Homeಕರ್ನಾಟಕಲಕ್ಷ್ಮಣ್‌ ಸವದಿ ಉಪಮುಖ್ಯಮಂತ್ರಿ ಪಟ್ಟಕ್ಕಿಲ್ಲ ಕಂಟಕ. ಹೇಗೆ ಗೊತ್ತೆ?

ಲಕ್ಷ್ಮಣ್‌ ಸವದಿ ಉಪಮುಖ್ಯಮಂತ್ರಿ ಪಟ್ಟಕ್ಕಿಲ್ಲ ಕಂಟಕ. ಹೇಗೆ ಗೊತ್ತೆ?

- Advertisement -
- Advertisement -

ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಹೇಶ್ ಕುಮಟಳ್ಳಿ ವಿರುದ್ಧ ಬಿಜೆಪಿಯಿಂದ ಲಕ್ಷ್ಮಣ್ ಸವದಿಯವರು ಕಳೆದ ಚುನಾವಣೆಯಲ್ಲಿ ಸೋತಿದ್ದರು. ಆದರೂ ಸಹ ಯಡಿಯೂರಪ್ಪನವರು ಅವರನ್ನು ಡಿಸಿಎಂ ಆಗಿ ಮಾಡಿದ್ದರು.

ಲಕ್ಷ್ಮಣ್ ಸವದಿಯವರ ಡಿಸಿಎಂ ಪಟ್ಟ ಉಳಿಯಬೇಕಾದರೆ ಅವರು ವಿಧಾನಸಭೆ ಅಥವಾ ವಿಧಾನ ಪರಿಷತ್‌ನ ಯಾವುದಾದರೊಂದರಲ್ಲಿ ಆರು ತಿಂಗಳೊಳಗಾಗಿ ಸದಸ್ಯರಾಗಬೇಕಿತ್ತು. ಹಾಗಾಗಿ ಅವರು ಉಪಚುನಾವಣೆಯಲ್ಲಿ ಅಥಣಿಯಿಂದ ಟಿಕೆಟ್ ಪಡೆಯಲು ತೀವ್ರವಾಗಿ ಸ್ಪರ್ಧಿಸಿದ್ದರು. ಬಂಡಾಯದ ವಾತವರಣ ನಿರ್ಮಾಣವಾಗಿತ್ತು.

ಆಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಲಕ್ಷ್ಮಣ್ ಸವಧಿಯವರಿಗೆ ಎಂಎಲ್‌ಸಿ ಮಾಡಿ ಡಿಸಿಎಂ ಪಟ್ಟ ಉಳಿಸುವಾಗಿ ಭರವಸೆ ನೀಡಿ ಬಂಡಾಯ ಶಮನ ಮಾಡಿದ್ದರು. ಹಾಗಾಗಿಯೇ ಅಲ್ಲಿ ಮಹೇಶ್ ಕುಮಟಳ್ಳಿ ಸ್ಪರ್ಧಿಸಿದ್ದು ಈಗ ವಿಜಯಿಯಾಗಿದ್ದಾರೆ.

ಇನ್ನು ಲಕ್ಷ್ಮಣ್ ಸವದಿಯವರ ಡಿಸಿಎಂ ಪಟ್ಟ ಉಳಿಯಲು ಸಹ ಕಾಂಗ್ರೆಸ್‌ ನೆರವಾಗಿದೆ. ಹೇಗೆಂದರೆ ಶಿವಾಜಿನಗರದಿಂದ ಎಂಎಲ್‌ಸಿಯಾಗಿದ್ದ ರಿಜ್ವಾನ್‌ ಅರ್ಷದ್‌ ಈ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹಾಗಾಗಿ ಅವರಿಂದ ತೆರವಾಗುವ ಎಂಎಲ್‌ಸಿ ಸ್ಥಾನಕದಿಂದ ಲಕ್ಷ್ಮಣ್‌ ಸವದಿಯವರನ್ನು ಗೆಲ್ಲಿಸಿಕೊಳ್ಳಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ.

ಈಗ ಸದ್ಯ ಬಿಜೆಪಿ ಬಳಿ 117 ಶಾಸಕರ ಬಲವಿದೆ. ಕಾಂಗ್ರೆಸ್‌ 68ಕ್ಕೆ ಕುಸಿದಿದೆ. ಹಾಗಾಗಿ ವಿಧಾನಪರಿಷತ್‌ ಚುನಾವಣೆಯಲ್ಲಿ ಲಕ್ಷ್ಮಣ್ ಸವದಿಯವರನ್ನು ಗೆಲ್ಲಿಸಿಕೊಳ್ಳುವುದು ಬಿಜೆಪಿಗೆ ಕಷ್ಟವಾಗಲಾರದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....