ಕರ್ನಾಟಕದ ಒಂದು ಕ್ಷೇತ್ರದಲ್ಲಿ ಚುನಾವಣಾ ಆಯೋಗವು ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ಕಾಂಗ್ರೆಸ್ ಬಳಿ ಶೇಕಡಾ 100 ರಷ್ಟು ದೃಢವಾದ ಪುರಾವೆ ಇದೆ ಎಂದು ರಾಹುಲ್ ಗಾಂಧಿ ಗುರುವಾರ ಹೇಳಿದರು. “ನಾವು ನಿಮಗಾಗಿ ಬರುತ್ತೇವೆ” ಎಂದು ಚುನಾವಣಾ ಆಯೋಗಕ್ಕೆ ಎಚ್ಚರಿಕೆ ನೀಡಿದರು.
ಚುನಾವಣಾ ಸಮಿತಿಯು ಭಾರತದ ಚುನಾವಣಾ ಆಯೋಗವಾಗಿ ಕಾರ್ಯನಿರ್ವಹಿಸುತ್ತಿಲ್ಲ, ತನ್ನ ಕೆಲಸವನ್ನು ಮಾಡುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಬಿಹಾರ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಆಯ್ಕೆ ಮುಕ್ತವಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ನೀಡಿರುವ ಹೇಳಿಕೆಯ ಬಗ್ಗೆ ಕೇಳಿದಾಗ, ಕರ್ನಾಟಕದ ಒಂದು ಸ್ಥಾನದಲ್ಲಿ ಚುನಾವಣಾ ಆಯೋಗ ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ತಮ್ಮ ಪಕ್ಷವು ಶೇಕಡಾ 100 ರಷ್ಟು ದೃಢ ಪುರಾವೆ ಹೊಂದಿದೆ ಎಂದು ರಾಹುಲ್ ಗಾಂಧಿ ವರದಿಗಾರರಿಗೆ ತಿಳಿಸಿದರು.
“ಶೇಕಡಾ 90 ಅಲ್ಲ, ನಾವು ಅದನ್ನು ನಿಮಗೆ ತೋರಿಸಲು ನಿರ್ಧರಿಸಿದಾಗ, ಅದು ಶೇಕಡ 100 ರಷ್ಟು ಪುರಾವೆಯಾಗಿರುತ್ತದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.
“ನಾನು ಒಂದೊಂದು ಕ್ಷೇತ್ರವನ್ನು ನೋಡಿದೆ, ಲೋಪವನ್ನು ನಾವು ಕಂಡುಕೊಂಡಿದ್ದೇವೆ. ಕ್ಷೇತ್ರದಿಂದ ಕ್ಷೇತ್ರಕ್ಕೆ ಇದೇ ನಡೆಯುತ್ತಿರುವ ನಾಟಕ ಎಂದು ನನಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ. ಸಾವಿರಾರು ಹೊಸ ಮತದಾರರು, ಅವರ ವಯಸ್ಸು ಎಷ್ಟು? ಒಂದು ಕ್ಷೇತ್ರದಲ್ಲಿ 45, 50, 60, 65 ಹಾಗೂ ಸಾವಿರಾರು ಮತ್ತು ಸಾವಿರಾರು. ಇದು ಒಂದು ವಿಷಯವಾದರೆ ಮತದಾರರ ಹೆಸರನ್ನು ಅಳಿಸುವಿಕೆ ಮತ್ತೊಂದು” ಎಂದು ಅವರು ಹೇಳಿದರು.
“ನಾನು ಚುನಾವಣಾ ಆಯೋಗಕ್ಕೆ ಒಂದು ಸಂದೇಶವನ್ನು ಕಳುಹಿಸಲು ಬಯಸುತ್ತೇನೆ, ಇದರಿಂದ ತಪ್ಪಿಸಿಕೊಳ್ಳುತ್ತೀದ್ದೇವೆ ಎಂದು ನೀವು ಭಾವಿಸಿದರೆ, ನಿಮ್ಮ ಅಧಿಕಾರಿಗಳು ಇದರಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಭಾವಿಸಿದರೆ ಅದು ತಪ್ಪು. ನೀವು ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ, ನಾವು ನಿಮಗಾಗಿ ಬರುತ್ತೇವೆ” ಎಂದು ರಾಹುಲ್ ಗಾಂಧಿ ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಭಾರತದಲ್ಲಿ ಚುನಾವಣೆಗಳನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಬುಧವಾರ ಆರೋಪಿಸಿದ್ದರು. ಕರ್ನಾಟಕದ ಲೋಕಸಭಾ ಕ್ಷೇತ್ರವನ್ನು ಅಧ್ಯಯನ ಮಾಡುವ ಮೂಲಕ ತಮ್ಮ ಪಕ್ಷವು ಮತಗಳ ಕಳ್ಳತನದ ವಿಧಾನವನ್ನು ಕಂಡುಹಿಡಿದಿದೆ ಎಂದು ಹೇಳಿಕೊಂಡಿದ್ದರು.
“ಮತಗಳ ಕಳ್ಳತನ”ವನ್ನು ಹೇಗೆ ಮಾಡಲಾಗುತ್ತದೆ ಎಂಬುದರ ಕುರಿತು ಕಪ್ಪು-ಬಿಳಿ ಬಣ್ಣದಲ್ಲಿ ಜನರು ಮತ್ತು ಚುನಾವಣಾ ಆಯೋಗದ ಮುಂದೆ ಇಡುವುದಾಗಿ ರಾಹುಲ್ ಹೇಳಿದರು.
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಮನೆ-ಮನೆಗೆ ಭೇಟಿ ನೀಡಿದಾಗ, ಚುನಾವಣಾ ಅಧಿಕಾರಿಗಳು ಇಲ್ಲಿಯವರೆಗೆ 52 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ವಿಳಾಸಗಳಲ್ಲಿ ಇಲ್ಲ ಎಂದು ಕಂಡುಕೊಂಡಿದ್ದಾರೆ ಎಂದು ಅವರು ಹೇಳಿದರು.
ವಿರೋಧ ಪಕ್ಷವು ಪರಿಷ್ಕರಣಾ ಕಾರ್ಯದ ವಿರುದ್ಧ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ, ಇದು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಹಾರದಲ್ಲಿ ಮತದಾರರನ್ನು ಮತದಾನದಿಂದ ವಂಚಿತಗೊಳಿಸುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದರು.
ಅಹಮಾದಾಬಾದ್ ವಿಮಾನ ಅಪಘಾತದ ಬಳಿಕ ಅನಾರೋಗ್ಯ ರಜೆ ತೆಗೆದುಕೊಂಡಿದ್ದ 112 ಏರ್ ಇಂಡಿಯಾ ಪೈಲಟ್‌ಗಳು



We expect something good.