Homeಕರ್ನಾಟಕಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

- Advertisement -
- Advertisement -

ಸರ್ಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಶನಿವಾರ ಉಪವಾಸ ಸತ್ಯಾಗ್ರಹ ನಡೆಸಿತು.

ಈ ವೇಳೆ ಮಾತನಾಡಿದ ಸಮನ್ವಯ ಅಧ್ಯಕ್ಷ ಕೆ.ವಿ ಆಚಾರ್ಯ, ಬ್ಯಾಂಕೇತರ ಸರ್ಕಾರಿ ನಿವೃತ್ತರಿಗೆ ಪಿಂಚಣಿ ಪರಿಷ್ಕರಣೆಯನ್ನು ಕಾಲಕಾಲಕ್ಕೆ ಮಾಡಲಾಗುತ್ತಿದೆ. ಆದರೆ, ಬ್ಯಾಂಕ್ ನಿವೃತ್ತರಿಗೆ ಸತತ 30 ವರ್ಷಗಳಿಂದ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರ್ಕಾರ ನಮ್ಮ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ 80 ವರ್ಷ ದಾಟಿರುವ ಪಿಂಚಣಿದಾರರಿಗೆ ಬರುವ ಅಲ್ಪಮೊತ್ತದ ಪಿಂಚಣಿಯಿಂದ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ. ಇಲ್ಲಿ ಉಪಾವಾಸ ಮಾಡುತ್ತಿರುವ ಅನೇಕರು ಡೈಯಾಬಿಟೀಸ್ ಮುಂತಾದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಇಳಿ ವಯಸ್ಸಲ್ಲಿ ನಿಸ್ಸಹಾಯಕರಾಗಿ ನಾವು ಮಾಡುತ್ತಿರುವ ಪ್ರತಿಭಟನೆ ದೇಶದ ಜನಕ್ಕೆ ಮತ್ತು ಅಧಿಕಾರಸ್ಥರಿಗೆ ಕೇಳಬೇಕು ಎಂದು ಅವರು ಭಾವುಕರಾದರು.

ವೇತನದಲ್ಲಿನ ವಿಶೇಷ ಭತ್ಯೆಯ ಜೊತೆಗೆ ಪಿಂಚಣಿಯನ್ನು ಲೆಕ್ಕ ಹಾಕಲು ಪರಿಗಣಿಸುತ್ತಿಲ್ಲ. ಈ ಕಾರಣದಿಂದ, ಪಿಂಚಣಿಯನ್ನು ಸಂಬಳದ ಶೇ.50 ರಿಂದ 30ಕ್ಕೆ ಕಡಿತಗೊಳಿಸಲಾಗಿದೆ. 2012ರಲ್ಲಿ ಹಣಕಾಸು ಸಚಿವಾಲಯದ ಸಲಹೆಯಂತೆ ನೀಡಲಾಗಿರುವ ವೈದ್ಯಕೀಯ ವಿಮಾ ಯೋಜನೆ ಮಾರ್ಗದರ್ಶನವನ್ನು ಕಾರ್ಯಗತಗೊಳಿಸಿಲ್ಲ. ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿದ್ದರು, ಖಾಲಿ ಭರವಸೆ ದೊರೆತಿವೆಯೇ ವಿನಃ ಬೇಡಿಕೆ ಈಡೇರಲಿಲ್ಲ ಎಂದು ಸಮನ್ವಯದ ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದರು.

2024-25ನೆ ಸಾಲಿನ ಎಕ್ಸ್ ಗ್ರೇಶಿಯಾ ಪುನರ್ ಪರಿಶೀಲನೆಯನ್ನು ಇದುವರೆಗೂ ಮಾಡಿಲ್ಲ. ವೇತನ ಒಪ್ಪಂದದ ಪ್ರಕಾರ ಖಾಸಗಿ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಎಕ್ಸ್ ಗ್ರೇಶಿಯಾವನ್ನು ಖಾಸಗಿ ಬ್ಯಾಂಕ್ ಆಡಳಿತಗಳು ಕೊಡುತ್ತಿಲ್ಲ. ಈ ತಾರತಮ್ಯವನ್ನು ಕೇಂದ್ರ ಸರ್ಕಾರ ನಿವಾರಿಸಬೇಕು ಎಂದು ಕೃಷ್ಣಮೂರ್ತಿ ಆಗ್ರಹಿಸಿದರು.

ಒಂದು ಸಾವಿರಕ್ಕಿಂತ ಕಡಿಮೆ ಬ್ಯಾಂಕ್ ನಿವೃತ್ತರು ಈ ಹಿಂದೆ ಪಿಂಚಣಿ ಆಯ್ಕೆ ಮಾಡದ ಕಾರಣ ಪಿಂಚಣಿಯಿಂದ ವಂಚಿತರಾಗಿದ್ದಾರೆ. ಅಂತಹ ಪ್ರಕರಣಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಪರಿಗಣಿಸಲಾಗಿದೆ. ಆದರೆ ಬ್ಯಾಂಕ್ ನಿವೃತ್ತರಿಗೆ ಇದನ್ನು ವಿನಾಕಾರಣ ನಿರಾಕರಿಸಲಾಗುತ್ತಿದೆ. ಎಸ್‌ಬಿಐ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಮೂಲ ವೇತನದ ಶೇ.50 ರಷ್ಟು ಪಿಂಚಣಿಯನ್ನು ಪೂರ್ವಾನ್ವಯಗೊಳಿಸಿ ನಿಗದಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಹೊಸ ಪಿಂಚಣಿ ಯೋಜನೆಯ ಏರಿಳಿತಗಳು ಮತ್ತು ಅನಿಶ್ಚಿತತೆಗಳಿಂದ ರಕ್ಷಿಸುವ ಸಲುವಾಗಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸಬೇಕು. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿಲ್ಲ ಎಂದರೆ ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೃಷ್ಣಮೂರ್ತಿ ಹೇಳಿದರು.

ಧರಣಿಯಲ್ಲಿ ಸಮನ್ವಯದ ಶಿವಪ್ರಕಾಶ್, ಎ.ಎನ್ ಕೃಷ್ಣಮೂರ್ತಿ, ಎಂ.ಆರ್.ಗೋಪಿನಾಥ್ ಮತ್ತಿತರರು ಉಪಸ್ಥಿತರಿದ್ದರು.

ಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...