Homeಕರ್ನಾಟಕ'ನೀವೊಬ್ಬ ಕಾಮಿಡಿ ಪೀಸ್': ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್...

‘ನೀವೊಬ್ಬ ಕಾಮಿಡಿ ಪೀಸ್’: ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್ ನ್ಯಾಯಾಧೀಶ ಕಿಡಿ

- Advertisement -
- Advertisement -

ನ್ಯಾಯಾಧೀಶ ಮತ್ತು ವಕೀಲನ ನಡುವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ (ಜುಲೈ 28) ಅಸಾಧಾರಣ ಸಂದರ್ಭಕ್ಕೆ ಸಾಕ್ಷಿಯಾಯಿತು. ತನ್ನ ವಿರುದ್ದದ ವಕೀಲನ ಆರೋಪಗಳ ಕುರಿತು ಸ್ವತಃ ವಿಚಾರಣೆ ನಡೆಸಿದ ನ್ಯಾಯಾಧೀಶ, ವಕೀಲನ ವಿರುದ್ದ ಕಿಡಿಕಾರಿದರು.

ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ ಅವರು ಹಿರಿಯ ವಕೀಲ ಎಸ್‌. ವಂಚಿನಾಥನ್ ವಿರುದ್ದ ವಾಗ್ದಾಳಿ ನಡೆಸಿದ್ದು, ತನ್ನ ವಿರುದ್ದ ಜಾತಿ ಮತ್ತು ಕೋಮು ಪಕ್ಷಪಾತದ ಆರೋಪ ಮಾಡಿರುವ ವಂಚಿನಾಥನ್ ವಿರುದ್ದ ವಿಚಾರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ವಕೀಲ ವಂಚಿನಾಥನ್ ಅವರನ್ನು “ನೀವೊಬ್ಬರು ಕಾಮಿಡಿ ಪೀಸ್” ಎಂದು ಜರೆದರು.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ನ್ಯಾಯಾಲಯದಲ್ಲಿ ಜಾತಿ ಪೂರ್ವಾಗ್ರಹ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ವಂಚಿನಾಥನ್ ಅವರನ್ನು ನ್ಯಾಯಾಲಯಕ್ಕೆ ಕರೆಸಲಾಗಿತ್ತು. ತನ್ನ ವಿರುದ್ದ ಹೇಳಿಕೆ ನೀಡಿರುವ ವಂಚಿನಾಥನ್ ವಿರುದ್ದ ನ್ಯಾಯಮೂರ್ತಿ ಸ್ವಾಮಿನಾಥನ್ ‘ನ್ಯಾಯಾಂಗ ನಿಂದನೆ’ಯ ಆರೋಪ ಹೊರಿಸಿದ್ದಾರೆ ಎಂದು ವರದಿಯಾಗಿದೆ.

‘ಪೀಪಲ್ಸ್ ರೈಟ್ಸ್ ಪ್ರೊಟೆಕ್ಷನ್ ಸೆಂಟರ್’ ಸಂಸ್ಥೆಯ ರಾಜ್ಯ ಸಂಯೋಜಕ ಎಂಬ ಹೆಸರಿನಲ್ಲಿ ಜೂನ್ 14ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರಿಗೆ ಪತ್ರ ಬರೆದಿದ್ದ ವಕೀಲ ವಂಚಿನಾಥನ್ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ಧ ಸೈದ್ಧಾಂತಿಕ ಪಕ್ಷಪಾತ, ನ್ಯಾಯಾಂಗ ನೇಮಕಾತಿಗಳಲ್ಲಿ ಜಾತಿ ಪಕ್ಷಪಾತ ಮತ್ತು ಕೋಮು ಒಲವು ಸೇರಿದಂತೆ 15 ಗಂಭೀರ ಆರೋಪಗಳನ್ನು ಮಾಡಿದ್ದರು. ಇತರ ವಿಷಯಗಳ ಜೊತೆಗೆ, ವಿವಾದಾತ್ಮಕ ಲಾವಣ್ಯ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಧೀಶರ ಪಾತ್ರ ಮತ್ತು ದ್ರಾವಿಡ ಮಾದರಿ ಆಡಳಿತದ ವಿರುದ್ಧ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು ಎಂದು ವರದಿಗಳು ಹೇಳಿವೆ.

ಪತ್ರ ಬರೆಯುವುದರ ಜೊತೆಗೆ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ದ ವಂಚಿನಾಥನ್ ಅವರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಸಂದರ್ಶನಗಳನ್ನು ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಸಂದರ್ಶನವೊಂದರಲ್ಲಿ, ಒಬ್ಬ ದಲಿತ ಹಿರಿಯ ವಕೀಲರನ್ನು ಗುರಿಯಾಗಿಸಲಾಗಿದೆ. ಆದರೆ, ಬ್ರಾಹ್ಮಣ ವಕೀಲರಿಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಸ್ವಾಮಿನಾಥನ್ ವಿರುದ್ದ ವಕೀಲ ವಂಚಿನಾಥನ್ ಆರೋಪ ಮಾಡಿದ್ದರು.

ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ವಕೀಲ ವಂಚಿನಾಥನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಮುಂದೆ ಜುಲೈ 24ರಂದು ವಂಚಿನಾಥನ್ ಹಾಜರಾಗಿದ್ದರು. ಅಲ್ಲಿ, ಸ್ವತಃ ನ್ಯಾಯಮೂರ್ತಿ ಸ್ವಾಮಿನಾಥನ್ ಮತ್ತು ಕೆ. ರಾಜಶೇಖರ್ ಅವರ ಪೀಠ ವಂಚಿನಾಥನ್ ಅವರ ವಿಚಾರಣೆ ನಡೆಸಿದೆ. ಆದರೆ, ನ್ಯಾಯಾಲಯದ ಪ್ರಶ್ನೆಗೆ ಮೌಖಿಕವಾಗಿ ಉತ್ತರಿಸಲು ವಂಚಿನಾಥನ್ ನಿರಾಕರಿಸಿದ್ದರು. ಲಿಖಿತ ಉತ್ತರ ನೀಡುವುದಾಗಿ ಹೇಳಿದ್ದರು. ಹಾಗಾಗಿ, ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಲಾಗಿತ್ತು.

ಜುಲೈ 28ರಂದು, ಅಂದರೆ ಸೋಮವಾರ ವಿಚಾರಣೆ ವೇಳೆ, ನ್ಯಾಯಮೂರ್ತಿ ಸ್ವಾಮಿಥಾನ್ ವಕೀಲ ವಂಚಿನಾಥನ್ ವಿರುದ್ದ ಕಿಡಿಕಾರಿದ್ದಾರೆ. “ನಿಮ್ಮನೆಲ್ಲ ಕ್ರಾಂತಿಕಾರಿಗಳು ಎಂದವರು ಯಾರು? ನೀವೊಬ್ಬರು ಕಾಮಿಡಿ ಪೀಸ್” ಎಂದು ವಕೀಲನ ವಿರುದ್ದ ಹೇಳಿಕೆ ನೀಡಿದ್ದಾರೆ.

“ವಂಚಿನಾಥನ್ ಅವರೇ, ನನ್ನ ತೀರ್ಪುಗಳನ್ನು ಟೀಕಿಸುವ ನಿಮ್ಮ ಹಕ್ಕನ್ನು ನಾನು 100 ಶೇಕಡ ಗೌರವಿಸುತ್ತೇನೆ. ಆದರೆ, ನೀವು ಜಾತಿ ಪಕ್ಷಪಾತವನ್ನು ಆರೋಪಿಸಿದಾಗ ವಿಷಯ ವಿಭಿನ್ನ ತಿರುವು ಪಡೆಯುತ್ತವೆ” ಎಂದಿದ್ದಾರೆ.

ಬಾರ್ & ಬೆಂಚ್ ಪ್ರಕಾರ, “ಕಳೆದ ನಾಲ್ಕು ವರ್ಷಗಳಿಂದ ನೀವು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದೀರಿ. ಆದರೆ, ನಾನು ನಿಮ್ಮ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ, ಕಾರ್ಯ ವಿಧಾನದ ನಿಯಮಗಳ ಬಗ್ಗೆ ನಮಗೆ ಗೊತ್ತಿದೆ. ಆದರೆ, ನಾವು ಮೂರ್ಖರಲ್ಲ. ನಾವು ಈ ಪ್ರಕರಣವನ್ನು ಮುಖ್ಯ ನ್ಯಾಯಾಧೀಶರು ಅಥವಾ ಸೂಕ್ತ ಪೀಠದ ಮುಂದೆ ಇಡುತ್ತೇವೆ. ಇಡೀ ವ್ಯವಸ್ಥೆಯೇ ನಮ್ಮ ವಿರುದ್ಧ ಇದೆ ಎಂದು ಗೊತ್ತಿದೆ. ಆದರೆ, ನಾವು ಭಯಪಡುವುದಿಲ್ಲ, ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ನ್ಯಾಯಾಂಗದ ಸ್ವಾತಂತ್ರ್ಯ ಸರ್ವೋಚ್ಚವಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಹೇಳಿದ್ದಾರೆ.

ಇದೇ ವೇಳೆ, ವಂಚಿನಾಥನ್ ಅವರು ಸುಪ್ರೀಂ ಕೋರ್ಟ್‌ಗೆ ಕಳುಹಿಸಿರುವ ಗೌಪ್ಯ ಪತ್ರಕ್ಕೂ, ಅವರ ವಿರುದ್ದದ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸೋಮವಾರ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಯ ಪೀಠಕ್ಕೆ ಪ್ರಸ್ತಾಪಿಸಲಾಗಿದೆ. ಏಕೆಂದರೆ, ಇದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರಿಗೆ ಸಂಬಂಧಪಡುವುದರಿಂದ, ಸ್ವತಃ ಅವರೇ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ. ಹಾಗಾಗಿ, ಮುಖ್ಯ ನ್ಯಾಯಮೂರ್ತಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದರ ಮೇಲೆ ಪ್ರಕರಣದ ಬೆಳವಣಿಗೆ ನಡೆಯಲಿದೆ.

ಛತ್ತೀಸ್‌ಗಢ| ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸಿದ ಸನ್ಯಾಸಿನಿಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...