Homeಮುಖಪುಟಹರಿಯಾಣದಲ್ಲಿ ಪ್ರದೇಶ ಸಮಿತಿ ಉಸ್ತುವಾರಿ ನಕ್ಸಲ್ ಸದಸ್ಯನ ಬಂಧನ

ಹರಿಯಾಣದಲ್ಲಿ ಪ್ರದೇಶ ಸಮಿತಿ ಉಸ್ತುವಾರಿ ನಕ್ಸಲ್ ಸದಸ್ಯನ ಬಂಧನ

- Advertisement -
- Advertisement -

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹರಿಯಾಣದ ಪ್ರಮುಖ ನಕ್ಸಲ್ ಸದಸ್ಯನನ್ನು ಬಂಧಿಸಿದೆ. ಬಂಧಿತ ನಕ್ಸಲನು  “ದೇಶ ವಿರೋಧಿ ಚಟುವಟಿಕೆಗಳನ್ನು ಉತ್ತೇಜಿಸಲು ಹರಿಯಾಣದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದ” ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಛತ್ತೀಸ್‌ಗಢದ ನಕ್ಸಲ್ ಪ್ರಾಬಲ್ಯ ಬಸ್ತಾರ್ ಜಿಲ್ಲೆಯ ಮೂಲದ ಮತ್ತು ಪ್ರಸ್ತುತ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ನಕ್ಸಲ್ ಸಂಘಟನೆ ವಿಸ್ತರಿಸಲು ವಾಸಿಸುತ್ತಿರುವ ಪ್ರಿಯಾಂಶು ಕಶ್ಯಪ್ ಅವರನ್ನು ಹರಿಯಾಣ ಪೊಲೀಸರು ನೀಡಿದ ಮಾಹಿತಿಯ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಎನ್‌ಐಎ  ತಿಳಿಸಿದೆ.

ಎನ್‌ಐಎ ತಂಡವು ಆರೋಪಿಯಿಂದ ಸಿಮ್ ಕಾರ್ಡ್ ಹೊಂದಿರುವ ಮೊಬೈಲ್ ಫೋನ್, ಒಂದು ಟ್ಯಾಬ್ಲೆಟ್, ಎರಡು ಮೆಮೊರಿ ಕಾರ್ಡ್‌ಗಳು ಮತ್ತು ನಕ್ಸಲ್ ಸಂಘಟನೆ ಸಿಪಿಐ (ಮಾವೋವಾದಿ) ಗೆ ಸಂಬಂಧಿಸಿದ  ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅದು ಹೇಳಿದೆ.

ಬಂಧಿತ ನಕ್ಸಲ್‌ನನ್ನು ಕಶ್ಯಪ್ ನಿಷೇಧಿತ  ಸಂಘಟನೆ ಸಿಪಿಐ (ಮಾವೋವಾದಿ) ಸದಸ್ಯನೆಂದು ಆರೋಪಿಸಲಾಗಿದೆ ಮತ್ತು ರೋಹ್ಟಕ್‌ನಲ್ಲಿ ಅದರ ಪ್ರದೇಶ ಸಮಿತಿಯ ಉಸ್ತುವಾರಿ ವಹಿಸಿಕೊಂಡು ನಕ್ಸಲ್ ಚಟುವಟಿಕೆಗಳನ್ನು ಉತ್ತೇಜಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು ಎಂದು NIA ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉತ್ತರಪ್ರದೇಶ, ಉತ್ತರಾಖಂಡ, ದೆಹಲಿ, ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶಗಳನ್ನು ಒಳಗೊಂಡಿರುವ ಉತ್ತರ ಪ್ರಾದೇಶಿಕ ಬ್ಯೂರೋದಲ್ಲಿ (NRB) ಸಿಪಿಐ (ಮಾವೋವಾದಿ) ಪಕ್ಷದ ನಾಯಕರು ತಮ್ಮ ಪ್ರಭಾವವನ್ನು ಮತ್ತೆ ಬಲಪಡಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಅದು ಹೇಳಿದೆ.

ಇಲ್ಲಿ ತಮ್ಮ ಸಂಘಟನೆಯ ಜಾಲವನ್ನು ವಿಸ್ತರಿಸಲು ಹಲವಾರು ನಕ್ಸಲ್ ಭೂಗತ ಕಾರ್ಯಕರ್ತರು (OGWs) ಸೇರಿದ್ದಾರೆ. ಅವರು ಉತ್ತರ ರಾಜ್ಯಗಳಲ್ಲಿ ಕಾರ್ಯಕರ್ತರನ್ನು ನೇಮಿಸಿಕೊಳ್ಳುವ ಮತ್ತು ಸಂಘಟನೆಯನ್ನು ಬಲಪಡಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು NIA ಹೇಳಿದೆ.

ಭಾರತ ಸರ್ಕಾರದ ವಿರುದ್ಧ ಯುದ್ಧ ನಡೆಸುವ ನಕ್ಸಲರ ಪ್ರಯತ್ನಗಳನ್ನು ಸಕಾರಗೊಳಿಸಲು ಇಲ್ಲಿರುವ ಅನೇಕ ಮುಂಚೂಣಿ ಸಂಘಟನೆಗಳು ಮತ್ತು ವಿದ್ಯಾರ್ಥಿ ಘಟಕಗಳು ಬೆಂಬಲಿಸುತ್ತಿವೆ ಎಂದು ಎನ್‌ಐಎ ಹೇಳಿಕೊಂಡಿದೆ.

ನಕ್ಸಲ್ ಸಂಘಟನೆಯ ಭೂಗತ ಕಾರ್ಯಕರ್ತರು ಸಿಪಿಐ (ಮಾವೋವಾದಿ) ಪಕ್ಷದ ಹಿರಿಯ ನಾಯಕರೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ. ಈ ಭೂಗತ ಕಾರ್ಯಕರ್ತರು ನಕ್ಸಲ್ ಸಂಘಟನೆಯ ಕಾರ್ಯಸೂಚಿಯನ್ನು ಮುಂದುವರಿಸಲು ಕಾರ್ಯನಿರತರಾಗಿದ್ದಾರೆ ಎಂದು NIA ಹೇಳಿದೆ.

ಈ ನಕ್ಸಲ್ ಕಾರ್ಯಕರ್ತರಿಗೆ ಸಿಪಿಐ (ಮಾವೋವಾದಿ)ಯ ಪೂರ್ವ ಪ್ರಾದೇಶಿಕ ಬ್ಯೂರೋದಿಂದ, ವಿಶೇಷವಾಗಿ ಜಾರ್ಖಂಡ್‌ನಿಂದ ಹಣವನ್ನು ಒದಗಿಸಲಾಗುತ್ತಿತ್ತು ಎಂದು NIA ತನಿಖೆಗಳು ಬಹಿರಂಗಪಡಿಸಿವೆ.

ಈ ಹಿಂದೆ ಭಯೋತ್ಪಾದನಾ ನಿಗ್ರಹ ಸಂಸ್ಥೆಯು ಹರಿಯಾಣ ಮತ್ತು ಪಂಜಾಬ್ ರಾಜ್ಯ ಸಂಘಟನಾ ಸಮಿತಿ (ಎಸ್‌ಒಸಿ)ಯ ಉಸ್ತುವಾರಿ ಅಜಯ್ ಸಿಂಘಾಲ್ ಅಲಿಯಾಸ್ ಅಮನ್ ಮತ್ತು ಸಿಪಿಐ (ಮಾವೋವಾದಿ) ಸದಸ್ಯ ವಿಶಾಲ್ ಸಿಂಗ್ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿತ್ತು.

ಲಕ್ಷದ್ವೀಪದ ಬಿತ್ರಾ ದ್ವೀಪದಲ್ಲಿ ಭೂಸ್ವಾಧೀನ ಪ್ರಸ್ತಾವನೆ: ‘ದುರುದ್ದೇಶಪೂರಿತ’ ಯೋಜನೆ ಎಂದ ಲಕ್ಷದ್ವೀಪದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...