Homeಮುಖಪುಟಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ತಿಂಗಳೊಳಗೆ ಇಬ್ಬರು ಮಲಯಾಳಿ ಮಹಿಳೆಯರು ಶಾರ್ಜಾದಲ್ಲಿ ಸಾವನ್ನಪ್ಪಿದ್ದು, ಎರಡು ಪ್ರಕರಣಗಳಲ್ಲೂ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ

- Advertisement -
- Advertisement -

ಕೇರಳದ ಅಥುಲ್ಯಾ ಶೇಖರ್ ಎಂಬ ಮಹಿಳೆ ಶನಿವಾರ (ಜು.19) ಮುಂಜಾನೆ ಯುಎಇಯ ಶಾರ್ಜಾದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಸಂಬಂಧ ಕೇರಳ ಪೊಲೀಸರು ಆಕೆಯ ಪತಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ತನ್ನ 30ನೇ ಹುಟ್ಟುಹಬ್ಬ ಮತ್ತು ಹೊಸ ಕೆಲಸದ ಮೊದಲ ದಿನದಂದೇ ಅಥುಲ್ಯಾ ಅವರ ಸಾವು ಸಂಭವಿಸಿದೆ ಎಂದು ಅವರ ಕುಟುಂಬವನ್ನು ಉಲ್ಲೇಖಿಸಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಹಿಳೆಯ ತಾಯಿ ನೀಡಿದ ದೂರಿನ ಪ್ರಕಾರ, ಜುಲೈ 18 ಮತ್ತು 19 ರ ನಡುವೆ ಅಥುಲ್ಯಾ ಅವರ ಪತಿ ಸತೀಶ್ ಆಕೆಯ ಕತ್ತು ಹಿಸುಕಿ, ಹೊಟ್ಟೆಗೆ ಒದ್ದು, ತಲೆಗೆ ತಟ್ಟೆಯಿಂದ ಹೊಡೆದು ಹಿಂಸಿದಿದ್ದಾರೆ. ಇದರಿಂದ ಆಕೆ ಸಾವನಪ್ಪಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶಾರ್ಜಾದಲ್ಲಿ ವಾಸಿಸುತ್ತಿರುವ ಅವರ ಸಹೋದರಿ ಮತ್ತು ಸೋದರ ಮಾವನ ಪ್ರಕಾರ, ಅಥುಲ್ಯಾ ಶೇಖರ್ ರೋಲ್ಲಾ ಪ್ರದೇಶದ ತಮ್ಮ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

10 ವರ್ಷದ ಬಾಲಕಿಯ ತಾಯಿ ಅಥುಲ್ಯಾ ಅವರ ಸಾವು ಯುಎಇಯಲ್ಲಿರುವ ಭಾರತೀಯ ಸಮುದಾಯದಲ್ಲಿ ಹೊಸ ಆಘಾತದ ಉಂಟುಮಾಡಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಮತ್ತು ಆಕೆಯ 16 ತಿಂಗಳ ಮಗು ಸಾವಿಗೀಡಾದ ವಾರದೊಳಗೆ ಈ ಘಟನೆ ನಡೆದಿದೆ.

ಜುಲೈ 8ರಂದು ವಿಪಂಚಿಕಾ ಎಂಬ ಮಹಿಳೆ ಗಂಡನ ಚಿತ್ರಹಿಂಸೆ ತಾಳಲಾರದೆ ತನ್ನ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ವಿಪಂಚಿಕಾ ಅವರ ಗಂಡ ನಿತೀಶ್, ಅತ್ತಿಗೆ ನೀತು ಮತ್ತು ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ

ಅಥುಲ್ಯಾ ಪ್ರಕರಣದಲ್ಲಿ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. 2014ರಲ್ಲಿ ಅಥುಲ್ಯಾ ಅವರ ಮದುವೆ ಸಮಯದಲ್ಲಿ ಒಂದು ಬೈಕ್ ಮತ್ತು 43 ಪೌಂಡ್ ಚಿನ್ನ ನೀಡಿದ್ದರೂ, ಸಾಕಷ್ಟು ವರದಕ್ಷಿಣೆ ನೀಡಿಲ್ಲ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ತವರು ಮನೆಯವರು ಆರೋಪಿಸಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ನಿರಂತರ ವರದಕ್ಷಿಣೆ ಕಿರುಕುಳದಿಂದ ಅಥುಲ್ಯಾ ಹಲವು ವರ್ಷಗಳಿಂದ ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ಅನುಭವಿಸುತ್ತಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿದೆ.

ಅಥುಲ್ಯಾ ಪತಿ ಸತೀಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ, 1961 ರ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪ ನಿರಾಕರಿಸಿದ ಪತಿ

ಯುಎಇಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಥುಲ್ಯಾ ಪತಿ ಸತೀಶ್ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದಾರೆ. ಅಥುಲ್ಯಾ ಸಾವಿನಲ್ಲಿ ತನ್ನ ಪಾತ್ರವಿಲ್ಲ ಎಂದು ಹೇಳಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ನಾನು ನಂಬುವುದಿಲ್ಲ. ನಾನು ಕೂಡ ಆಕೆಯ ಸಾವಿಗೆ ಕಾರಣ ಹುಡುಕುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಥುಲ್ಯಾ ತಂದೆ ಕೂಡ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. “ನನ್ನ ಮಗಳು ಆತ್ಮಹತ್ಯೆಯಿಂದ ಸಾಯುತ್ತಾಳೆ ಎಂದು ನಾನು ನಂಬುವುದಿಲ್ಲ. ಆಕೆ ತನ್ನ ಮಗಳೊಂದಿಗೆ ಬಹಳ ಆತ್ಮೀಯ ಸಂಬಂಧವನ್ನು ಹೊಂದಿದ್ದಳು. ಎಲ್ಲವನ್ನೂ ಆಕೆಯ ಜೊತೆ ಹಂಚಿಕೊಳ್ಳುತ್ತಿದ್ದಳು. ಅವಳ ಸಾವು ನಿಗೂಢವಾಗಿದೆ. ಅವಳಿಗೆ ನಿಖರವಾಗಿ ಏನಾಯಿತು ಎಂಬುದನ್ನು ನಾವು ಕಂಡುಹಿಡಿಯಬೇಕಿದೆ” ಎಂದಿದ್ದಾರೆ.

ಅಥುಲ್ಯಾ ಗಂಡನ ಕುರಿತು ಪ್ರತಿಕ್ರಿಯಿಸಿದ ಅವರು, “ಅವನೊಬ್ಬ ಮದ್ಯವ್ಯಸನಿ. ಯಾವಾಗಲೂ ಆಕೆಗೆ ಹಿಂಸೆ ನೀಡುತ್ತಿದ್ದ. ಆದರೆ, ಆಕೆ ಎಲ್ಲವನ್ನೂ ಸಹಿಸಿಕೊಂಡಿದ್ದಳು. ಈ ಹಿಂದೆಯೂ ಸಹ ಅಂತಹ ಸಮಸ್ಯೆಗಳು ಸಂಭವಿಸಿದ್ದವು. ಪೊಲೀಸ್ ಪ್ರಕರಣ ದಾಖಲಾಗಿತ್ತು. ಆದರೆ, ಈಗ ಆಕೆಗೆ ಏನಾಯಿತು ಎಂದು ನಿಖರವಾಗಿ ನಾವು ತಿಳಿದುಕೊಳ್ಳಬೇಕಿದೆ” ಎಂದು ಹೇಳಿದ್ದಾರೆ.

ಅಥುಲ್ಯಾ ಮೈ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಆಕೆಯ ಪತಿ ಪ್ಲಾಸ್ಟಿಕ್ ಸ್ಟೂಲ್ ಎತ್ತಿ ಹೊಡೆಯುತ್ತಿರುವುದನ್ನು ತೋರಿಸುವ ವೀಡಿಯೊಗಳನ್ನು ಆಕೆಯ ಕುಟುಂಬ ಬಿಡುಗಡೆ ಮಾಡಿದೆ.

“ನಾವು ನಾಳೆ ಶಾರ್ಜಾ ಪೊಲೀಸರನ್ನು ಭೇಟಿ ಮಾಡಿ ಪ್ರಕರಣ ದಾಖಲಿಸುವ ಕುರಿತು ಚರ್ಚಿಸುತ್ತೇವೆ. ನಾವು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನೂ ಸಹ ಸಂಪರ್ಕಿಸುತ್ತಿದ್ದೇವೆ” ಎಂದು ಅಥುಲ್ಯಾ ಅವರ ಸೋದರ ಮಾವ ಭಾನುವಾರ ಹೇಳಿರುವುದಾಗಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...