Homeಮುಖಪುಟಛತ್ತೀಸ್‌ಗಢ: ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು

ಛತ್ತೀಸ್‌ಗಢ: ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು

- Advertisement -
- Advertisement -

ಮಾನವ ಕಳ್ಳಸಾಗಣೆ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಕೇರಳದ ಇಬ್ಬರು ಕ್ಯಾಥೋಲಿಕ್ ಸನ್ಯಾಸಿಗಳು ಸೇರಿದಂತೆ ಮೂವರು ವ್ಯಕ್ತಿಗಳಿಗೆ ಛತ್ತೀಸ್‌ಗಢದ ಬಿಲಾಸ್ಪುರದ ವಿಶೇಷ ನ್ಯಾಯಾಲಯವು ಶನಿವಾರ (ಆ.2) ಷರತ್ತುಬದ್ಧ ಜಾಮೀನು ನೀಡಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎನ್‌ಐಎ ನ್ಯಾಯಾಲಯ) ಸಿರಾಜುದ್ದೀನ್ ಖುರೇಷಿ ಅವರು ಪ್ರೀತಿ ಮೇರಿ, ವಂದನಾ ಫ್ರಾನ್ಸಿಸ್ (ಇಬ್ಬರೂ ಕೇರಳದವರು) ಮತ್ತು ಸುಕಮನ್ ಮಾಂಡವಿ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳು ತಮ್ಮ ಪಾಸ್‌ಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ತಲಾ 50,000 ರೂ.ಗಳ ಬಾಂಡ್ ನೀಡಬೇಕು ಮತ್ತು ಇಬ್ಬರು ಶ್ಯೂರಿಟಿಗಳನ್ನು ಒದಗಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದ್ದಾರೆ.

ಸ್ಥಳೀಯ ಬಜರಂಗದಳ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಜುಲೈ 25 ರಂದು ದುರ್ಗ್ ರೈಲು ನಿಲ್ದಾಣದಲ್ಲಿ ಮೂವರನ್ನು ಬಂಧಿಸಲಾಗಿತ್ತು. ದೂರುದಾರರು ಆರೋಪಿಗಳು ನಾರಾಯಣಪುರದ ಮೂವರು ಹುಡುಗಿಯರನ್ನು ಕಳ್ಳಸಾಗಣೆ ಮಾಡಿ ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಶುಕ್ರವಾರ ವಿಚಾರಣೆಯ ನಂತರ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ ಎಂದು ವರದಿಗಾರರೊಂದಿಗೆ ಮಾತನಾಡಿದ ಪ್ರತಿವಾದಿ ವಕೀಲ ಅಮೃತೋ ದಾಸ್ ಹೇಳಿದ್ದರು. ವಿಚಾರಣೆಗಾಗಿ ಪ್ರಾಸಿಕ್ಯೂಷನ್ ಪೊಲೀಸ್ ಕಸ್ಟಡಿಗೆ ಕೋರಿಲ್ಲ ಎಂದು ಅವರು ತಿಳಿಸಿದ್ದರು ಮತ್ತು ಸಂತ್ರಸ್ತರನ್ನು ಈಗಾಗಲೇ ಅವರ ಮನೆಗಳಿಗೆ ಕಳುಹಿಸಲಾಗಿದೆ ಎಂದು ದೃಢಪಡಿಸಿದ್ದರು.

ಈ ಪ್ರಕರಣವು ದೇಶದಾದ್ಯಂತ ಆಕ್ರೋಶ ಮತ್ತು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಗಳು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಮುಂದುವರಿಯುವ ನಿರೀಕ್ಷೆಯಿದೆ.

ಮಣಿಪುರದ ಜಿರಿಬಾಮ್ ಹತ್ಯೆ ಪ್ರಕರಣ: ಎನ್‌ಐಎನಿಂದ ಮತ್ತಿಬ್ಬರು ‘ಕುಕಿ’ ಆರೋಪಿಗಳ ಬಂಧನ – ಉದ್ವಿಗ್ನ ವಾತಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...