Homeಕರ್ನಾಟಕಧರ್ಮಸ್ಥಳ: ಶವ ಶೋಧ ಕಾರ್ಯಾಚರಣೆಗೆ ಜಿಪಿಆರ್ ಬಳಸುವಂತೆ ಸುಜಾತಾ ಭಟ್ ಪರ ವಕೀಲ ಆಗ್ರಹ

ಧರ್ಮಸ್ಥಳ: ಶವ ಶೋಧ ಕಾರ್ಯಾಚರಣೆಗೆ ಜಿಪಿಆರ್ ಬಳಸುವಂತೆ ಸುಜಾತಾ ಭಟ್ ಪರ ವಕೀಲ ಆಗ್ರಹ

- Advertisement -
- Advertisement -

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್‌ಗಳನ್ನು (ಜಿಪಿಆರ್) ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಸಾಕ್ಷಿ ದೂರುದಾರ ಈಗಾಗಲೇ ತೋರಿಸಿ ಅಗೆಸಿರುವ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರತದಲ್ಲಿ ಬಳಕೆಯಲ್ಲಿರುವ ಅತ್ಯಾಧುನಿಕ ಜಿಪಿಆರ್ ಬಳಸಿ ಕಳೇಬರಗಳ ಪತ್ತೆ ಕಾರ್ಯಾಚರಣೆ ನಡೆಸುವಂತೆ ಎಸ್‌ಐಟಿ ತಂಡಕ್ಕೆ ಮನವಿ ಮಾಡಿದ್ದಾರೆ.

“ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿರುವ 10 ಸ್ಥಳಗಳಲ್ಲಿ ಅಗೆದಾಗ ಕೆಲವು ಸ್ಥಳಗಳಲ್ಲಿ ಕಳೇಬರಗಳು ಪತ್ತೆಯಾಗಿವೆ ಎಂಬುದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಸಾಕ್ಷಿಯೇ ಹೇಳಿರುವಂತೆ, ಆತ ಧರ್ಮಸ್ಥಳವನ್ನು 2014ರಲ್ಲಿಯೇ ತೊರೆದಿದ್ದಾನೆ. ಅಪಾರ ಮಳೆಯನ್ನು ಕಾಣುವ ಧರ್ಮಸ್ಥಳ ಪ್ರದೇಶದಲ್ಲಿ ಮಣ್ಣು ಒಂದೆಡೆಯಿಂದ ಮತ್ತೊಂದೆಡೆಗೆ ಹರಿದು ಶೇಖರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೇ, ಹಾಗೂ ಸುಮಾರು 11 ವರ್ಷಗಳಲ್ಲಿ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ಕಾರಣಕ್ಕೆ ಸಾಕ್ಷಿದಾರ ತನ್ನ ನೆನಪಿನಲ್ಲಿ ಇಟ್ಟುಕೊಂಡ ಗುರುತುಗಳಲ್ಲಿ ಬದಲಾವಣೆಯಾಗಿರುವ ಸಾಧ್ಯತೆಯೂ ಅಧಿಕವಾಗಿದೆ. ಆದ್ದರಿಂದ, ನಾವು ಈಗಾಗಲೇ (ಜುಲೈ 29ರಂದು) ಮನವಿ ಮಾಡಿಕೊಂಡಂತೆ, ಸದ್ಯ ಅಗೆಯಲಾಗಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಅತ್ಯಾಧುನಿಕ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್‌ಗಳನ್ನು (ಜಿಪಿಆರ್) ಬಳಸುವಂತೆ ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ.

ಹುಲ್ಲುಕಡ್ಡಿಯನ್ನು ತೆರವುಗೊಳಿಸಲು ಉಪಯೋಗಿಸುವ ಯಂತ್ರದಷ್ಟು ಗಾತ್ರವಿರುವ ಈ ಜಿಪಿಆರ್‌ಗಳನ್ನು ಕೆಲವೇ ವ್ಯಕ್ತಿಗಳನ್ನು ನಿಯೋಜಿಸಿ ಬಳಸಬಹುದು. ಆದ್ದರಿಂದ ದೂರುದಾರ ಗುರುತಿಸಿರುವ ಜಾಗಗಳ ಪೈಕಿ ಈಗಾಗಲೇ ಅಗೆದಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಜಿಪಿಆರ್ ಬಳಸಬೇಕು ಎಂದು ವಕೀಲ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ.

ಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...

ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್  ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ...

ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ

ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ...

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...