ಅಶ್ಲೀಲ ಮತ್ತು ವಯಸ್ಕ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರವು ಹಲವಾರು ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ನಿಷೇಧಿಸಿದೆ. ಈ ಕ್ರಮಕ್ಕೆ ಗುರಿಯಾಗಿರುವವರಲ್ಲಿ ಆಲ್ಟ್ ಬಾಲಾಜಿ, ಉಲ್ಲು, ಬಿಗ್ ಶಾಟ್ಸ್ ಅಪ್ಲಿಕೇಶನ್, ಡೆಸಿಫ್ಲಿಕ್ಸ್, ಬೂಮೆಕ್ಸ್, ನವರಸ ಲೈಟ್ ಮತ್ತು ಗುಲಾಬ್ ಅಪ್ಲಿಕೇಶನ್ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸಲು ಮತ್ತು ಆನ್‌ಲೈನ್‌ನಲ್ಲಿ ಸ್ಪಷ್ಟ ವಿಷಯಗಳ ಪ್ರಸರಣವನ್ನು ತಡೆಯಲು ನಡೆಯುತ್ತಿರುವ ಪ್ರಯತ್ನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ವರ್ಷದ ಏಪ್ರಿಲ್‌ನಲ್ಲಿ, ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈಂಗಿಕವಾಗಿ ಸ್ಪಷ್ಟವಾದ ವಿಡಿಯೊಗಳನ್ನು ಸ್ಟ್ರೀಮಿಂಗ್ ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಇಐಎಲ್)ಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಪ್ರಮುಖ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ನೋಟಿಸ್ ನೀಡಿತು.
ಕೇಂದ್ರ ಸರ್ಕಾರವು, ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್, ಉಲ್ಲು, ಆಲ್ಟ್ ಬಾಲಾಜಿ , ಎಕ್ಸ್ (ಹಿಂದೆ ಟ್ವಿಟರ್), ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಮತ್ತು ಇತರರಿಗೆ ನೋಟಿಸ್ ನೀಡಲಾಗಿದೆ.
ರಾಷ್ಟ್ರೀಯ ಮಾಧ್ಯಮಗಳ ಪ್ರಕಾರ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಅರ್ಜಿಯು ಗಮನಾರ್ಹ ಕಳವಳವನ್ನು ವ್ಯಕ್ತಪಡಿಸಿದೆ ಎಂದು ಒಪ್ಪಿಕೊಂಡಿತು. ಆದರೆ, ಈ ವಿಷಯವು ಕಾರ್ಯಾಂಗ ಅಥವಾ ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಒತ್ತಿ ಹೇಳಿದೆ.
ಕಮಲ್ ಹಾಸನ್ ಸಂಸತ್ತಿಗೆ ಪಾದಾರ್ಪಣೆ; ರಾಜ್ಯಸಭಾ ಸಂಸದರಾಗಿ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ


