Homeಕರ್ನಾಟಕಲಂಚ ಪ್ರಕರಣ: ಇಡಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರು ಕೋರ್ಟ್

ಲಂಚ ಪ್ರಕರಣ: ಇಡಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರು ಕೋರ್ಟ್

- Advertisement -
- Advertisement -

ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರು ನ್ಯಾಯಾಲಯವು ಜಾರಿ ನಿರ್ದೇಶನಾಲಯದ (ಇಡಿ) ಮಾಜಿ ಅಧಿಕಾರಿ ಲಲಿತ್ ಬಜಾದ್ ಅವರಿಗೆ ಶುಕ್ರವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಬಜಾದ್ ಅವರು ಇಡಿಯ ಬೆಂಗಳೂರು ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಬ್ಯಾಂಕ್ ಖಾತೆ ಸ್ಥಗಿತಗೊಂಡಿರುವುದನ್ನು ತೆರವುಗೊಳಿಸುವ ಭರವಸೆಗೆ ಪ್ರತಿಯಾಗಿ 50 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಮತ್ತು 5 ಲಕ್ಷ ರೂಪಾಯಿ ಸ್ವೀಕರಿಸಿದ್ದರು ಎಂಬುದು ನಿಸ್ಸಂದೇಹವಾಗಿ ಸಾಬೀತಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಧೀಶ ಮಂಜುನಾಥ್ ಸಂಗ್ರೇಷಿ ಹೇಳಿದ್ದಾಗಿ barandbench.com ವರದಿ ಮಾಡಿದೆ.

ಜೈಲು ಶಿಕ್ಷೆಯ ಜೊತೆಗೆ ನ್ಯಾಯಾಲಯವು ಬಜಾದ್ ಅವರಿಗೆ 5.5 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು ವರದಿ ಹೇಳಿದೆ.

“ಅಪರಾಧಿ ಲಲಿತ್ ಬಜಾದ್‌ ಅವರಿಗೆ 1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 [ಲಂಚ] ಅಡಿಯಲ್ಲಿ 3 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು ರೂ. 5 ಲಕ್ಷ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ, ಅವರು 6 ತಿಂಗಳು ಹೆಚ್ಚುವರಿ ಸರಳ ಜೈಲು ಶಿಕ್ಷೆ ಅನುಭವಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಮುಂದುವರಿದು, “ಇದಲ್ಲದೆ, ಅಪರಾಧಿ ಲಲಿತ್ ಬಜಾದ್‌ ಅವರಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384 [ಸುಲಿಗೆ] ಅಡಿಯಲ್ಲಿ 1 ವರ್ಷದ ಸರಳ ಜೈಲು ಶಿಕ್ಷೆ ಮತ್ತು ರೂ. 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ, ಅವರು 1 ತಿಂಗಳ ಅವಧಿಗೆ ಸರಳ ಜೈಲು ಶಿಕ್ಷೆಯನ್ನು ಅನುಭವಿಸಬೇಕು” ಎಂದಿದೆ.

ಎರಡೂ ಶಿಕ್ಷೆಗಳು ಏಕಕಾಲಕ್ಕೆ ಜಾರಿಯಾಗಲಿದೆ. ಹಾಗಾಗಿ, ಬಜಾದ್ ಅವರು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಿದೆ.

ಅಪೊಲೊ ಫಿನ್‌ವೆಸ್ಟ್ ಎಂಬ ಕಂಪನಿಯ ಮಾಲೀಕರಿಂದ ರೂ. 50 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಬಜಾದ್ ಅವರನ್ನು ಜೂನ್ 2021ರಲ್ಲಿ ಸಿಬಿಐ ಬಂಧಿಸಿತ್ತು.

ಬಜಾದ್ ಅವರು ಅಪೊಲೊ ಫಿನ್‌ವೆಸ್ಟ್ ಮಾಲೀಕರನ್ನು ಭೇಟಿಯಾಗಿ ರೂ. 50 ಲಕ್ಷ ಪಾವತಿಸದಿದ್ದರೆ ಚೀನೀ ಸಾಲ ಆ್ಯಪ್ ಹಣ ವರ್ಗಾವಣೆ ಪ್ರಕರಣದಲ್ಲಿ ಅವರ ಕಂಪನಿಯ ಹೆಸರನ್ನು ಹೆಸರಿಸುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ಪ್ರಕರಣ ಒಂದು ದಶಕದ ಕಾಲ ಮುಂದುವರಿಯಲಿದೆ. ಅಲ್ಲಿಯವರೆಗೆ ನಿಮ್ಮ ಖಾತೆ ಸ್ಥಗಿತಗೊಂಡಿರಲಿದೆ ಎಂದು ಹೇಳಿದ್ದರು ಎನ್ನಲಾಗಿದೆ.

ಕೊನೆಗೆ, ಅಪೊಲೊ ಫಿನ್‌ವೆಸ್ಟ್ ಮಾಲೀಕರು ಬಜಾದ್ ಅವರಿಗೆ ರೂ. 5 ಲಕ್ಷ ಪಾವತಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಕೋರ್ಟ್, ಇಡಿ ಅಧಿಕಾರಿ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಮತ್ತು ರೂ. 5 ಲಕ್ಷ ಈಗಾಗಲೇ ಸುಲಿಗೆ ಮಾಡಿದ್ದಾರೆ ಎಂದು ಕಂಡುಕೊಂಡಿತ್ತು.

Courtesy : barandbench.com

ಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...