Homeಕರ್ನಾಟಕಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ.

ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದ್ದಾರೆ. ಅಲ್ಲದೆ, ದೂರುದಾರ ತೋರಿಸಿದ ಪ್ರತಿ ಜಾಗಕ್ಕೂ ನಿರ್ದಿಷ್ಟ ಸಂಖ್ಯೆಯ ಗುರುತು ಮಾಡಿದ್ದಾರೆ.

ದೂರುದಾರ ತೋರಿಸುವ 13 ಜಾಗಗಳೂ ಧರ್ಮಸ್ಥಳ ಪೊಲೀಸ್ ಠಾಣೆಯ 1 ಕಿ.ಮೀ ವ್ಯಾಪ್ತಿಯ ಕಾಡಿನಲ್ಲಿವೆ. ಮೊದಲು ತೋರಿಸಿದ ಎಂಟು ಜಾಗಗಳು ನೇತ್ರಾವದಿ ನದಿ ದಂಡೆಯಲ್ಲಿದ್ದರೆ, ಉಳಿದ ನಾಲ್ಕು ಜಾಗಗಳು ನೇತ್ರಾವತಿ ಸೇತುವೆಯಿಂದ ಸ್ನಾನಘಟ್ಟದ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 37ರ ಪಕ್ಕದಲ್ಲಿವೆ. ಒಂದು ಜಾಗ ಮಾತ್ರ ಸ್ನಾನಘಟ್ಟ ಸಮೀಪದ ಕಿರು ಆಣೆಕಟ್ಟೆಯ ಪಕ್ಕದ ಬಯಲು ಜಾಗದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸಾಕ್ಷಿ ದೂರುದಾರ ವಕೀಲರ ತಂಡದ ಜೊತೆಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾಜರಾಗಿದ್ದರು. ಅಲ್ಲಿಂದ 11.50ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ  ದೂರುದಾರ ನೇತ್ರಾವತಿ ನದಿ ಪಕ್ಕದ ಎಂಟು ಜಾಗಗಳನ್ನು ತೋರಿಸಿದರು. ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಿದರು. ಊಟ ಮುಗಿಸಿದ ಬಳಿಕ ಮತ್ತೆ ಅವರನ್ನು ಕಾಡಿನೊಳಗೆ ಕರೆದೊಯ್ದು ಜಾಗದ ಗುರುತಿಸುವಿವೆ ನಡೆಯಿತು.

ಮಧ್ಯಾಹ್ನ ಊಟದ ಬಳಿಕ ದೂರುದಾರ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ನಾಲ್ಕು ಜಾಗಗಳನ್ನು ತೋರಿಸಿದ್ದಾರೆ. ಬಳಿಕ ಸ್ನಾನಘಟ್ಟ ಸಮೀಪದ ಕಿರು ಅಣೆಕಟ್ಟೆಯ ಪಕ್ಕದ ಜಾಗ ತೋರಿಸಿದ್ದಾರೆ. ಒಟ್ಟು 13 ಜಾಗಗಳನ್ನು ತೋರಿಸುವಷ್ಟರಲ್ಲಿ ಸಂಜೆಯಾಗಿತ್ತು. ನೇತ್ರಾವದಿ ನದಿಯ ಆಚೆ ಬದಿಯಲ್ಲೂ ಜಾಗಗಳನ್ನು ಗುರುತಿಸಬೇಕಿತ್ತು. ಕನ್ಯಾಡಿ ಗ್ರಾಮದ ರಸ್ತೆಯ ಮೂಲಕ ಅಲ್ಲಿಗೆ ತೆರಳುವಾಗ ಸಂಜೆ 6 ಗಂಟೆ ಕಳೆದಿತ್ತು. ಜೋರಾಗಿ ಮಳೆಯೂ ಬರುತ್ತಿತ್ತು. ಹಾಗಾಗಿ, ಅಧಿಕಾರಿಗಳು ಜಾಗಗಳ ಹುಡುಕಾಟ ಸ್ಥಗಿತಗೊಳಿಸಿದರು ಎಂದು ವರದಿ ವಿವರಿಸಿದೆ.

ಇಂದು (ಬುಧವಾರ) ಕೂಡ ಜಾಗಗಳ ಗುರುತಿಸುವಿಕೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ. ಇಂದು ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಅಥವಾ ಅಸ್ತಿ ಪಂಜರಗಳಿದ್ದರೆ ಮೇಲೆತ್ತಲಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈ ಬಗ್ಗೆ ಖಚಿತತೆ ಇಲ್ಲ.

ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...