HomeUncategorizedಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

- Advertisement -
- Advertisement -

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಯೆಂದು ತೀರ್ಪು ನೀಡಿದೆ.

ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ನಡೆದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು.

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ನಂತರ ಕಣ್ಣೀರು ಒರೆಸಿಕೊಳ್ಳುತ್ತಲೇ ಅವರು ನ್ಯಾಯಾಲಯದಿಂದ ಹೊರನಡೆದರು. ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಲಿರುವ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ನಾಳೆ ಪ್ರಕಟಿಸಲಿದೆ. ಕಾನೂನು ತಜ್ಞರ ಪ್ರಕಾರ, ಈ ಪ್ರಕರಣದಲ್ಲಿ ಕನಿಷ್ಠ 10 ವರ್ಷದಿಂದ ಗರಿಷ್ಠ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ

ಕೆ.ಆರ್ ನಗರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದರು. ಈ ವಿಷಯ ಬಹಿರಂಗವಾಗಬಹುದೆಂದು ಭಯಗೊಂಡು, ಪ್ರಜ್ವಲ್ ಅವರ ತಂದೆ ಎಚ್.ಡಿ ರೇವಣ್ಣ, ತಾಯಿ ಭವಾನಿ ರೇವಣ್ಣ ಮತ್ತು ಇತರ ಒಂಬತ್ತು ಜನರು ಸೇರಿ ಆ ಮಹಿಳೆಯನ್ನು ಅಪಹರಿಸಿದ್ದರು. ಆಕೆಯನ್ನು ಹುಣಸೂರು ಬಳಿ ಇರುವ ತೋಟದ ಮನೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಈ ಅಪಹರಣ ಪ್ರಕರಣದಿಂದಲೇ ಎಚ್.ಡಿ ರೇವಣ್ಣ ಸೇರಿದಂತೆ ಎಂಟು ಜನರು ಜೈಲು ಸೇರಿದ್ದರು. ಭವಾನಿ ರೇವಣ್ಣ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಂತರ ನಿರೀಕ್ಷಣಾ ಜಾಮೀನು ಪಡೆದರು.

ವಿಶೇಷ ತನಿಖಾ ದಳ (SIT) ಸಂತ್ರಸ್ತೆಯನ್ನು ರಕ್ಷಿಸಿ, ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸಿತು. ತನಿಖೆ ಮುಗಿದ ನಂತರ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಪ್ರಜ್ವಲ್ ರೇವಣ್ಣನವರ ಮೊಬೈಲ್‌ನಲ್ಲಿ ಆ ಮಹಿಳೆಯನ್ನು ಬಲವಂತವಾಗಿ ಬೆತ್ತಲುಗೊಳಿಸಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಪತ್ತೆಯಾಯಿತು. ಈ ವಿಡಿಯೋ ಪ್ರಮುಖ ಸಾಕ್ಷಿಯಾಯಿತು. ವಿಧಿವಿಜ್ಞಾನ ಪರೀಕ್ಷೆಯಿಂದ ವಿಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ ಅವರೇ ಎಂದು ದೃಢಪಟ್ಟಿತು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೇ ಎಂದು ಹೇಳಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ಗಳನ್ನು ಹಾಸನ ಕ್ಷೇತ್ರಾದ್ಯಂತ ಹಂಚಲಾಗಿತ್ತು. ಈ ಘಟನೆಯ ನಂತರ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮೇ 31, 2024ರಂದು ಪ್ರಜ್ವಲ್ ರೇವಣ್ಣನವರನ್ನು ಪೊಲೀಸರು ಬಂಧಿಸಿದರು.

ಅಂದಿನಿಂದ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಎಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.

ತೀರ್ಪು ಪ್ರಕಟಿಸಲು ವಿಳಂಬವೇಕೆ?

ವಾಸ್ತವವಾಗಿ, ಈ ಪ್ರಕರಣದ ತೀರ್ಪನ್ನು ಜುಲೈ 30ರಂದೇ ಪ್ರಕಟಿಸಬೇಕಿತ್ತು. ಆದರೆ, ನ್ಯಾಯಾಲಯಕ್ಕೆ ಕೆಲವು ಸ್ಪಷ್ಟೀಕರಣಗಳು ಅಗತ್ಯವಿದ್ದ ಕಾರಣ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಾಲಯವು ಪ್ರಮುಖವಾಗಿ ಎರಡು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು.

  1. ಗೂಗಲ್ ಮ್ಯಾಪ್ ಸಾಕ್ಷ್ಯ: ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರು ಗೂಗಲ್ ಮ್ಯಾಪ್ ಅನ್ನು ಸಾಕ್ಷ್ಯವಾಗಿ ಮಂಡಿಸಿದ್ದರು. ಗೂಗಲ್ ಕಂಪನಿಯ ದೃಢೀಕರಣವಿಲ್ಲದೆ ಸಲ್ಲಿಸಲಾದ ಈ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ವಿಶೇಷ ತನಿಖಾ ತಂಡ (SIT)ವು, ಅತ್ಯಾಚಾರ ನಡೆದ ಸ್ಥಳದ ಅಕ್ಷಾಂಶ ಮತ್ತು ರೇಖಾಂಶವನ್ನು ಮಹಜರ್ ದಾಖಲೆಯಲ್ಲಿ ನಮೂದಿಸಲಾಗಿದೆ. ಈ ವಿವರಗಳನ್ನು ಕ್ಲಿಕ್ ಮಾಡಿದರೆ ಗೂಗಲ್ ಮ್ಯಾಪ್‌ನಲ್ಲಿ ಸ್ಥಳ ಮತ್ತು ಹಳೆಯ ಫೋಟೋಗಳು ಲಭ್ಯವಾಗುತ್ತವೆ. ಆದ್ದರಿಂದ ಇದನ್ನು ದಾಖಲೆಯ ಭಾಗವೆಂದು ಪರಿಗಣಿಸಬೇಕು ಎಂದು ಮನವಿ ಮಾಡಿತು.
  2. ಮೊಬೈಲ್ ಫೋನ್ ಸಾಕ್ಷ್ಯ: ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಸ್ಯಾಮ್‌ಸಂಗ್ ಜೆ 4 ಮೊಬೈಲ್ ಫೋನ್ ಬಗ್ಗೆಯೂ ನ್ಯಾಯಾಲಯ ಸ್ಪಷ್ಟೀಕರಣ ಕೇಳಿತ್ತು. ಇದಕ್ಕೆ ಪ್ರಜ್ವಲ್ ಪರ ವಕೀಲರು, ಆ ಮೊಬೈಲ್ ಅನ್ನು ತನಿಖಾಧಿಕಾರಿಗಳು ಬೇರೊಂದು ಪ್ರಕರಣದಿಂದ ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಅವರು ಅದನ್ನು ವಶಪಡಿಸಿಕೊಂಡಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ವಾದಿಸಿದ್ದರು.

ಈ ಎಲ್ಲಾ ಸ್ಪಷ್ಟೀಕರಣಗಳ ನಂತರ, ನ್ಯಾಯಾಲಯವು ಅಂತಿಮವಾಗಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ:  ಖರ್ಗೆ, ಪ್ರಿಯಾಂಕಾ ಸೇರಿದಂತೆ ವಿರೋಧ ಪಕ್ಷದ ನಾಯಕರಿಂದ 9ನೇ ದಿನವೂ ಪ್ರತಿಭಟನೆ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...