Homeಕರ್ನಾಟಕಬಿಜೆಪಿಯ ರಾಜಕೀಯ ದ್ವೇಷಕ್ಕೆ ಬಲಿಯಾದವರಿಗೆ ಈ ತೀರ್ಪು ಸಮಾಧಾನ ತಂದಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ರಾಜಕೀಯ ದ್ವೇಷಕ್ಕೆ ಬಲಿಯಾದವರಿಗೆ ಈ ತೀರ್ಪು ಸಮಾಧಾನ ತಂದಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ವಿಷಯದಲ್ಲಿ ತಮ್ಮ ಪತ್ನಿ ಪಾರ್ವತಿ ಅವರನ್ನು ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ” ಎಂದು ಹೇಳಿದ್ದಾರೆ.

“ಸುಪ್ರೀಂಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ” ಎಂದಿದ್ದಾರೆ.

“ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ” ಎಂದು ಹೇಳಿದ್ದಾರೆ.

“ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾದ ಗೌರವಾನ್ವಿತ ಗವಾಯಿ ಅವರು ಹೇಳಿದ್ದಾರೆ. ‘ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ” ಎಂದು ಅವರು ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸಿದ್ದಾರೆ.

“ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು” ಎಂದು ಸಲಹೆ ನಿಡಿದ್ದಾರೆ.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...