಿ 4.67%) ಅವರ ವಿಳಾಸಗಳಲ್ಲಿ ಇಲ್ಲ. ‘ಬಹುಶಃ’ ಸಾವನ್ನಪ್ಪಿದ್ದಾರೆ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಅವರಲ್ಲಿಯೂ 6,978 ಮತದಾರರನ್ನು ‘ಪತ್ತೆಹಚ್ಚಲು ಸಾಧ್ಯವೇ ಇಲ್ಲ’ ಎಂದು ಹೇಳಿಕೊಂಡಿದೆ.

ಬಹುಶಃ’ ಮರಣ ಹೊಂದಿದ, ಸ್ಥಳಾಂತರಗೊಂಡ ಹಾಗೂ ಪತ್ತೆಯಾಗದ ಮತದಾರರ ನಿಖರ ಸ್ಥಿತಿಗಳನ್ನು ರಾಜಕೀಯ ಪಕ್ಷಗಳ ಜಿಲ್ಲಾ ಅಧ್ಯಕ್ಷರು ಮತ್ತು ಅವರ ಬೂತ್ ಮಟ್ಟದ ಏಜೆಂಟ್‌ಗಳ ನೆರವು ಪಡೆದು, ಜುಲೈ 25ರೊಳಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಆಯೋಗ ಹೇಳಿದೆ.

ಆಗಸ್ಟ್‌ 1ರಂದು ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 1ರವರೆಗೆ ಸಮಯ ಇರುತ್ತದೆ. ಆನಂತರ, ಸೆಪ್ಟೆಂಬರ್ 25ರೊಳಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಚುನಾವಣಾ ಅಧಿಕಾರಿಗಳು ವಿಲೇವಾರಿ ಮಾಡಲಿದ್ದಾರೆ ಎಂದು ಆಯೋಗ ಹೇಳಿಕೊಂಡಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಹೋರಾಟ, ಸವಾಲುಗಳು ಮತ್ತು ನಿರೀಕ್ಷೆಗಳು – ಸಮಗ್ರ ವಿಶ್ಲೇಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...