Homeಮುಖಪುಟಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಮೂರನೇ ದಿನವೂ ಸಂಸತ್ತಿನ ಉಭಯ ಸದನಗಳ ಕಲಾಪ ಮುಂದೂಡಿಕೆಯಾಗಿದೆ.

ಆರಂಭದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಕಲಾಪ ಮುಂದೂಡಿಕೆಯಾಗಿದೆ. ನಂತರದ ಬೆಳವಣಿಗೆ ಕಾದು ನೋಡಬೇಕಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಉಭಯ ಸದನಗಳಲ್ಲಿ ಚರ್ಚಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ.

“ಪ್ರತಿಪಕ್ಷಗಳ ಬೇಡಿಕೆಯನ್ನು ಪರಿಗಣಿಸುತ್ತಿಲ್ಲ. ಇದರಿಂದ ಕಲಾಪಕ್ಕೆ ಅಡ್ಡಿಯಾಗುತ್ತಿದೆ. ಕಲಾಪಕ್ಕೆ ತಡೆಯಾದರೆ, ಅದರ ಅತಿದೊಡ್ಡ ಫಲಾನುಭವಿ ಸರ್ಕಾರ” ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ ಬ್ರಿಯಾನ್ ಹೇಳಿದ್ದಾರೆ.

“ಸಂಸತ್ತು ಕಾರ್ಯ ನಿರ್ವಹಿಸದಿದ್ದರೆ ಅದರ ಲಾಭ ಯಾರಿಗೆ? ಸರ್ಕಾರಕ್ಕೆ. ಏಕೆಂದರೆ, ಸಂಸತ್ತಿನ ಜವಾಬ್ದಾರಿ ಸರ್ಕಾರದ ಮೇಲಿದೆ. ಜನರ ಜವಾಬ್ದಾರಿ ಸಂಸತ್ತಿನ ಮೇಲಿದೆ. ಸಂಸತ್ತೇ ಕಾರ್ಯನಿರ್ವಹಿಸದಿದ್ದರೆ ಸರ್ಕಾರಕ್ಕೆ ಯಾವ ಜವಾಬ್ದಾರಿಯೂ ಇರುವುದಿಲ್ಲ” ಎಂದು ಒಬ್ರಿಯಾನ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಂಗಾರು ಅಧಿವೇಶನವು ಒಟ್ಟು 190 ಗಂಟೆಗಳ ಕಾಲ ನಿಗದಿಯಾಗಿದ್ದು, ಅದರಲ್ಲಿ ಶೇ. 70ರಷ್ಟು ಸಮಯವನ್ನು ಸರ್ಕಾರಿ ವ್ಯವಹಾರಗಳಿಗೆ ಮೀಸಲಿಡಲಾಗಿದೆ ಎಂದು ವಿವರಿಸಿದ ಒಬ್ರಿಯಾನ್ ಅವರು, ಬ್ಲಾಗ್ ಪೋಸ್ಟ್‌ಗೆ ಲಿಂಕ್ ಒಂದನ್ನು ಹಂಚಿಕೊಂಡಿದ್ದಾರೆ. ವಿರೋಧ ಪಕ್ಷದ ಸಂಸದರು ಪ್ರಶ್ನೋತ್ತರ ಅವಧಿಗೆ ಅರ್ಧದಷ್ಟು ಪ್ರಶ್ನೆಗಳನ್ನು ಮತ್ತು ಶೂನ್ಯ ವೇಳೆಯ ನೋಟಿಸ್‌ಗಳನ್ನು ನೀಡುತ್ತಾರೆ. ಅವರಿಗೆ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಎತ್ತಲು 31 ಗಂಟೆಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ಒಬ್ರಿಯಾನ್ ವಿವರಿಸಿದ್ದಾರೆ.

ತುರ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಕುರಿತು ಚರ್ಚೆಗಳಿಗೆ ಅವಕಾಶ ನೀಡಲು ಪ್ರತಿ ಸದನದಲ್ಲಿ ಪ್ರತಿ ವಾರ ನಾಲ್ಕು ಗಂಟೆಗಳನ್ನು ಕಾಯ್ದಿರಿಸಬೇಕು ಮತ್ತು ಗಮನ ಸೆಳೆಯುವ ಪ್ರಸ್ತಾಪಕ್ಕಾಗಿ ಹೆಚ್ಚುವರಿಯಾಗಿ ಎರಡು ಗಂಟೆಗಳನ್ನು ಮೀಸಲಿಡಬೇಕು. ಇದು ಸರ್ಕಾರಿ ವ್ಯವಹಾರಗಳಿಗೆ 117 ಗಂಟೆಗಳು ಮತ್ತು ವಿರೋಧ ಪಕ್ಷಗಳಿಗೆ 49 ಗಂಟೆಗಳ ಸಮಯ ನೀಡುತ್ತದೆ. ಈ ಮಾದರಿಯು ‘ಹೆಚ್ಚು ನ್ಯಾಯಯುತ ವ್ಯವಸ್ಥೆ’ ಎಂದು ಒಬ್ರಿಯಾನ್ ಹೇಳಿದ್ದಾರೆ.

ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...