Homeಕರ್ನಾಟಕಧರ್ಮಸ್ಥಳ ಪ್ರಕರಣ| ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು, ಕಾರಣವೇನು?

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು, ಕಾರಣವೇನು?

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ (ಜು.19) ಆದೇಶಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 39/2025 ಕಲಂ 211(ಎ) ಬಿಎನ್‌ಎಸ್, ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

ಮೇಲೆ ಉಲ್ಲೇಖಿಸಿದ ಪ್ರಕರಣ ಮಾತ್ರವಲ್ಲದೆ, ಅದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್‌ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.

ಈ ನಡುವೆ ಎಸ್‌ಐಟಿಯಿಂದ ಅಧಿಕಾರಿಗಳಾದ ಎಂ.ಎನ್‌ ಅನುಚೇತ್ ಮತ್ತು ಸೌಮ್ಯಲತಾ ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಿಗಳ ಹಿಂದೇಟು, ಕಾರಣವೇನು?

ಎಂ.ಎನ್‌ ಅನುಚೇತ್‌ ಅವರು ಯಾವುದೇ ಭಯದಿಂದ ಧರ್ಮಸ್ಥಳ ಪ್ರಕರಣದ ತನಿಖೆಯಿಂದ ದೂರು ಉಳಿಯುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. 2009ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಅನುಚೇತ್‌ ಅವರು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿಯಾಗಿ (ಎಎಸ್‌ಪಿ) ಮೊದಲ ಭಾರಿಗೆ ಅಧಿಕಾರ ವಹಿಸಿಕೊಂಡಿದ್ದರು. ಅನುಚೇತ್‌ ಅವರು ಪುತ್ತೂರಿನ ಎಎಸ್‌ಪಿಯಾಗಿದ್ದಾಗಲೇ ಸೌಜನ್ಯ ಪ್ರಕರಣ ನಡೆದಿತ್ತು.

ಸೌಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಮತ್ತು ಸಬ್-ಇನ್ಸ್‌ಪೆಕ್ಟರ್ ಯೋಗೇಶ್ ಕುಮಾರ್ ನಾಯಕ್ ಅವರ ಮೇಲೆ ಈಗಾಗಲೇ ಸಾಕ್ಷ ನಾಶದ ಗಂಭೀರ ಆರೋಪಗಳಿವೆ. ಇವರೊಂದಿಗೆ ಆ ವೇಳೆ ತಮ್ಮ ಮೇಲೂ ಆಗಾಗ ಇಂತಹ ಆರೋಪಗಳು ಸ್ಥಳೀಯರಿಂದ ಕೇಳಿಬಂದಿವೆ ಎನ್ನುವ ಕಾರಣ ಮುಂದಿಟ್ಟುಕೊಂಡು ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲು ಅನುಚೇತ್ ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.

ಈ ಹಿಂದೆ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದಲ್ಲಿ ಕಾರ್ಯನಿರ್ವಹಿಸಿದ್ದ ಅನುಚೇತ್‌ ಅವರು, ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇನ್ನೊಬ್ಬರು ಅಧಿಕಾರಿ ಸೌಮ್ಯಲತಾ ಅವರೂ ಎಸ್‌ಐಟಿಯಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಆದರೆ, ಅವರು ಯಾವ ಕಾರಣದಿಂದ ತನಿಖೆಯಿಂದ ದೂರ ಉಳಿಯುತ್ತಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...