ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನ ಮಹದೇವಪುರ ಮತ್ತು ರಾಜಾಜಿನಗರದಲ್ಲಿ
ಮತಗಳ್ಳತನ ಆಗಿರುವ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುರುವಾರ ಬೆಂಗಳೂರಿನ ದಿ ಹಿಲ್ಟನ್ ಹೋಟೆಲ್‌ನಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಆಗಸ್ಟ್ 4ರಂದು ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಪ್ರತಿಭಟನಾ ಪಾದಯಾತ್ರೆ ನಡೆಸಲಿದ್ದಾರೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಲಿದ್ದಾರೆ ಎಂದು ಸಿಎಂ ತಿಳಿಸಿದರು.
ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಆಗಸ್ಟ್ 4ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ.
ಜುಲೈ 24ರಂದು ಸಂಸತ್ತಿನ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ‘ಭಾರೀ ಮತ ಕಳ್ಳತನ’ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದ್ದರು. ಈ ಅಕ್ರಮದ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು ಸಾರ್ವಜನಿಕರ ಮುಂದೆ ಬಹಿರಂಗಪಡಿಸುವುದಾಗಿ ಹೇಳಿದ್ದರು.
ಧರ್ಮಸ್ಥಳದಲ್ಲಿ ಶವ ಶೋಧ: 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ


