Homeಮುಖಪುಟಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು

ಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು

- Advertisement -
- Advertisement -

ವಿದೇಶಗಳಿಂದ ಪಡೆದ ನಿಧಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಏಕ ಸದಸ್ಯ ಪೀಠ ಪುರ್ಕಾಯಸ್ಥ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ದಾಖಲಿಸಿದ್ದ ಪ್ರಕರಣ ಆಧರಿಸಿ ಪುರ್ಕಾಯಸ್ಥ ವಿರುದ್ದ ಇಡಿ ತನಿಖೆ ಕೈಗೊಂಡಿತ್ತು.

ಫೆಬ್ರವರಿ 2021ರಲ್ಲಿ, ಇಡಿ ನ್ಯೂಸ್‌ಕ್ಲಿಕ್ ಸಂಸ್ಥಾಪಕರು ಮತ್ತು ಉದ್ಯೋಗಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ನಾಲ್ಕು ದಿನಗಳಿಗೂ ಹೆಚ್ಚು ಕಾಲ ಪರಿಶೀಲನೆ ಕೈಗೊಂಡಿತ್ತು. ಪುರ್ಕಾಯಸ್ಥ ಅವರನ್ನು ಮನೆಯಲ್ಲಿ ಬಂಧಿಸಿಡಲಾಗಿತ್ತು.

ನ್ಯೂಸ್‌ಕ್ಲಿಕ್ ವಿರುದ್ಧ ಮಾಡಲಾದ ಆರೋಪಗಳಲ್ಲಿ ಷೇರುಗಳ ಅತಿಯಾದ ಮೌಲ್ಯಮಾಪನ, ಹಣವನ್ನು ಬೇರೆಡೆಗೆ ತಿರುಗಿಸುವುದು ಮತ್ತು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಸೇರಿವೆ.

ಪ್ರಕರಣ ಸಂಬಂಧ ಇಸಿಐಆರ್ ಪ್ರತಿಯನ್ನು ನೀಡುವಂತೆ ಇಡಿಗೆ ನಿರ್ದೇಶನ ನೀಡಲು ಕೋರಿ ನ್ಯೂಸ್‌ಕ್ಲಿಕ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು ಮತ್ತು ಈ ಮಧ್ಯೆ ಯಾವುದೇ ರೀತಿಯ ಬಲವಂತದ ಕ್ರಮದಿಂದ ರಕ್ಷಣೆ ನೀಡುವಂತೆಯೂ ಅದು ಕೋರಿತ್ತು.

ಜೂನ್ 2021ರಲ್ಲಿ ಪುರ್ಕಾಯಸ್ಥ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ನಿರ್ದೇಶಿಸಿತ್ತು.

ಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...