Homeಅಂತರಾಷ್ಟ್ರೀಯಗಾಝಾ | ಹಸಿವಿನಿಂದ ಮತ್ತೆ ಐವರು ಸಾವು: ಆಹಾರ ಖರೀದಿಸಲು ಕ್ಯಾಮರಾ, ಪ್ರೆಸ್ ಶೀಲ್ಡ್ ಮಾರಾಟಕ್ಕಿಟ್ಟ...

ಗಾಝಾ | ಹಸಿವಿನಿಂದ ಮತ್ತೆ ಐವರು ಸಾವು: ಆಹಾರ ಖರೀದಿಸಲು ಕ್ಯಾಮರಾ, ಪ್ರೆಸ್ ಶೀಲ್ಡ್ ಮಾರಾಟಕ್ಕಿಟ್ಟ ಪತ್ರಕರ್ತ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಬಂಧನದಿಂದ ಆಹಾರ ಸಿಗದೆ ಗಾಝಾದ ಜನರು ಹಸಿವಿನಿಂದ ಸಾಯುತ್ತಿರುವುದು ಮಾನವ ಜಗತ್ತನ್ನು ತಲ್ಲಣಗೊಳಿಸಿದೆ. ಇಸ್ರೇಲ್‌ನ ಈ ಅಮಾವೀಯ ನಡೆಗೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಗಾಝಾದಲ್ಲಿ ಪುಟ್ಟ ಕಂದಮ್ಮಗಳು ಅನ್ನ, ನೀರು ಸಿಗದೆ ಕೊನೆಯುಸಿರೆಳೆಯುತ್ತಿರುವುದು ಹಸಿವಿನ ಭೀಕರತೆಯನ್ನು ತೆರೆದಿಟ್ಟಿದೆ. ಈ ಭೀಕರತೆ ಗಾಝಾದ ಫೋಟೋ ಜರ್ನಲಿಸ್ಟ್ ಒಬ್ಬರು ತನ್ನ ಕ್ಯಾಮಾರ ಮತ್ತು ಪ್ರೆಸ್ ಶೀಲ್ಡ್ ಅನ್ನು ಮಾರಾಟಕ್ಕಿರುವುದು ಸಾಕ್ಷಿಯಾಗಿದೆ.

ಲಿಂಕ್ಡ್ ಇನ್‌ನಲ್ಲಿ ಪೋಸ್ಟ್ ಹಾಕಿರುವ ಗಾಝಾದ ಪತ್ರಕರ್ತ ಮೊಹಮ್ಮದ್ ಅಬು ಔನ್, “ನಾನು ನನ್ನ ಸಾಧನಗಳು ಮತ್ತು ಪ್ರೆಸ್ ಶೀಲ್ಡ್ ಅನ್ನು ಮಾರಾಟ ಮಾಡಲು ಬಯಸಿದ್ದೇನೆ. ಇದರಿಂದ ನಾನು ಮತ್ತು ನನ್ನ ಕುಟುಂಬ ಆಹಾರ ಖರೀದಿಸಬಹುದು” ಎಂದು ಬರೆದುಕೊಂಡಿದ್ದಾರೆ.

ಅಬು ಔನ್ ಅವರ ಲಿಂಕ್ಡ್‌ಇನ್ ಪ್ರೊಫೈಲ್ ಪ್ರಕಾರ, ಅವರು ನ್ಯೂಯಾರ್ಕ್ ಟೈಮ್ಸ್, ಎಬಿಸಿ ನ್ಯೂಸ್, ಸ್ಕೈ ನ್ಯೂಸ್‌ನಂತಹ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಿಗೆ ಕೆಲಸ ಮಾಡಿದ್ದಾರೆ.

“ಕಳೆದ ವರ್ಷದ ಇಸ್ರೇಲ್ ಜೊತೆಗಿನ 11 ದಿನಗಳ ಸಂಘರ್ಷ ಸೇರಿದಂತೆ, ಗಾಝಾದ ಬಗ್ಗೆ ಸುದ್ದಿ ಮಾಡಿ ನನಗೆ ತುಂಬಾ ಅನುಭವವಿದೆ. ನನ್ನ ಕೆಲಸವನ್ನು ಸ್ಟೋರಿಫುಲ್ ಹಂಚಿಕೆ ಮಾಡುತ್ತಿತ್ತು. ನಾನು ಆಗಾಗ ನನ್ನ ವಿಡಿಯೋಗಳನ್ನು ಸ್ಟೋರಿಫುಲ್ ಮೂಲಕ ಹಂಚಿಕೊಳ್ಳುತ್ತಿದ್ದೆ” ಎಂದು ಅಬು ಔನ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ನಾವು ಹಸಿವಿನಿಂದ ಸಾಯುತ್ತಿದ್ದೇವೆ” ಎಂಬ ಅಬು ಔನ್ ಅವರ ಪೋಸ್ಟ್ ಗಾಝಾದಲ್ಲಿ ಹಸಿವಿನಿಂದ ಸಾಯುತ್ತಿರುವ ಕಂದಮ್ಮಗಳ ನೋವನ್ನು ಪ್ರತಿಧ್ವನಿಸಿದೆ.

ಶನಿವಾರ ಗಾಝಾದಲ್ಲಿ (ಜು.26) ಇಸ್ರೇಲ್ ನಡೆಸಿದ ದಾಳಿಯಲ್ಲಿ 71 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 42 ಜನರು ಆಹಾರ ಪಡೆಯಲು ಹೋದಾಗ ಬಲಿಯಾಗಿದ್ದಾರೆ ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇಸ್ರೇಲ್‌ನ ದಿಗ್ಬಂಧನದಿಂದಾಗಿ ಹಸಿವಿನಿಂದ ಶನಿವಾರ ಐವರು ಸಾವನ್ನಪ್ಪಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಯುದ್ಧ ಪ್ರಾರಂಭವಾದಾಗಿನಿಂದ ಅಪೌಷ್ಟಿಕತೆಯಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 127ಕ್ಕೆ ತಲುಪಿದೆ. ಬಲಿಯಾದವರಲ್ಲಿ 85 ಮಕ್ಕಳು ಸೇರಿದ್ದಾರೆ.

2023 ಅಕ್ಟೋಬರ್ 8ರಿಂದ ಇಸ್ರೇಲ್ ನಡೆಸುತ್ತಿರುವ ದಾಳಿಯಿಂದ ಗಾಝಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 59,733ಕ್ಕೆ ತಲುಪಿದ್ದು, 1,44,477 ಜನರು ಗಾಯಗೊಂಡಿದ್ದಾರೆ.

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...