Homeದಲಿತ್ ಫೈಲ್ಸ್ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

- Advertisement -
- Advertisement -

ದಲಿತರ ಯುವಕರ ಮೇಲೆ ಕಳ್ಳತನದ ಆರೋಪ ಹೊರಿಸಿದ ಗುಂಪೊಂದು, ಇಬ್ಬರ ಮೇಲೆ ಹಲ್ಲೆ ನಡೆಸಿ, ಕಂಬಕ್ಕೆ ಕಟ್ಟಿ ಹಾಕಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಜುಲೈ 22, 2025 ರಂದು ಕನ್ವಾರ್ ಮೆರವಣಿಗೆಯಿಂದ ಹಿಂತಿರುಗುತ್ತಿದ್ದಾಗ ಸುಂದರ್ (20) ಮತ್ತು ಶಾನಿ (22) ಎಂದು ಗುರುತಿಸಲಾದ ಇಬ್ಬರು ದಲಿತ ಯುವಕರ ಮೇಲೆ ಗುಂಪೊಂದು ಕಳ್ಳತನದ ಆರೋಪ ಹೊರಿಸಿದೆ. ನಹಾರ್ ಧೇರ್ ಗ್ರಾಮದ ನಿವಾಸಿ ಮತ್ತು ಬಲಿಪಶುಗಳಲ್ಲಿ ಒಬ್ಬರ ತಾಯಿ ಸುನೀತಾ ದೂರು ದಾಖಲಿಸಿದ್ದಾರೆ ಎಂದು ನಖಾಸಾ ಎಸ್‌ಎಚ್‌ಒ ರಜನೀಶ್ ಕುಮಾರ್ ತಿಳಿಸಿದ್ದಾರೆ.

ದೂರುದಾರರ ಪ್ರಕಾರ, ಅವರ ಮಗ ಸುಂದರ್ ಮತ್ತು ಸಂಬಂಧಿ ಶನಿ ಸಂಭಾಲ್‌ನಲ್ಲಿ ಕನ್ವಾರ್ ಯಾತ್ರೆ ವೀಕ್ಷಿಸಲು ಹೋಗುತ್ತಿದ್ದಾಗ ಬರ್ಹೈ ವಾಲಿ ಬಸ್ತಿಯ ಗುಂಪೊಂದು ಅವರನ್ನು ತಡೆದು, ಕಂಬಕ್ಕೆ ಕಟ್ಟಿ, ಕಳ್ಳತನದ ಶಂಕೆಯಲ್ಲಿ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ಯುವಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು 10 ರಿಂದ 12 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ, ಇದರಲ್ಲಿ ಗಲಭೆಗಾಗಿ ಸೆಕ್ಷನ್ 191(2), ಕಾನೂನುಬಾಹಿರ ಸಭೆಗಾಗಿ ಸೆಕ್ಷನ್ 190, ಅಕ್ರಮ ಬಂಧನಕ್ಕಾಗಿ ಸೆಕ್ಷನ್ 127(2), ಉದ್ದೇಶಪೂರ್ವಕವಾಗಿ ನೋವುಂಟುಮಾಡಿದ್ದಕ್ಕಾಗಿ ಸೆಕ್ಷನ್ 115(2), ಶಾಂತಿ ಭಂಗವನ್ನು ಉಂಟುಮಾಡುವ ಉದ್ದೇಶಪೂರ್ವಕ ಅವಮಾನಕ್ಕಾಗಿ ಸೆಕ್ಷನ್ 352 ಮತ್ತು ಕ್ರಿಮಿನಲ್ ಬೆದರಿಕೆಗಾಗಿ ಸೆಕ್ಷನ್ 351(2) ಸೇರಿವೆ.

ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ.

ಸಂಭಾಲ್ ಪೊಲೀಸರು ಪ್ರಕರಣದ ತನಿಖೆ ನಡೆಯುತ್ತಿದೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಟಾಣಿ ಕದ್ದ ಆರೋಪ: ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ, ಮೆರವಣಿಗೆ ಮಾಡಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...