Homeಕರ್ನಾಟಕದಲಿತರಿಗೆ ಮೀಸಲಿಟ್ಟ ಹಣ ದುರುಪಯೋಗ ಆರೋಪ:  ಸಚಿವ ಶರಣಬಸಪ್ಪರನ್ನು ಸಂಪುಟದಿಂದ ವಜಾಕ್ಕೆ ದಲಿತ ಸೇನೆ ಆಗ್ರಹ

ದಲಿತರಿಗೆ ಮೀಸಲಿಟ್ಟ ಹಣ ದುರುಪಯೋಗ ಆರೋಪ:  ಸಚಿವ ಶರಣಬಸಪ್ಪರನ್ನು ಸಂಪುಟದಿಂದ ವಜಾಕ್ಕೆ ದಲಿತ ಸೇನೆ ಆಗ್ರಹ

- Advertisement -
- Advertisement -

ಬೆಂಗಳೂರು: ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹಲವು ಸರಕಾರಿ ಭೂಮಿಗಳನ್ನು ಒತ್ತುವರಿ ಮಾಡಿ, ದಲಿತರಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸರಕಾರ ಈ ಕೂಡಲೇ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಂಪುಟದಿಂದ ವಜಾಗೊಳಿಸಬೇಕು ಎಂದು ದಲಿತ ಸೇನೆ ಅಧ್ಯಕ್ಷ ಹನುಮಂತ ಜಿ.ಯಳಸಂಗಿ ಆಗ್ರಹಿಸಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಹಿಂದುಳಿದಿರುವ ಯಾದಗಿರಿ ಜಿಲ್ಲೆಯಲ್ಲಿ ಬಹುತೇಕ ಸರಕಾರಿ ಇಲಾಖೆಗಳ ಕಚೇರಿಗಳು ಮತ್ತು ಶಾಲೆಗಳು ಖಾಸಗಿ ಜಾಗಗಳಲ್ಲಿವೆ. ಶರಣಬಸಪ್ಪ ಮತ್ತು ಕುಟುಂಬದವರು ಸರಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡು, ಅದೇ ಜಾಗಗಳಲ್ಲಿ ಸರಕಾರದ ಇಲಾಖೆಗಳಿಗೆ ಲಕ್ಷಾಂತರ ರೂಪಾಯಿಗೆ ಬಾಡಿಗೆ ನೀಡಿ ಅಕ್ರಮವೆಸಗುತ್ತಿದ್ದಾರೆ ಎಂದು ಆರೋಪಿಸಿದರು.

ಬಡವರಿಗಾಗಿ ಮೀಸಲಿಟ್ಟ ಎರಡು ಎಕರೆ ಜಮೀನಿನಲ್ಲಿ ಕಾನೂನು ಬಾಹಿರವಾಗಿ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿದ್ದಲ್ಲದೆ, ಸದರಿ ಜಮೀನಿನಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ತಾವೇ ಮಾಲಕರಂತೆ ಬೇರೆಯವರಿಗೆ ಮಾರಾಟ ಮಾಡಿದ್ದಾರೆ. ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು, ಸಚಿವರನ್ನು ಜನರು ಪ್ರಶ್ನೆ ಮಾಡಲಾಗದಂತ ಪರಿಸ್ಥಿತಿಯನ್ನು ಸೃಷ್ಟಿಸಿದ್ದಾರೆ.  ಸಣ್ಣ ಮತ್ತು ಮಧ್ಯಮ ವರ್ಗಗಳ ಸಮಗ್ರ ಅಭಿವೃದ್ಧಿ ಯೋಜನೆಯ ಸರ್ವೆ ನಂ.826 ರಲ್ಲಿ 1 ಎಕರೆ 32 ಗುಂಟೆ ಜಮೀನನ್ನು ಕೂಡ ಪಡೆದಿದ್ದು, ಅಲ್ಲಿನ ಎಲ್ಲ ಗಾರ್ಡನ್ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಹನುಮಂತ ದೂರಿದರು.

ಕೊರಚ ಮತ್ತು ಕೊರಮರಿಗೆ ಮೀಸಲಿಟ್ಟ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಅಲ್ಲಿ ಕಟ್ಟಡ ಕಟ್ಟಲಾಗಿದೆ. ಮೂಡಾ ಹಗರಣಕ್ಕಿಂತ ದೊಡ್ಡ ಮಟ್ಟದಲ್ಲಿ ಇಲ್ಲಿ ಅಕ್ರಮ ನಡೆಯುತ್ತಿದ್ದು, ಸಚಿವರ ಕುಟುಂಬ ಗೂಂಡಾಗಿರಿ ಮಾಡುತ್ತಿದ್ದಾರೆ.

ಯಾದಗಿರಿಯ ಯಾವೊಂದು ಸರಕಾರಿ ಸಂಸ್ಥೆಗಳಿಗೆ ಸ್ವಂತ ಜಾಗಗಳಿಲ್ಲ. ಯಾವುದಾದರೊಂದು ಸರಕಾರಿ ಜಾಗದಲ್ಲಿ ಬಡವರು ಗುಡಿಸಲು ಕಟ್ಟಿಕೊಂಡಾಗ ಅದನ್ನು ಎತ್ತಂಗಡಿ ಮಾಡಿಸಿ ಅವರು ಆಕ್ರಮಿಸಿಕೊಳ್ಳುತ್ತಾರೆ. ಎಸ್ಸಿಪಿ-ಟಿಎಸ್ಪಿ ಯೋಜನೆ ಹೆಸರಿನಲ್ಲಿ ಹಣವನ್ನು ಕಬಳಿಸಿರುವ ಶರಣಬಸಪ್ಪ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಸರಕಾರ ಸಚಿವರನ್ನು ಮಂತ್ರಿಮಂಡಲದಿಂದ ಕೈಬಿಡಬೇಕು. ಮುನಿಸಿಪಾಲಿಟಿ ಆಸ್ತಿ ಕಬಳಿಸುವಲ್ಲಿ ಸಹಕರಿಸಿದ ಶಹಾಪೂರ ಪುರಸಭೆಯ ಹಿಂದಿನ ಎಲ್ಲ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಹನುಮಂತ ಯಳಸಂಗಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೇನೆಯ ಉಪಾಧ್ಯಕ್ಷ ಎಂ.ಎ.ಸಿಂದಗಿಕರ್, ಶಾಂತಪ್ಪ ಬಿ.ಸಾಲಿಮನಿ, ಝಾವ್ಹೇದ್ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಎಸ್ಸಿಪಿ-ಟಿಎಸ್ಪಿ ಹಣ ದುರ್ಬಳಕೆ ವಿರುದ್ಧ ಹರಿರಾಮ್ ನೇತೃತ್ವದಲ್ಲಿ ಪಿಐಎಲ್ ಮತ್ತು ಆ.18ಕ್ಕೆ ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...